ಬೆಂಗಳೂರು: ಟ್ರಾಫಿಕ್​ ತೊಂದರೆ ನಿಯಂತ್ರಿಸಲು 5 ಹೊಸ ಸಂಚಾರಿ​ ಠಾಣೆ ನಿರ್ಮಾಣಕ್ಕೆ ಬೊಮ್ಮಾಯಿ ಸೂಚನೆ

ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಟ್ರಾಫಿಕ್​ ಸಮಸ್ಯೆಯನ್ನು ನಿಯಂತ್ರಿಸಲು 5 ಹೊಸ ಟ್ರಾಫಿಕ್​​ ಪೊಲೀಸ್​ ಠಾಣೆಗಳನ್ನು ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಟ್ರಾಫಿಕ್​ ತೊಂದರೆ ನಿಯಂತ್ರಿಸಲು 5 ಹೊಸ ಸಂಚಾರಿ​ ಠಾಣೆ ನಿರ್ಮಾಣಕ್ಕೆ ಬೊಮ್ಮಾಯಿ ಸೂಚನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 09, 2022 | 9:08 PM

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್​​ ಕಿರಿ ಕಿರಿ ಜಾಸ್ತಿ ಆಗುತ್ತಿದೆ. ಇದನ್ನು ನಿವಾರಿಸಲು ಟ್ರಾಫಿಕ್​ಗೆ ​ವಿಶೇಷ ಕಮಿಷನರ್ ಆಗಿ ಎಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ನೇಮಕ ಮಾಡಲಾಗಿದೆ. ಈಗ ಬೆಳ್ಳಂದೂರು, ಹೆಣ್ಣೂರು, ಮಹದೇವಪುರ, ತಲಘಟ್ಟಪುರ, ಬ್ಯಾಡರಹಳ್ಳಿಯಲ್ಲಿ 5 ಹೊಸ ಟ್ರಾಫಿಕ್​​ ಪೊಲೀಸ್​ ಠಾಣೆಗಳನ್ನು (Traffic police station) ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಇಂದು ಬ್ರಾಡ್​​ವೇ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಪೂರ್ವ ವಿಭಾಗ ಡಿಸಿಪಿ ಕಚೇರಿಯ ನೂತನ ಕಟ್ಟದ ಹಾಗೂ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ನೂತನ ಕಟ್ಟಡವನ್ನು ಉದ್ಘಾಟಿಸಿದರು.

ಇದನ್ನೂ ಓದಿ: ಮ್ಯಾಂಡಸ್ ಚಂಡಮಾರುತದ ಎಫೆಕ್ಟ್​; ಬೆಂಗಳೂರಿನಲ್ಲಿ ಇಂದಿನಿಂದ 4 ದಿನ ಮಳೆ ಸಾಧ್ಯತೆ

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇದರಿಂದ ನಗರದ ಹೊರಭಾಗದಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಹೆಚ್ಚು ಹಮನ ಕೊಡಲು ಸಾಧ್ಯವಾಗುತ್ತದೆ. ಇನ್ನೂ ಟ್ರಾಫಿಕ್​ ಉಲ್ಲಂಘನೆ ಮಾಡುವ ವಾಹನಗಳ ಚಾಲಕರಿಗೆ ದಂಡ ವಿಧಿಸಲು ನಗರದ 300 ಕಡೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ತಂತ್ರಾಂಶ ಒಳಗೊಂಡ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದು ದಿನದ 24 ಗಂಟೆ ಕಾರ್ಯ ನಿರ್ವಹಿಸುವುದರಿಂದ ನಿಯಮ ಉಲ್ಲಂಘನೆ ಮಾಡಿದರೆ ಸ್ವಯಂ ಚಾಲಿತವಾಗಿ ವಾಹನದ ನಂಬರ್ ಪ್ಲೇಟ್ ಫೋಟೋ ತೆಗೆದು ದಂಡ ವಿಧಿಸಿ ಇ-ಚಲನ್ ಮೊಬೈಲ್‌ಗೆ ಕಳುಹಿಸಲಿದೆ ಎಂದು ತಿಳಿಸಿದರು.

