ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: ವಿಪಕ್ಷ ನಾಯಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚಿಸಲಾಗಿದೆ – ಸಿಎಂ ಬೊಮ್ಮಾಯಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಜೊತೆ ಖುದ್ದು ನಾನೇ ಮಾತಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: ವಿಪಕ್ಷ ನಾಯಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚಿಸಲಾಗಿದೆ - ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Updated By: ವಿವೇಕ ಬಿರಾದಾರ

Updated on: Aug 19, 2022 | 7:47 PM

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಜೊತೆ ಖುದ್ದು ನಾನೇ ಮಾತಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬೆಂಗಳೂರಿನಲ್ಲಿ (Bengaluru) ಹೇಳಿದ್ದಾರೆ. ಯಾರಿಂದಾದರೂ ಬೆದರಿಕೆ ಕರೆ ಬಂದಿದೆಯಾ ಅಂತ ಕೇಳಿದ್ದೇನೆ. ವಿಪಕ್ಷ ನಾಯಕರಿಗೆ ಸೂಕ್ತ ಭದ್ರತೆ ಒದಗಿಸಲೂ ಸೂಚಿಸಿದ್ದೇನೆ. ಘಟನೆ ಬಗ್ಗೆ ಡಿಜಿ ಮತ್ತು ಐಜಿಪಿಯಿಂದ ಮಾಹಿತಿಯೂ ಪಡೆದಿದ್ದೇನೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಇದೆ ವೇಳೆ ಎಸಿಬಿ ರದ್ದು ಕುರಿತು ಸರ್ಕಾರದ ನಡೆ ಬಗ್ಗೆ ನಾಳೆ ಮಾತಾಡ್ತೇನೆ ಎಂದು ಸ್ಪಷ್ಟಪಡಿಸಿದರು. ಮತ್ತೆ ಸಚಿವ ಸಂಪುಟ ಸೇರಲು ರಮೇಶ್ ಜಾರಕಿಹೊಳಿ ಕಸರತ್ತು ನಡೆಸಿದ್ದು, ಬೆಂಗಳೂರಿನ ಆರ್‌.ಟಿ.ನಗರದ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಬೇಟಿಯಾಗಿದ್ದಾರೆ.

ಹೈಕಮಾಂಡ್ ಬುಲಾವ್ ನೀಡಿದರೆ ಸಂಪುಟದ ಬಗ್ಗೆ ಚರ್ಚಿಸುವೆ. ಸಚಿವ ಸಂಪುಟ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ರಮೇಶ್ ಜಾರಕಿಹೊಳಿಗೆ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Published On - 7:36 pm, Fri, 19 August 22