ಹೈಕೋರ್ಟ್‌ನಲ್ಲಿ ಜಡ್ಜ್‌ ಮುಂದೆಯೇ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಆ ವ್ಯಕ್ತಿ ಯಾರು? ಇಲ್ಲಿದೆ ವಿವರ

ಹೆಂಡತಿ ಜೊತೆ ನ್ಯಾಯಾಲಯಕ್ಕೆ ಬಂದಿದ್ದ ಮೈಸೂರು ಮೂಲದ ವ್ಯಕ್ತಿ ಓರ್ವ ನ್ಯಾಯಪೀಠದ ಮುಂದೆ ಹೋದಾಗ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಹೈಕೋರ್ಟ್​ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಕೂಡಲೇ ಪೊಲೀಸರು ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟಕ್ಕೂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಯಾರು, ಕಾರಣವೇನು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

ಹೈಕೋರ್ಟ್‌ನಲ್ಲಿ ಜಡ್ಜ್‌ ಮುಂದೆಯೇ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಆ ವ್ಯಕ್ತಿ ಯಾರು? ಇಲ್ಲಿದೆ ವಿವರ
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಹೈಕೋರ್ಟ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Apr 03, 2024 | 4:19 PM

ಬೆಂಗಳೂರು, ಮಾರ್ಚ್​ 03: ಹೈಕೋರ್ಟ್(high court) ನಲ್ಲಿ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ವ್ಯಕ್ತಿ ಓರ್ವ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ವಿಚಾರಣೆಯ ಅಂತ್ಯದ ವೇಳೆಗೆ ನ್ಯಾಯಮೂರ್ತಿಗಳ ಮುಂದೆ ಬಂದ ವ್ಯಕ್ತಿ ತನ್ನ ಪ್ರಕರಣದ ಬಗ್ಗೆ ಅರ್ಜಿಯೊಂದನ್ನು ಕೋರ್ಟ್ ಸಿಬ್ಬಂದಿಗೆ ನೀಡಿದ್ದಾರೆ. ಬಳಿಕ ಸಣ್ಣ ಚಾಕುವಿನಂತಹ ವಸ್ತುವಿನಿಂದ ತನ್ನ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಕೂಡಲೇ ಪೊಲೀಸರು ಶಿವಾಜಿನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕತ್ತು ಕುಯ್ದುಕೊಂಡಿದ್ದರಿಂದ ಅನ್ನನಾಳದ ಅಕ್ಕಪಕ್ಕದ ರಕ್ತನಾಳಗಳು ಕಟ್ ಆಗಿದೆ. ಪರಿಸ್ಥಿತಿ ಗಂಭೀರ ಹಿನ್ನೆಲೆ ವೈದ್ಯರು ಆಪರೇಷನ್ ನಡೆಸುತ್ತಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಯಾರು?

ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಹೆಸರು ಚಿನ್ನಂ ಶ್ರೀನಿವಾಸ್. ಮೂಲತಃ ಮೈಸೂರಿನ ವಿಜಯನಗರದ ನಿವಾಸಿ. ಸಿಜೆಗೆ ದೂರು ನೀಡಲು ಹೆಂಡತಿ ಜೊತೆ ಹೈಕೋರ್ಟ್‌ಗೆ ಬಂದಿದ್ದರು. ಆಪರೇಷನ್ ಥಿಯೇಟರ್‌ನಲ್ಲಿ ಬಳಸುವ ಚಾಕುವನ್ನು ಶ್ರೀನಿವಾಸ್ ತಂದಿದ್ದರು.

ಇದನ್ನೂ ಓದಿ: ಬೆಂಗಳೂರು: ಹೈಕೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಈ ಹಿಂದೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ಶ್ರೀನಿವಾಸ್ ಚಿನ್ನಂ ದೂರು ನೀಡಿದ್ದರು. ಪ್ರಕರಣ ಏಕಸದಸ್ಯ ಪೀಠದಲ್ಲಿ ರದ್ದಾಗಿತ್ತು. ಈ ಸಂಬಂಧ ಸಿಜೆಗೆ ದೂರು ನೀಡಲು ಬಂದಿದ್ದು, ಕೋರ್ಟ್ ಹಾಲ್​​ನಲ್ಲಿ ಸಿಬ್ಬಂದಿಗೆ ದೂರಿನ ಪ್ರತಿ ನೀಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಶ್ರೀನಿವಾಸ್ ಚಿನ್ನಂ ನೀಡಿದ್ದ ದೂರಿನ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ.

ಆತ್ಮಹತ್ಯೆಗೆ ಕಾರಣವೇನು?

ಅಪಾರ್ಟ್​ಮೆಂಟ್​ ನಿರ್ಮಿಸಿ ಲಾಭ ಹಂಚಿಕೊಳ್ಳುವ ವಿಚಾರವಾಗಿ ಶ್ರೀಧರ್ ರಾವ್ ಮತ್ತಿತರರೊಂದಿಗೆ ಒಪ್ಪಂದವಾಗಿತ್ತು. ಆದರೆ ಒಪ್ಪಂದ ಪಾಲಿಸದೇ 93 ಲಕ್ಷ ರೂ. ಪಡೆದು ವಂಚನೆ ಹಿನ್ನೆಲೆ ಶ್ರೀನಿವಾಸ್ ಚಿನ್ನಂ 2021ರಲ್ಲಿ ಮೈಸೂರಿನ ವಿಜಯನಗರ ಠಾಣೆಯಲ್ಲಿ ಕೇಸ್ ಒಂದನ್ನ ದಾಖಲಿಸಿದ್ದರು. ವಂಚನೆ ಜೊತೆಗೆ ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದರು ಎಂದು ಎಫ್​ಐಆರ್​​ ಕೂಡ ದಾಖಲಾಗಿತ್ತು.

ಇದನ್ನೂ ಓದಿ: ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ಡಿಕ್ಕಿ: ಮೂವರು ಸೇರಿ 20 ಕುರಿಗಳು ಸಾವು

ಎಫ್ಐಆರ್ ಪ್ರಶ್ನಿಸಿ ಶ್ರೀಧರ್ ರಾವ್ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸಿವಿಲ್ ವ್ಯಾಜ್ಯವಾಗಿರುವುದರಿಂದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ, ಸಿವಿಲ್ ಕೋರ್ಟ್‌ನಲ್ಲಿ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಲು ಸೂಚಿಸಿತ್ತು. ಹೀಗಾಗಿ ಸಿಜೆಗೆ ದೂರು ನೀಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 2023ರ ಜೂನ್ 2ರಂದೇ ಪ್ರಕರಣ ರದ್ದಾಗಿತ್ತು. ಆದರೆ ಈಗ ಆತ್ಮಹತ್ಯೆಗೆ ಯತ್ನಿಸುವ ಉದ್ದೇಶದ ಬಗ್ಗೆ ತನಿಖೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