ಅಪಘಾತ ಪ್ರಕರಣದಲ್ಲಿ ಜಪ್ತಿಯಾದ ವಾಹನ 24 ಗಂಟೆಯೊಳಗೆ ಮಾಲೀಕರಿಗೆ ಹಸ್ತಾಂತರ

ಬೆಂಗಳೂರು: ಅಪಘಾತ ಪ್ರಕರಣದಲ್ಲಿ ಜಪ್ತಿಯಾದ ವಾಹನಗಳನ್ನು 24 ಗಂಟೆಯೊಳಗೆ ಬಿಡುಗಡೆ ಮಾಡಬೇಕೆಂದು ಬೆಂಗಳೂರು ಸಂಚಾರಿ ವಿಶೇಷ ಕಮಿಷನರ್ ಡಾ.ಸಲೀಂ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಕೇಸ್​​ನ ತನಿಖೆಯಿಂದಾಗಿ ಜಪ್ತಿಯಾದ ವಾಹನಗಳು ತಿಂಗಳುಗಟ್ಟಲ್ಲೇ ಸ್ಟೇಷನ್​ಲ್ಲಿ ​ಇರುತ್ತಿದ್ದವು. ಆದರೆ, ಇನ್ನು ಮುಂದೆ ಆ್ಯಕ್ಸಿಡೆಂಟ್ ಆದ 24 ಗಂಟೆಗಳಲ್ಲಿ ವಾಹನ ವಾಪಸ್ ನೀಡಬೇಕೆಂದು ಪೊಲೀಸರಿಗೆ ಕಮಿಷನರ್ ಎಂ.ಎ. ಸಲೀಂ ಸೂಚನೆ ನೀಡಿದ್ದಾರೆ.

ಆಕ್ಸಿಡೆಂಟ್ ವಾಹನಗಳನ್ನು ಪೊಲೀಸರು ಇಟ್ಟುಕೊಳ್ಳುವ ಅವಶ್ಯಕತೆ ಇಲ್ಲ. ಆರ್​ಟಿಓ ದಿಂದ ಪರಿಶೀಲನೆ ನಡೆದ ಬಳಿಕ, ಮೆಕಾನಿಕಲ್ ಆಗಿ ಏನಾದ್ರು ತೊಂದರೆ ಆಗಿದೆಯಾ ಎಂದು ರಿಪೋರ್ಟ್ ಮಾಡಲಾಗುತ್ತದೆ. ನಂತರ ಸಿಬ್ಬಂದಿ ಮಾಲೀಕರಿಗೆ ಸೂಚನೆ ನೀಡಿ, ಮುಚ್ಚಳಿಕೆ ಬರೆಸಿಕೊಂಡು ವಾಹನ ಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೆಳಗ್ಗೆ 8.30ರ ನಂತರ ಶಾಲಾ ವಾಹನ ಸಂಚಾರ ಬಂದ್: ರಾಜಧಾನಿ ಟ್ರಾಫಿಕ್ ಸಮಸ್ಯೆಗೆ ಮತ್ತೊಂದು ಸಲೀಂ ಅಸ್ತ್ರ

ಅಪಘಾತ ಆಗಿದೆ ಅಂತಾ ವಾಹನಗಳನ್ನು ಸ್ಟೇಷನ್ ಮುಂದೆ ಇಟ್ಟುಕೊಂಡರೆ ಸಾಕಷ್ಟು ವಾಹನ ಬಂದು ಬೀಳುತ್ತವೆ. ಇದರಿಂದ ಸ್ಟೇಷನ್ ಕೂಡ ಲಕ್ಷಣವಾಗಿ ಕಾಣಿಸುವುದಿಲ್ಲ. ಪೊಲೀಸ್ ಠಾಣೆ ಸುತ್ತ ಮುತ್ತಲಿನ ಆವರಣ ಶುಚಿಯಾಗಿಡಬೇಕು. ಹೀಗಾಗಿ ಆಕ್ಸಿಡೆಂಟ್ ವಾಹನಗಳು ಇಟ್ಟುಕೊಳ್ಳುವ ಅವಶ್ಯಕತೆ ಇಲ್ಲ. ಇನ್ನು ಮುಂದೆ 24 ಗಂಟೆಯಲ್ಲಿ ಪರಿಶೀಲನೆ ನಡೆಸಿ ವಾಪಸ್ ನೀಡಲಾಗುತ್ತದೆ ಎಂದು ಟ್ರಾಫಿಕ್ ಸ್ಪೆಷಲ್ ಕಮಿಷನರ್ ಸಲೀಂ ಮಾಹಿತಿ ನೀಡಿದ್ದಾರೆ.

