AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shama Parveen: ಯಾರು ಶಮಾ ಪರ್ವೀನ್ ಅನ್ಸಾರಿ? ಬೆಂಗಳೂರಿನಿಂದ ಜಿಹಾದಿ ಕೃತ್ಯ ಎಸಗುತ್ತಿದ್ದಾಕೆಯ ಹಿನ್ನೆಲೆ ಇಲ್ಲಿದೆ

ಅಲ್ ಕೈದಾ ಇಂಡಿಯನ್ ಸಬ್ ಕಂಟಿನೆಂಟ್ ಪರ ಬೆಂಗಳೂರಿನಲ್ಲಿದ್ದುಕೊಂಡು ಆನ್​ಲೈನ್ ಮೂಲಕ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಮಾ ಪರ್ವೀನ್ ಅನ್ಸಾರಿಯನ್ನು ಗುಜರಾತ್ ಎಟಿಎಸ್ ಬಂಧಿಸಿದೆ. ಈ ಶಮಾ ಪರ್ವೀನ್ ಮೂಲತಃ ಎಲ್ಲಿಯವಳು, ಬೆಂಗಳೂರಿನಲ್ಲಿದ್ದುಕೊಂಡು ಏನೇನು ಕೃತ್ಯ ಎಸಗಿದ್ದಳು, ಈಕೆಗೆ ಪಾಕಿಸ್ತಾನದ ಯಾವೆಲ್ಲ ಸಂಸ್ಥೆಗಳ ಜತೆ ನಂಟಿತ್ತು ಎಂಬಿತ್ಯಾದಿ ಎಲ್ಲ ರಹಸ್ಯಗಳನ್ನು ಗುಜರಾತ್ ಎಟಿಎಸ್ ಭೇದಿಸಿದೆ. ವಿವರ ತಿಳಿಯಲು ಮುಂದೆ ಓದಿ.

Shama Parveen: ಯಾರು ಶಮಾ ಪರ್ವೀನ್ ಅನ್ಸಾರಿ? ಬೆಂಗಳೂರಿನಿಂದ ಜಿಹಾದಿ ಕೃತ್ಯ ಎಸಗುತ್ತಿದ್ದಾಕೆಯ ಹಿನ್ನೆಲೆ ಇಲ್ಲಿದೆ
ಶಮಾ ಪರ್ವೀನ್ ಅನ್ಸಾರಿ
Ganapathi Sharma
|

Updated on: Jul 31, 2025 | 9:32 AM

Share

ಬೆಂಗಳೂರು, ಜುಲೈ 31: ಅಲ್ ಕೈದಾ (Al-Qaeda) ಉಗ್ರ ಸಂಘಟನೆ ಪರ ಬೆಂಗಳೂರಿನಿಂದ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಮಾ ಪರ್ವೀನ್ ಅನ್ಸಾರಿಯನ್ನು (Shama Parveen Ansari) ಗುಜರಾತ್ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗುಜರಾತ್ ಎಟಿಎಸ್ ಆಕೆಯನ್ನು ಬಂಧಿಸಿದ್ದಲ್ಲದೆ, ಆಕೆಯ ಉಗ್ರ ಚಟುವಟಿಕೆ ಕುರಿತಾದ ಅನೇಕ ರಹಸ್ಯ ಮಾಹಿತಿಗಳನ್ನು ಬಯಲಿಗೆಳೆದಿದೆ. ಶಮಾ ಪರ್ವೀನ್ ಅನ್ಸಾರಿ ಜಾರ್ಖಂಡ್ ಮೂಲದವಳಾಗಿದ್ದು, ಪ್ರಸ್ತುತ ಬೆಂಗಳೂರಿನ ಆರ್‌ಟಿ ನಗರದಲ್ಲಿ ತಾಯಿ, ಸಹೋದರ ಜೊತೆ ವಾಸವಿದ್ದಳು. ಇಲ್ಲಿದ್ದುಕೊಂಡೇ ಆನ್​ಲೈನ್ ಮೂಲಕ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದಳು. ಪ್ರಚೋದನಾಕಾರಿ ಸಂದೇಶಗಳನ್ನು ಹಂಚುತ್ತಿದ್ದಳು.

