Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂದ್ರಾ ಅಗಸ್ಟ್​ಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಮಾಡುತ್ತೇನೆ -ಶಾಸಕ ಜಮೀರ್ ಅಹ್ಮದ್

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಈದ್ಗಾ ಮೈದಾನದಲ್ಲಿ ನಾನೇ ರಾಷ್ಟ್ರಧ್ವಜಾರೋಹಣ ಮಾಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಸೋಮವಾರ ಹೇಳಿಕೊಂಡಿದ್ದಾರೆ.

ಪಂದ್ರಾ ಅಗಸ್ಟ್​ಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ಮಾಡುತ್ತೇನೆ -ಶಾಸಕ ಜಮೀರ್ ಅಹ್ಮದ್
ಜಮೀರ್ ಅಹ್ಮದ್, ಕಾಂಗ್ರೆಸ್ ಶಾಸಕ
Follow us
TV9 Web
| Updated By: ಆಯೇಷಾ ಬಾನು

Updated on:Aug 08, 2022 | 8:46 PM

ಬೆಂಗಳೂರು: ಬಿಬಿಎಂಪಿ(BBMP) ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ನಡುವಿನ ಜಮೀನು ವಿವಾದದಲ್ಲಿ ಸಿಲುಕಿರುವ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವುದಾಗಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್(Zameer Ahmed) ಹೇಳಿದ್ದಾರೆ.

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಈದ್ಗಾ ಮೈದಾನದಲ್ಲಿ ನಾನೇ ರಾಷ್ಟ್ರಧ್ವಜಾರೋಹಣ ಮಾಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಸೋಮವಾರ ಹೇಳಿಕೊಂಡಿದ್ದಾರೆ. ಚಾಮರಾಜಪೇಟೆಯ ಈದ್ಗಾ ಮೈದಾನವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ವಕ್ಫ್ ಮಂಡಳಿ ನಡುವೆ ಈದ್ಗಾ ಮೈದಾನ ಯಾರದೆಂಬ ಭೂ ಮಾಲೀಕತ್ವದ ವಿವಾದದಲ್ಲಿ ಸಿಲುಕಿಕೊಂಡಿದೆ. ಇದರ ನಡುವೆ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲು ಶಾಸಕ ಜಮೀರ್ ಮುಂದಾಗಿದ್ದಾರೆ. ಆದರೆ ಕೆಲ ಹಿಂದೂ ಪರ ಸಂಘಟನೆಗಳು ಈದ್ಗಾ ಮೈದಾನದಲ್ಲಿ ಧ್ವಜಾರೋಹಣವನ್ನು ಮಾಡಲು ಅವಕಾಶ ಕೊಡುವಂತೆ ಬಿಬಿಎಂಪಿಗೆ ಒತ್ತಾಯಿಸಿದ್ದಾರೆ.

“ನಾವು ಇಲ್ಲಿ ಧ್ವಜಾರೋಹಣ ಮಾಡುತ್ತೇವೆ. ಮಾಧ್ಯಮಗಳು ಸತ್ಯವನ್ನು ತಿರುಚಿ ಸಮಸ್ಯೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಆಗಸ್ಟ್ 15, ನವೆಂಬರ್ 1 ಮತ್ತು ಜನವರಿ 26 ರಂದು ನಾವು ಇಲ್ಲಿ ಧ್ವಜಾರೋಹಣ ಮಾಡುತ್ತೇವೆ” ಎಂದು ಶಾಸಕ ಜಮೀರ್ ಅಹ್ಮದ್ ಖಾಸಗಿ ಸುದ್ದಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಹಿಂದೆ ಕಂದಾಯ ಸಚಿವ ಆರ್ ಅಶೋಕ ಅವರು ಈ ಜಮೀನು ಕಂದಾಯ ಇಲಾಖೆಗೆ ಸೇರಿದ್ದು, ಯಾರೂ ರಾಷ್ಟ್ರಧ್ವಜ ಹಾರಿಸಲು ಅನುಮತಿ ಕೇಳಿಲ್ಲ ಎಂದು ಹೇಳಿದ್ದರು. ಸದ್ಯ ಈಗ ಮೈದಾನದಲ್ಲಿ ನಾವು ರಾಷ್ಟ್ರಧ್ವಜಾರೋಹಣ ಮಾಡುತ್ತೇವೆ ಎಂದು ಕೆಲವು ಸಂಘಟನೆಗಳು ಹೇಳುತ್ತಿದ್ದು ಇದರ ನಡುವೆ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ತಾವೇ ಧ್ವಜಾರೋಹಣ ಮಾಡಲು ಮುಂದಾಗಿದ್ದಾರೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶ ಇಲ್ಲ

ಇನ್ನು ಶಾಸಕ ಜಮೀರ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್​ ತಿರುಗೇಟು ಕೊಟ್ಟಿದ್ದು ಸವಾಲು ಹಾಕಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಜಮೀರ್ ಅಹ್ಮದ್​ ವಿರೋಧ ಹಿನ್ನೆಲೆ ಈದ್ಗಾ ಮೈದಾನ ಜಮೀರ್ ಅಹ್ಮದ್ ಪಿತ್ರಾರ್ಜಿತ ಆಸ್ತಿ ಅಲ್ಲ. ವಕ್ಫ್ ಬೋರ್ಡ್, ಮುಸ್ಲಿಂರ ಆಸ್ತಿ ಅಲ್ಲ. ನಾವು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುತ್ತೇವೆ. ತಾಕತ್ ಇದ್ದರೆ ತಡೆಯಲಿ ನೋಡೋಣ ಅಂತಾ ಜಮೀರ್ ಅಹ್ಮದ್‌ಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್​ ಸವಾಲು ಹಾಕಿದ್ದಾರೆ.

Published On - 8:45 pm, Mon, 8 August 22

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್