
ಬೆಂಗಳೂರು (ಮಾ.24): ಪ್ರಧಾನಿ ನರೇಂದ್ರ ಮೋದಿ(Narendra modi) ಅವರು ನಾಳೆ (ಮಾರ್ಚ್ 24) ವೈಟ್ ಫಿಲ್ಡ್ – ಕೆ. ಆರ್ ಪುರ ನಡುವಿನ ಮೆಟ್ರೋಗೆ ಹಸಿರು ನಿಶಾನೆ ತೋರಲಿದ್ದಾರೆ(Whitefield Metro Inauguration). ಮೆಟ್ರೋ ಲೋಕಾರ್ಪಣೆ ಹಿನ್ನೆಲೆಯಲ್ಲಿ ನವ ವಧುವಿನಂತೆ ವೈಟ್ ಫಿಲ್ಡ್ ಮೆಟ್ರೋ ನಿಲ್ದಾಣವನ್ನು (Namma Metro) ಸಿಂಗಾರ ಮಾಡಲಾಗಿದೆ. ವೈಟ್ ಫೀಲ್ಡ್ ಮೆಟ್ರೋ ಹೊಸ ಮಾರ್ಗ ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಅವರು ವೈಟ್ ಫೀಲ್ಡ್ ನಲ್ಲಿ ಸಮೀಪ ಮಹದೇವಪುರ ಕ್ಷೇತ್ರದ ಸತ್ಯ ಸಾಯಿ ಆಶ್ರಮದಿಂದ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ವರೆಗೂ ಸುಮಾರು 1 ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ. ಇನ್ನು ಮೆಟ್ರೋ ಸುತ್ತಮುತ್ತ 5 ರಸ್ತೆಗಳಲ್ಲಿ ಸಂಚಾರ ನಿರ್ಬಂಧಗೊಳಿಸಲಾಗಿದೆ. ಮಾ.24ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಪೊಲೀಸ್ ಸಿಬ್ಬಂದಿಯಿಂದ ಪ್ರತಿ ಹಂತದಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಗಳಿಂದ ತಪಾಸಣೆ ಮಾಡಲಾಗುತ್ತಿದೆ. ಪ್ರಧಾನಿಗಳಿಂದ ರೋಡ್ ಶೋ ಸಾಧ್ಯತೆ ಹಿನ್ನೆಲೆ ರಸ್ತೆಯುದ್ಧಕ್ಕೂ ಬ್ಯಾರಿಕೇಡ್ ಹಾಕಿ ತಯಾರಿ ನಡೆದಿದೆ. ದಿಣ್ಣೂರ್ ಕ್ರಾಸ್ ನಿಂದ ವೈಟ್ ಫೀಲ್ಡ್ ಮೆಟ್ರೋ ನಿಲ್ದಾಣದವರೆಗೂ ರಸ್ತೆಯ ಎರಡು ಬದಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರಿಗೆ ಮೋದಿ ಸ್ವಾಗತಕ್ಕೆ ಅವಕಾಶ ನೀಡಲಾಗಿದೆ. ರಸ್ತೆಯುದ್ದಕ್ಕೂ ಬಿಜೆಪಿ ಬಾವುಟ ಬ್ಯಾನರ್ ಗಳು ರಾರಾಜಿಸುತ್ತಿವೆ.
ನಾಳೆ ಪ್ರಧಾನಮಂತ್ರಿ ಮೋದಿ ಬೆಂಗಳೂರು ಪ್ರವಾಸ ಜೊತೆಗೆ ವೈಟ್ ಫೀಲ್ಡ್ – ಕೆ ಆರ್ ಪುರ ನಡುವಿನ ಮೆಟ್ರೋ ರೈಲಿಗೆ ಚಾಲನೆ ನೀಡಲಿರುವ ಹಿನ್ನಲೆಯಲ್ಲಿ ವೈಟ್ ಫೀಲ್ಡ್ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ತಡೆಹಿಡಿಯಲಾಗಿದೆ. ಹಾಗೂ ಕೆಲವು ಮಾರ್ಗಗಳ ಸಂಚಾರವನ್ನು ಪೊಲೀಸರು ಬದಲಾವಣೆ ಮಾಡಿದ್ದಾರೆ.
Published On - 3:09 pm, Fri, 24 March 23