ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲವೆಂದರೆ FSL ವರದಿ ಬಹಿರಂಗ ಮಾಡಲು ಹಿಂಜರಿಕೆ ಯಾಕೆ: ಆರ್ ಅಶೋಕ

| Updated By: Rakesh Nayak Manchi

Updated on: Mar 04, 2024 | 7:22 PM

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ, ಸರ್ಕಾರ ಎಫ್​ಎಸ್​ಎಲ್ ವರದಿಯನ್ನು ಇದುವರೆಗೆ ಬಹಿರಂಗಪಡಿಸಿಲ್ಲ. ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲವೆಂದರೆ FSL ವರದಿ ಬಹಿರಂಗ ಮಾಡಲು ಹಿಂಜರಿಕೆ ಯಾಕೆ: ಆರ್ ಅಶೋಕ
ಆರ್ ಅಶೋಕ ಮತ್ತು ಸಿದ್ದರಾಮಯ್ಯ
Follow us on

ಬೆಂಗಳೂರು, ಮಾ.4: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ (Pro-Pak Slogan) ಕೂಗಿದ ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರ ಎಫ್​ಎಸ್​ಎಲ್ (FSL) ವರದಿಯನ್ನು ಇದುವರೆಗೆ ಬಹಿರಂಗಪಡಿಸಿಲ್ಲ. ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ (R Ashoka) ಎಕ್ಸ್ ಖಾತೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಂಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ ಎಂದರು.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೇಸ್: ಕೊನೆಗೂ ಮೂವರು ಅರೆಸ್ಟ್

FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ ಎಂದು ಪ್ರಶ್ನಿಸಿದ್ದಾರೆ.

ಆರ್ ಅಶೋಕ ಟ್ವೀಟ್

ಆರೋಪಿಗಳ ವಿರುದ್ಧ ದೇಶದ್ರೋಗ ಪ್ರಕರಣ ದಾಖಲಿಸಲು ಒತ್ತಾಯ

ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: FSL ವರದಿ ಬಂದಿಲ್ಲ…ಬಂದಿಲ್ಲ ಎನ್ನುವ ಮಧ್ಯೆ ಮೂವರು ಅರೆಸ್ಟ್: ಅನುಮಾನಗಳಿಗೆ ಎಡೆಮಾಡಿಕೊಟ್ಟ ಸರ್ಕಾರದ ನಡೆ!

ಈ ಇಡೀ ಪ್ರಕರಣ ಕಾಂಗ್ರೆಸ್ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Mon, 4 March 24