ಮಂಗಳವಾರದಿಂದ ಪರಿಷತ್ ಕಲಾಪದಲ್ಲಿ ಕಡ್ಡಾಯ ಭಾಗಿಯಾಗಲೇಬೇಕು ಅಂತ ವಿರೋಧ ಪಕ್ಷದ ಮುಖ್ಯ ಸಚೇತಕ ವಿಪ್ ಜಾರಿಗೊಳಿಸಿದರು

ಈಶ್ವರಪ್ಪ ಅವರು ರಾಷ್ಟ್ರಧ್ವಜ ವಿರುದ್ಧ ಅಡಿರುವ ಮಾತಿಗೆ ಒಂದು ತಾರ್ಕಿಕ ಅಂತ್ಯ ಕಾಣಿಸುವ ಹಟತೊಟ್ಟಂತೆ ಕಾಣುವ ಕಾಂಗ್ರೆಸ್ ಪಕ್ಷ ಶಾಸಕರು ಮತ್ತು ಕಾರ್ಯಕರ್ತರು ಮಂಗಳವಾರ ಕರ್ನಾಟಕದ ರಾಜ್ಯಪಾಲರನ್ನು ಭೇಟಿಯಾಗಲು ನಿರ್ಧರಿಸಿದೆ.

ಮಂಗಳವಾರದಿಂದ ಪರಿಷತ್ ಕಲಾಪದಲ್ಲಿ ಕಡ್ಡಾಯ ಭಾಗಿಯಾಗಲೇಬೇಕು ಅಂತ ವಿರೋಧ ಪಕ್ಷದ ಮುಖ್ಯ ಸಚೇತಕ ವಿಪ್ ಜಾರಿಗೊಳಿಸಿದರು
ಮುಷ್ಕರನಿರತ ಕಾಂಗ್ರೆಸ್ ಸದಸ್ಯರು
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Feb 21, 2022 | 8:56 PM

ಸಚಿವ ಕೆ ಎಸ್ ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿ ವಿಧಾನ ಸೌಧದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿರುವ ಕಾಂಗ್ರೆಸ್ ಶಾಸಕರ ನಿರಶನ ನಾಳೆ ಅಂದರೆ ಮಂಗಳವಾರ ಅಂತ್ಯ ಕಾಣುವುದು ಖಚಿತವಾಗಿದೆ. ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕ (chief whip) ಪ್ರಕಾಶ್ (Praksh Rathod)ರಾಠೋಡ್ ಅವರು ಕಾಂಗ್ರೆಸ್ ಸದಸ್ಯರಿಗೆ (Congress members) ವಿಪ್ ಜಾರಿಗೊಳಿಸಿದ್ದಾರೆ. ಮಂಗಳವಾರದಿಂದ (ಫೆಬ್ರುವರಿ 22) ಶುಕ್ರವಾರದವರೆಗೆ (ಫೆಬ್ರುವರಿ 25) ಕಡ್ಡಾಯವಾಗಿ ವಿಧಾನ ಪರಿಷತ್ ನ ಕಾರ್ಯ ಕಲಾಪದಲ್ಲಿ ಕಡ್ಡಾಯವಾಗಿ ಭಾಗಿಯಾಗಬೇಕೆಂದು ಪ್ರಕಾಶ್ ರಾಠೋಡ್ ವಿಪ್ ಜಾರಿಗೊಳಿಸಿದ್ದಾರೆ.

ಈಶ್ವರಪ್ಪನವರನ್ನು ಮಂತ್ರಿ ಸ್ಥಾನದಿಂದ ಕಿತ್ತೊಗೆಯಬೇಕು ವಿಧಾನಸಭೆಯ ಒಳಗಡೆ ಅಹೋರಾತ್ರಿ ನಿರಶನ ನಡೆಸುತ್ತಿರುವ ಕಾಂಗ್ರೆಸ್ ಶಾಸಕರನ್ನು ಸೋಮವಾರ ವಿಧಾನ ಪರಿಷತ್ ನಲ್ಲಿ ತರಾಟೆಗೆ ತೆಗೆದುಕೊಂಡ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರು, ಕಾಂಗ್ರೆಸ್ ನಾಯಕರು ಧರಣಿ ನಡೆಸುವುದಾದರೆ ಸದನದ ಹೊರಗಡೆ ನಡೆಸಲಿ, ಅವರೇನೇ ಮಾಡಿದರೂ, ಈಶ್ವರಪ್ಪನವರಿಗೆ ರಾಜೀನಾಮೆ ಸಲ್ಲಿಸುವಂತೆ ಹೇಳುವುದಿಲ್ಲ ಎಂದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಹ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಧರಣಿ ಬಗ್ಗೆ ತಮ್ಮ ಅಸಮಾಧಾನ ಹೊರಹಕಿದರು.

ಏತನ್ಮಧ್ಯೆ, ಈಶ್ವರಪ್ಪ ಅವರು ರಾಷ್ಟ್ರಧ್ವಜ ವಿರುದ್ಧ ಅಡಿರುವ ಮಾತಿಗೆ ಒಂದು ತಾರ್ಕಿಕ ಅಂತ್ಯ ಕಾಣಿಸುವ ಹಟತೊಟ್ಟಂತೆ ಕಾಣುವ ಕಾಂಗ್ರೆಸ್ ಪಕ್ಷ ಶಾಸಕರು ಮತ್ತು ಕಾರ್ಯಕರ್ತರು ಮಂಗಳವಾರ ಕರ್ನಾಟಕದ ರಾಜ್ಯಪಾಲರನ್ನು ಭೇಟಿಯಾಗಲು ನಿರ್ಧರಿಸಿದೆ. ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕಾಂಗ್ರೆಸ್ ಪಕ್ಷದ ನಿಯೋಗವೊಂದು ಮಂಗಳವಾರ ಸಾಯಂಕಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಸಚಿವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಲಿದೆ.

ಈಶ್ವರಪ್ಪ ವಿರುದ್ಧ ಕ್ರಮ ಜರುಗಿಸಬೇಕೆಂಬ ಮನವಿಯೊಂದಿಗೆ, ರವಿವಾರ ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಲು ಸಹ ಕಾಂಗ್ರೆಸ್ ರಾಜ್ಯಪಾಲರನ್ನು ಕೋರಲಿದೆ.

ಕೊಲೆಗೆ ಸಂಬಂಧಿಸಿದಂತೆ ಬಸವರಾಜ ಬೊಮ್ಮಾಯಿ ಅವರ ಸಂಪುಟದ ಕೆಲ ಸಚಿವರು ಹೇಳಿಕೆಗಳನ್ನು ನೀಡುತ್ತಿದ್ದಾರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ರಾಜ್ಯ ಪಾಲರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧಾರ ತೆಗೆದುಕೊಂಡಿದೆ.

ಮಂಗಳವಾರದಂದು ಕಾಂಗ್ರೆಸ್ ನಾಯಕರು ವಿಧಾನಸೌಧದಿಂದ ರಾಜಭವನದ ವರೆಗೆ ಪಾದಯಾತ್ರೆ ನಡೆಸಲಿದ್ದಾರೆ.

ಇದನ್ನೂ ಓದಿ:    ಶಿವಮೊಗ್ಗ ಗಲಭೆ ಪ್ರಕರಣ: ಇದು ಪೂರ್ವನಿಯೋಜಿತ ಷಡ್ಯಂತ್ರ; ಎನ್​ಐಎ ಮೂಲಕ ತನಿಖೆಗೆ ಆಗ್ರಹಿಸಿದ ಕೆಎಸ್ ಈಶ್ವರಪ್ಪ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್