ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಹೆಸರು ನಾಮಕರಣಕ್ಕೆ ಚಿಂತನೆ: ಸಿಎಂ ಸಿದ್ದರಾಮಯ್ಯ

| Updated By: ವಿವೇಕ ಬಿರಾದಾರ

Updated on: Aug 20, 2023 | 2:09 PM

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು 108ನೇ ಜನ್ಮದಿನ ಹಿನ್ನೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಗೋಡು ತಿಮ್ಮಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ, ಬಳಿಕ ಮಾತನಾಡಿದ ಅವರು ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಅಂತ ಹೆಸರು ಇಡಲು ಚಿಂತನೆ ಮಾಡಿದ್ದೇನೆ ಎಂದರು.

ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಹೆಸರು ನಾಮಕರಣಕ್ಕೆ ಚಿಂತನೆ: ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us on

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಗೆ (Electronic City) ಜಮೀನು ಕೊಟ್ಟಿದ್ದು ದೇವರಾಜ ಅರಸು (Devaraj Arasu). ಆದ್ದರಿಂದ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಅಂತ ಹೆಸರು ಇಡಲು ಚಿಂತನೆ ಮಾಡಿದ್ದೇನೆ. ಇದನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಗೋಡು ತಿಮ್ಮಪ್ಪ ಅವರಿಗ ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಅವರು ಬೆಂಗಳೂರಿಗೆ ಸಿಲಿಕನ್ ವ್ಯಾಲಿ ಅಂತ ಹೆಸರು ಬಂದಿದೆ ಅಂದರೇ ಅದಕ್ಕೆ ದೇವರಾಜ ಅರಸು ಅವರ ಕೊಡುಗೆಯೂ ಇದೆ ಎಂದರು.

ಗೇಣಿದಾರರಿಗೆ ಮಾಲಿಕತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದು ಅರಸು. ಮಾಜಿ ವಿಧಾನಸಭಾ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ಇದರ ಹೋರಾಟ ಮಾಡಿದರು. ತಿಮ್ಮಪ್ಪ ಅವರು ಸಭಾಧ್ಯಕ್ಷರಾಗಿ ಮತ್ತು ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಾಗೋಡು ತಿಮ್ಮಪ್ಪ ಅವರು ಅಕ್ರಮವಾಗಿ ಮನೆಯಲ್ಲಿ ವಾಸಿಸುವವರೇ ಮನೆ ಒಡೆಯ ಅಂತ ಮಾಡಿದರು. ತಿಮ್ಮಪ್ಪ ಅವರಿಗೆ ಪ್ರಶಸ್ತಿ ಕೊಟ್ಟಿದ್ದು ಅದರ ಮೌಲ್ಯ ಹೆಚ್ಚಾಯ್ತು ಎಂದರು.

ದೇವರಾಜ ಅರಸು ಅವರು ಅನೇಕ ಕಾರ್ಯಕ್ರಮ ಮಾಡಿದರು. ಅರಸು ವಿಚಾರ ಇಟ್ಟುಕೊಂಡು ಬೆಳೆದವರು ಶಾಸಕರು ಮತ್ತು ಸಚಿವರಾಗಿದ್ದಾರೆ. ಒಂದು ಬಾರಿ ದೇವರಾಜ ಅರಸು ತರ ನೀವು ಆಗಬೇಕು ಅಂತ ನನಗೆ ಯಾರೋ ಒಬ್ಬರು ಅಂದರು. ಆಗ ಸಿದ್ದರಾಮಯ್ಯ ಸಿದ್ದರಾಮಯ್ಯನೇ, ದೇವರಾಜ ಅರಸು, ದೇವರಾಜ ಅರಸುನೇ ಅಂತ ಹೇಳಿದೆ. ಅವರ ಜಿಲ್ಲೆಯಿಂದ ನಾನು ಬಂದಿದ್ದೇನೆ ಅಂತ ನನಗೆ ಅತ್ಯಂತ ಹೆಮ್ಮ ಇದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಬಡವರು, ಸಾಮಾಜಿಕ ನ್ಯಾಯದ ಪರವಾಗಿ ಇದ್ದವರು ದೇವರಾಜ ಅರಸು: ಸಿಎಂ ಸಿದ್ದರಾಮಯ್ಯ

ಅರಸು ಸ್ಪೂರ್ತಿಯಿಂದ ನಾನು ಹಿಂದುಳಿದ ವರ್ಗದವರಿಗೆ ಸಾಕಷ್ಟು ಕೊಡಿಗೆ ಕೊಟ್ಟಿದ್ದೇನೆ. ನಾನು ಸಿಎಂ ಆಗಿ ಕಾಗೋಡು ತಿಮ್ಮಪ್ಪ ಅವರಿಗೆ ಪ್ರಶಸ್ತಿ ಕೊಡುತ್ತೀದ್ದೀನಿ. ಇದು ಕಾಕತಾಳಿಯ. ದೇವರಾಜ ಅರಸು ಅವರಿಂದ ಸ್ಪೂರ್ತಿ ಪಡೆದು ಅವಕಾಶ ವಂಚಿತರಿಗೆ ನ್ಯಾಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ತಿಳಿಸಿದರು.

ಕಾವೇರಿ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ವಿಚಾರವಾಗಿ ಮಾತನಾಡಿದ ಅವರು ಅವರಿಗೆ ಯಾವ ನೈತಿಕತೆ ಇದೆ. ರಾಜ್ಯನಾ ಲೂಟಿ‌ ಹೊಡೆದು ಹಾಳು ಮಾಡಿ ಆರ್ಥಿಕವಾಗಿ ದಿವಾಳಿ ಮಾಡಿ ಹೊದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:07 pm, Sun, 20 August 23