ಶೀಘ್ರದಲ್ಲೇ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ, ಸಿಎಂ ಭರವಸೆ: ಕೆಂಪಣ್ಣ

ಐದುವರೆ ತಿಂಗಳಿಂದ ಬಾಕಿ ಇರುವ ಬಿಲ್​ ಬಿಡುಗಡೆ ಮಾಡಿಲ್ಲ. ಇದರಿಂದ ನಮಗೆ ಸಾಕಷ್ಟು ತೊಂದರೆಯಾಗಿದೆ. ಆದಷ್ಟು ಬೇಗ ಬಗೆಹರಿಸುತ್ತೇವೆ ಅಂತ ಹೇಳಿದ್ದಾರೆ. ತಕ್ಷಣ ಹಣ ಬಿಡುಗಡೆ ಮಾಡುತ್ತೇವೆ ಅಂತ ಹೇಳಿದ್ದಾರೆ. ಆದರೆ ಎಷ್ಟು ಹಣ ಬಿಡುಗಡೆ ಮಾಡುತ್ತೇವೆ ಅಂತ ಹೇಳಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದರು.

ಶೀಘ್ರದಲ್ಲೇ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ, ಸಿಎಂ ಭರವಸೆ: ಕೆಂಪಣ್ಣ
ಕೆಂಪಣ್ಣ
Follow us
TV9 Web
| Updated By: ವಿವೇಕ ಬಿರಾದಾರ

Updated on: Oct 14, 2023 | 2:59 PM

ಬೆಂಗಳೂರು ಅ.14: ರಾಜ್ಯ ಸರ್ಕಾರದಿಂದ ಇನ್ನೂ 20 ಸಾವಿರ ಕೋಟಿ ರೂ. ಬಾಕಿ ಬರಬೇಕಿದೆ. ಇಂದಿನಿಂದ ಸರ್ಕಾರಕ್ಕೆ 30 ದಿನ ಗಡವು ನೀಡುವುತ್ತೇವೆ. ಕರೆದು ಮಾತನಾಡಿ ಬಗೆ ಹರಿಸಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯ ಎಂದು ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿತ್ತು. ಇಂದು (ಅ.14) ರಾಜ್ಯ ಗುತ್ತಿಗೆದಾರರ (Contractors) ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿಯಾಗಿ ಬಾಕಿ ಬಿಲ್​​ ಬಿಲ್​​ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಂಪಣ್ಣ ಅವರು ಬಿಬಿಎಂಪಿ ಕಮಿಷನರ್ ಮತ್ತು ಕೆಲವು ಅಧಿಕಾರಿಗಳು ಹಣ ಕೇಳುತ್ತಾರೆ. ಈ ವಿಚಾರವನ್ನು ಮುಖ್ಯಮಂತ್ರಿಗೆ ತಿಳಿಸಿದ್ದೇನೆ. ಕೆಲವು ಇಲಾಖೆಗಳ ಅಧಿಕಾರಿಗಳು ತುಂಬಾ ಕೆಟ್ಟದಾಗಿ ನಡೆಸಿಕೊಳ್ಳುತ್ತಾರೆ. ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಿದ್ದಾರೆ ಅಂತ ಹೇಳಿದ್ದೇವೆ. ಆದರೆ ಎಷ್ಟು ಹಣ ಬಿಡುಗಡೆ ಮಾಡುತ್ತಾರೆ ಅಂತ ಹೇಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಗುತ್ತಿಗೆದಾರರ 20 ಸಾವಿರ ಕೋಟಿ ರೂ. ಬಾಕಿ, 30 ದಿನದಲ್ಲಿ ಬಗೆಹರಿಸದಿದ್ದರೆ ರಾಜ್ಯಾದ್ಯಂತ ಧರಣಿ: ಕೆಂಪಣ್ಣ ಎಚ್ಚರಿಕೆ

ಐದುವರೆ ತಿಂಗಳಿಂದ ಬಾಕಿ ಇರುವ ಬಿಲ್​ ಬಿಡುಗಡೆ ಮಾಡಿಲ್ಲ. ಇದರಿಂದ ನಮಗೆ ಸಾಕಷ್ಟು ತೊಂದರೆಯಾಗಿದೆ. ಆದಷ್ಟು ಬೇಗ ಬಗೆಹರಿಸುತ್ತೇವೆ ಅಂತ ಹೇಳಿದ್ದಾರೆ. ತಕ್ಷಣ ಹಣ ಬಿಡುಗಡೆ ಮಾಡುತ್ತೇವೆ ಅಂತ ಹೇಳಿದ್ದಾರೆ. ಆದರೆ ಎಷ್ಟು ಅಂತ ಹೇಳಿಲ್ಲ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಮಾಡಿರುವ ಆರೋಪದ ಬಗ್ಗೆ ನಮಗೆ ಮಾಹಿತಿ ಇಲ್ಲ. ಹೆಚ್​ ಡಿ ಕುಮಾರಸ್ವಾಮಿ ಅವರ ಹೇಳಿಕೆಗೂ ನಮಗೂ ಸಂಬಂಧ ಇಲ್ಲ. ಹೋರಾಟ ವಾಪಸ್ ತಗೊಳ್ಳುವುದಿಲ್ಲ. ಹಣ ಬಿಡುಗಡೆ ಆಗುವ ತನಕ ಹೋರಟ ಮಾಡುತ್ತೇವೆ. 22 ಸಾವಿರ ಕೋಟಿ ರೂ. ಹಣ ಬಿಡುಗಡೆ ಆಗಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು