ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೂದಲಳತೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ
ಒಂದೇ ಸಮಯದಲ್ಲಿ ಟೇಕ್ ಆಫ್ ಗೆ ಬಂದ ಎರಡೂ ವಿಮಾನಗಳು ಇಂಡಿಗೋ ವಿಮಾನ ಸಂಸ್ಥೆಯದ್ದಾಗಿವೆ. ಕೊಲ್ಕತ್ತಾ ಮತ್ತು ಭುವನೇಶ್ವರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನಗಳು ಇವಾಗಿದ್ದವು. ಎರಡೂ ವಿಮಾನಗಳಲ್ಲಿ ನೂರಾರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (kempegowda international airport) ಕೂದಲಳತೆಯ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ. ಟೇಕ್ ಆಫ್ ಆಗುವ ವೇಳೆ ( take off) ಒಂದೇ ದಿಕ್ಕಿನಲ್ಲಿ ಎರಡು ವಿಮಾನಗಳು ಮುಖಾಮುಖಿ ಬಂದಿದ್ದು, ಸ್ವಲ್ಪದರಲ್ಲೆ ಈ ಅನಾಹುತ ತಪ್ಪಿದೆ. ಜನವರಿ 7 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಂದೇ ಸಮಯದಲ್ಲಿ ಟೇಕ್ ಆಫ್ ಗೆ ಬಂದ ಎರಡೂ ವಿಮಾನಗಳು ಇಂಡಿಗೋ ವಿಮಾನ ಸಂಸ್ಥೆಯದ್ದಾಗಿವೆ. ಕೊಲ್ಕತ್ತಾ ಮತ್ತು ಭುವನೇಶ್ವರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನಗಳು (indigo domestic flights) ಇವಾಗಿದ್ದವು. 6E455 ಮತ್ತು 6E246 ಸಂಖ್ಯೆಯ ಇಂಡಿಗೋ ವಿಮಾನಗಳು. ಎರಡೂ ವಿಮಾನಗಳಲ್ಲಿ ನೂರಾರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ಈ ವೇಳೆ ಒಂದೇ ರನ್ ವೇ ಮೇಲೆ ಬಂದ ಪರಿಣಾಮ ಅವು ಪರಸ್ಪರ ಡಿಕ್ಕಿಯಾಗುವ ಸಂಭವವಿತ್ತು. ಇದನ್ನು ತಕ್ಷಣ ಗಮನಿಸಿದ ರಾಡರ್ ಕಂಟ್ರೋಲ್ ರೂಮ್ನವರು ಒಂದು ವಿಮಾನವನ್ನು ಬಲ ಭಾಗಕ್ಕೆ, ಮತ್ತೊಂದು ವಿಮಾನವನ್ನು ಎಡ ಭಾಗಕ್ಕೆ ಕಳಿಸಿ ಅನಾಹುತ ತಪ್ಪಿಸಿದ್ದಾರೆ. ಈ ವೇಳೆ ಬೇರೆ ವಿಮಾನಗಳು ಲ್ಯಾಂಡಿಂಗ್ ಗೆ ಬಾರದ ಕಾರಣ ಅನಾಹುತ ತಪ್ಪಿದೆ. ಇದೀಗ ತಪ್ಪಿದ ಅನಾಹುತ ಕುರಿತು ಹಿರಿಯ ಅಧಿಕಾರಿಗಳು ಸ್ವಷ್ಟನೆ ಕೇಳಿದ್ದಾರೆ. 2 ರನ್ ವೇ ಇದ್ದರೂ ನಿರ್ಲಕ್ಷ್ಯಕ್ಕೆ ಕಾರಣ ಏನು ಅನ್ನೋ ಬಗ್ಗೆ ತನಿಖೆ ನಡೆಯಬೇಕಿದೆ.
Mid-air collision between two flights averted at Bengaluru International Airport
ಜ್ವರ ಬಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವು, ಬೆಂಗಳೂರಿನ ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ ಬೆಂಗಳೂರು: ಜ್ವರ ಬಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವಿಗೀಡಾಗಿದ್ದು, ಆಸ್ಪತ್ರೆಯ ನಿರ್ಲಕ್ಷ್ಯದಿಂದ ಬಾಲಕ ಸಾವನ್ನಪ್ಪಿದ ಆರೋಪ ಕೇಳಿಬಂದಿದೆ. ಬೆಂಗಳೂರಿನ ಮಾತೃ ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ ವ್ಯಕ್ತವಾಗಿದೆ. ವಿವರ್ಧನ್(12) ಎಂಬ ಬಾಲಕ ನಿನ್ನೆ ಬೆಳಗ್ಗೆ10 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದ. ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಮೃತಪಟ್ಟಿದ್ದಾನೆ. ಬೇರೆ ಆಸ್ಪತ್ರೆಗೆ ಸೇರಿಸ್ತೇವೆ ಎಂದು ಕೇಳಿದರೂ ಬಾಲಕನನ್ನು ಡಿಸ್ಚಾರ್ಜ್ ಮಾಡಿಲ್ಲ ಎಂದಿರುವ ಪೋಷಕರು ನ್ಯಾಯ ಸಿಗುವವರೆಗೂ ಮೃತದೇಹವನ್ನ ಪಡೆಯೋದಿಲ್ಲ ಎಂದು ಮಾತೃ ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಇದನ್ನೂ ಓದಿ:
ಶಿರಾಡಿ ರಸ್ತೆ ಬಂದ್ ವಿಚಾರದಲ್ಲಿ ಜಟಾಪಟಿ; ಜನವರಿ 20ಕ್ಕೆ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ನಿರ್ಧಾರ
Published On - 11:03 am, Wed, 19 January 22