ಆಕ್ಸಿಡೆಂಟ್ ಪ್ರಕರಣಗಳಲ್ಲಿ ಸಿಕ್ಕರೆ ವಾಹನ ಬೇಗನೆ ಮಾಲೀಕರ ಕೈಸೇರುತ್ತಿರಲಿಲ್ಲ. ಮಾಲೀಕರು ಮತ್ತೆ ತಮ್ಮ ವಾಹನಗಳನ್ನು ಪೊಲೀಸ್ ಸ್ಪೇಷನ್​ಗಳಿಂದ ಬಿಡಿಸಿಕೊಂಡು ಬರಲು ಸಾಕಷ್ಟು ಸಮಯ ತಗಲುತ್ತಿತ್ತು. ಆದರೆ. ಇದೀಗ ಟ್ರಾಫಿಕ್ ಸ್ಪೆಷಲ್ ಕಮಿಷನರ್ ಡಾ.ಸಲೀಂ ಹೊಸ ನಿಯಮ ಜಾರಿ ಮಾಡಿದ್ದು, ಇನ್ಮುಂದೆ ಆಕ್ಸಿಡೆಂಟ್ ಕೇಸ್ ಇರುವ ವಾಹನ ಮಾಲೀಕರು ತಮ್ಮ ವಾಹನಗಳನ್ನು 24 ಗಂಟೆಗಳಲ್ಲಿ ಪಡೆದುಕೊಳ್ಳಬಹುದು.

ಅವೈಜ್ಞಾನಿಕ ಹಂಪ್​ ತೆರವಿಗೆ ಸೂಚನೆ

ಬೆಂಗಳೂರಿನಲ್ಲಿ ನಗರದಲ್ಲಿ ಹಂಪ್ ಗಳಿಂದ ಆ್ಯಕ್ಸಿಡೆಂಟ್ ಪ್ರಕರಣಗಳು ಹೆಚ್ಚುತ್ತಿರುವ ಮಾತನಾಡಿರುವ ಟ್ರಾಫಿಕ್ ಸ್ಪೆಷಲ್ ಕಮಿಷನರ್ ಡಾ. ಸಲೀಂ , 420ಕ್ಕೂ ಹೆಚ್ಚು ಹಂಪ್ ಗಳು ಲಿಸ್ಟ್ ಮಾಡಿ ಬಿಬಿಎಂಪಿಗೆ ನೀಡಲಾಗಿದೆ. ಕೂಡಲೇ ಅವೈಜ್ಞಾನಿಕ ಹಂಪ್ ಗಳನ್ನ ತೆರವುಗೊಳಿಸುವಂತೆ ಸೂಚಿಸಲಾಗಿದೆ. ಅವಶ್ಯಕತೆ ಇರುವ ಕಡೆ ರಬ್ಬರ್ ಹಂಪ್ ಗಳು ಹಾಕಲು ಬಿಬಿಎಂಪಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರದಲ್ಲಿ ಅವೈಜ್ಙಾನಿಕ ಹಂಪ್ ಗಳಿಂದ ಕೆಲವೆಡೆ ಆ್ಯಕ್ಸಿಡೆಂಟ್ ಆಗ್ತಿತ್ತು. ಹೀಗಾಗಿ ಎಲ್ಲೆಲ್ಲಿ ಅವೈಜ್ಞಾನಿಕ ಹಂಪ್‌ಗಳಿದೆ, ಅನವಶ್ಯಕ ಹಂಪ್ ಗಳಿದೆ ಅದನ್ನ ರಿಮೂವ್ ಮಾಡುವುದಕ್ಕೆ ಹೇಳಿದ್ದೇವೆ. ಜೊತೆಗೆ ಸಿಗ್ನಲ್ ಗಳ ಬಳಿ ಇರುವ ಹಂಪ್ ಗಳನ್ನ ರಿಮೂವ್ ಮಾಡುವುದಕ್ಕೆ ತಿಳಿಸಿದ್ದೇವೆ ಎಂದರು.

ರಬ್ಬರ್ ಹಂಪ್‌ ಇಂದ ಅಷ್ಟು ಎಫೆಕ್ಟ್ ಆಗುವುದಿಲ್ಲ. ಈ ಹಿನ್ನಲೆಯಲ್ಲಿ ಅವಶ್ಯಕತೆ ಇರುವ ಕಡೆ ರಬ್ಬರ್ ಹಂಪ್ ಹಾಕಲು ಸೂಚಿಸಿದ್ದೀವಿ. ಸವಾರರ ಸುರಕ್ಷತೆ ದೃಷ್ಟಿಯಿಂದ ಈ ರೀತಿ ಮಾಡುತ್ತಿದ್ದೇವೆ. ಈಗಾಗಲೇ ಬಿಬಿಎಂಪಿ ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ಅವರೂ ಕೆಲಸ ಶುರು ಮಾಡುತ್ತಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Fri, 9 December 22

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು