Anekal News: ಕಾಡಾನೆ ದಾಳಿ: ಕುರಿ ಕಾಯುತ್ತಿದ್ದ ಮಹಿಳೆ ದುರ್ಮರಣ
ಕಾಡಾನೆ ದಾಳಿಯಿಂದ ಕುರಿ ಕಾಯುತ್ತಿದ್ದ ಮಹಿಳೆ ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಯ ಹಕ್ಕಿಪಿಕ್ಕಿ ಕಾಲೋನಿ ಬಳಿ ನಡೆದಿದೆ.
ಆನೇಕಲ್: ಕಾಡಾನೆ ದಾಳಿ (Elephant Attack) ಯಿಂದ ಕುರಿ ಕಾಯುತ್ತಿದ್ದ ಮಹಿಳೆ ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಯ ಹಕ್ಕಿಪಿಕ್ಕಿ ಕಾಲೋನಿ ಬಳಿ ನಡೆದಿದೆ. ಕಾಲಿನಿಂದ ತುಳಿದು ನಾಗಮ್ಮ(48) ಎನ್ನುವವರನ್ನು ಒಂಟಿ ಸಲಗ ಕೊಂದಿದೆ. ಪದೇ ಪದೆ ಸುತ್ತಮುತ್ತಲಿನ ಜನರ ಮೇಲೆ ಕಾಡಾನೆ ದಾಳಿ ಮಾಡುತ್ತಿದೆ. ಕಾಡಾನೆ ಸೆರೆ ಹಿಡಿಯುವಂತೆ ಅರಣ್ಯ ಸಿಬ್ಬಂದಿಗೆ ಹಲವು ಸಲ ಮನವಿ ಮಾಡಿದರು ಪ್ರಯೋಜನವಾಗಿಲ್ಲ. ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಡಾನೆ ದಾಳಿಯಿಂದ ಕಾರ್ಮಿಕ ಗಂಭೀರ ಗಾಯ
ಕೊಡಗು: ಕಾಡಾನೆ ದಾಳಿಯಿಂದ ಕಾರ್ಮಿಕ ಗಂಭೀರ ಗಾಯಗೊಂಡಿರುವಂತಹ ಘಟನೆ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮದ ಮಸ್ಕಲ್ ಕಾಫಿತೋಟದಲ್ಲಿ ಘಟನೆ ನಡೆದಿತ್ತು. ಬಾಬಿ(40) ಗಾಯಗೊಂಡಿದ್ದ ಕಾರ್ಮಿಕ. ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿತ್ತು. ಅಮ್ಮತ್ತಿ ಆಸ್ಪತ್ರೆಯಲ್ಲಿ ಗಾಯಾಳು ಬಾಬಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ ಮಾಡಲಾಗಿತ್ತು.
ಇದನ್ನೂ ಓದಿ; ಹಾಸನ: ಸಕಲೇಶಪುರದ ಗುಳಗಳಲೆಯಲ್ಲಿ ಕಾಡಾನೆ ದಾಳಿ, ಇಬ್ಬರಿಗೆ ಗಾಯ
ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಕೂಡ ಮುಂದುವರೆದಿದ್ದು, ಸಕಲೇಶಪುರ ತಾಲ್ಲೂಕಿನ ಗುಳಗಳಲೆ ಹಾಗೂ ಹೆಬ್ಬನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಕಾಡಾನೆ ದಾಳಿಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದರು.
ಈ ಘಟನೆಯ ಬೆನ್ನಲ್ಲೇ ಹೆಬ್ಬನಹಳ್ಳಿ ಗ್ರಾಮದಲ್ಲಿ ಯುವಕನ ಮೇಲೆ ಒಂಟಿಸಲಗ ದಾಳಿ ಮಾಡಿತ್ತು. ಅಸ್ಸಾಂ ಮೂಲದ ಕಾರ್ಮಿಕ ಹಬೀದ್ (26) ಮೇಲೆ ಏಕಾಏಕಿ ಸಲಗ ದಾಳಿ ಮಾಡಿದ್ದು, ಅವರಿಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದರು. ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಇದನ್ನೂ ಓದಿ: Kodagu: ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಆಸ್ಪತ್ರೆಗೆ ದಾಖಲು
ಕಾಡಾನೆ ದಾಳಿ, ಇಬ್ಬರಿಗೆ ಗಾಯ
ಹಾಸನ: ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದೆ. ಸಕಲೇಶಪುರ ತಾಲ್ಲೂಕಿನ ಗುಳಗಳಲೆ ಹಾಗೂ ಹೆಬ್ಬನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕಾಡಾನೆ ದಾಳಿಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದರು. ಗುಳಗಳಲೆ ಗ್ರಾಮದ ಕುರ್ಚಿ ಕಾಫಿ ಎಸ್ಟೆಟ್ ರೈಟರ್ ಇನಾಯತ್ (45) ಮೇಲೆ ಕಾಡಾನೆ ದಾಳಿ ಮಾಡಿತ್ತು. ಈ ವೇಳೆ ಕೂದಲೆಳೆ ಅಂತರದಲ್ಲಿ ಇನಾಯತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಇನಾಯತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.