ಭಾರತದ ವಿರುದ್ಧ ಸಶ್ತ್ರ ಕ್ರಾಂತಿಗೆ ಕರೆ!

ಎಟಿಎಸ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಶಮಾ ಪರ್ವೀನ್ ಅನ್ಸಾರಿ ಭಾರತ ಸರ್ಕಾರದ ವಿರುದ್ಧ ‘ಸಶಸ್ತ್ರ ಕ್ರಾಂತಿ ಅಥವಾ ಜಿಹಾದ್’ಗೆ ಕರೆ ನೀಡುವ ವಿಷಯವನ್ನು ಪ್ರಸಾರ ಮಾಡಲು ಡಿಜಿಟಲ್ ವೇದಿಕೆಗಳನ್ನು ಬಳಸುತ್ತಿದ್ದಳು. ಆಕೆಯ ಚಟುವಟಿಕೆಗಳು ಕೇವಲ ಸೈದ್ಧಾಂತಿಕ ಪ್ರಚಾರಕ್ಕಷ್ಟೇ ಸೀಮಿತವಾಗಿರಲಿಲ್ಲ. ಧಾರ್ಮಿಕ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಪ್ರಚೋದನಕಾರಿ ಸಂದೇಶಗಳನ್ನು ಹರಡಲು ಆಕೆ ಸಾಮಾಜಿಕ ಮಾಧ್ಯಮವನ್ನು ಸಕ್ರಿಯವಾಗಿ ಬಳಸುತ್ತಿದ್ದಳು ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಯೋತ್ಪಾದಕಿಗೆ 10 ಸಾವಿರಕ್ಕೂ ಹೆಚ್ಚು ಫಾಲೋವರ್ಸ್

ಶಮಾ ಪರ್ವೀನ್ ಅನ್ಸಾರಿ ಎರಡು ಫೇಸ್‌ಬುಕ್ ಪುಟಗಳು ಮತ್ತು ಒಂದು ಇನ್‌ಸ್ಟಾಗ್ರಾಮ್ ಖಾತೆಯನ್ನು ನಿರ್ವಹಿಸುತ್ತಿದ್ದಳು. ಒಟ್ಟಾರೆಯಾಗಿ 10,000 ಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಳು. ಈ ವೇದಿಕೆಗಳ ಮೂಲಕ, ಅಲ್ ಕೈದಾ ಮತ್ತು ಇತರ ಮೂಲಭೂತವಾದಿ ಪ್ರಚಾರಕರಿಗೆ ಸಂಬಂಧಿಸಿದ ವಿಷಯವನ್ನು ಹಂಚಿಕೊಂಡಿದ್ದಳು ಎಂದು ಎಟಿಎಸ್‌ನ ಅಧಿಕೃತ ಪ್ರಕಟಣೆ ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ‘ಪಿಟಿಐ’ ವರದಿ ಮಾಡಿದೆ.

ಉಗ್ರರ ಭಾಷಣಗಳನ್ನು ಶೇರ್ ಮಾಡುತ್ತಿದ್ದ ಪರ್ವೀನ್

ಎಕ್ಯೂಐಎಸ್ (ಅಲ್ ಕೈದಾ ಇಂಡಿಯನ್ ಸಬ್ ಕಂಟಿನೆಂಟ್) ನಾಯಕಿ ಮೌಲಾನಾ ಅಸಿಮ್ ಉಮರ್, ಹತ್ಯೆಗೀಡಾದ ಅಲ್-ಕೈದಾ ಉಗ್ರ ಅನ್ವರ್ ಅಲ್-ಅವ್ಲಾಕಿ ಮತ್ತು ಲಾಹೋರ್‌ನ ಲಾಲ್ ಮಸೀದಿಯ ಮೌಲಾನಾ ಅಬ್ದುಲ್ ಅಜೀಜ್ ಭಾಷಣಗಳು ಮತ್ತು ವೀಡಿಯೊಗಳನ್ನು ಪರ್ವೀನ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಳು. ಘಜ್ವಾ-ಎ-ಹಿಂದ್‌ನಂತಹ ವಿಷಯಗಳನ್ನು ಪ್ರಚಾರ ಮಾಡಿದ್ದಳು.

ಕಾಫಿರ್​ಗಳ ಮೇಲೆ ದಾಳಿಗೆ, ಸರ್ಕಾರ ಉರುಳಿಸಲು ಕರೆ

ಕಾಫಿರ್‌ಗಳ ಮೇಲೆ ದಾಳಿಗೆ ಕರೆ ನೀಡಿ ಮತ್ತು ಭಾರತ ಸರ್ಕಾರವನ್ನು ಉರುಳಿಸಲು ಪ್ರತಿಪಾದಿಸಿದ ಸಂದೇಶಗಳನ್ನೂ ಹಂಚಿಕೊಂಡಿದ್ದಳು.

ಪಾಕಿಸ್ತಾನ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕ

ಶಮಾ ಪರ್ವೀನ್ ಅನ್ಸಾರಿ ಪಾಕಿಸ್ತಾನಿ ಸಂಸ್ಥೆಗಳೊಂದಿಗೆ ಫೋನ್ ಮತ್ತು ಇಮೇಲ್ ಮೂಲಕ ನಿರಂತರ ಸಂಪರ್ಕದಲ್ಲಿರುವುದು ತನಿಯಿಂದ ಗೊತ್ತಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಜುಲೈ ಆರಂಭದಲ್ಲಿ ಎಟಿಎಸ್ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯ ಸಂದರ್ಭದಲ್ಲಿ ಈಕೆಯ ಸಂಚುಗಳ ಬಗ್ಗೆ ತಿಳಿದುಬಂದಿತ್ತು.

ಇದನ್ನೂ ಓದಿ: ಬೆಂಗಳೂರಿನಿಂದ ಕಾರ್ಯಾಚರಿಸುತ್ತಿದ್ದ ಶಂಕಿತ ಅಲ್ ಕೈದಾ ಭಯೋತ್ಪಾದಕಿ ಶಮಾ ಪರ್ವೀನ್ ಬಂಧಿಸಿದ ಗುಜರಾತ್ ಎಟಿಎಸ್

ಗುಜರಾತ್ ಎಟಿಎಸ್ ಜುಲೈ 23 ರಂದು ದೆಹಲಿ, ನೋಯ್ಡಾ, ಅಹಮದಾಬಾದ್ ಮತ್ತು ಮೋಡಸಾದ ನಾಲ್ವರನ್ನು ಎಕ್ಯೂಐಎಸ್‌ ಪರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಮೂಲಭೂತವಾದಿ ಮತ್ತು ಜಿಹಾದಿ ಪ್ರಚಾರದ ವೀಡಿಯೊಗಳನ್ನು ಹಂಚಿಕೊಂಡ ಆರೋಪದ ಮೇಲೆ ಬಂಧಿಸಿತ್ತು. ಈ ವೀಡಿಯೊಗಳು ಭಾರತೀಯ ಮುಸ್ಲಿಂ ಯುವಕರನ್ನು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತಿರಸ್ಕರಿಸಲು ಮತ್ತು ಸಶಸ್ತ್ರ ದಂಗೆಯ ಮೂಲಕ ಷರಿಯಾ (ಇಸ್ಲಾಮಿಕ್ ಕಾನೂನು) ಹೇರಲು ಪ್ರಚೋದಿಸುವ ಗುರಿಯನ್ನು ಹೊಂದಿವೆ ಎಂದು ಎಟಿಎಸ್ ಹೇಳಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು