AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ, ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ಬಗೆಹರಿಸಲು ಕ್ರಮ: ಸಿಎಂ ಭರವಸೆ

ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ಮಸೂದೆ, 2023 ರಡಿ 12 ಗಂಟೆ ಕೆಲಸ ಮಾಡುವ ಕಾಯ್ದೆ ಕಡ್ಡಾಯವಾಗಿ ಆಗಬೇಕೆಂದು ಇಲ್ಲ. ಈ ಬಗ್ಗೆ ಪರಿಶೀಲಿಸಿ ಅದನ್ನು ವಾಪಸ್ಸು ಪಡೆದು ಮೊದಲಿನಂತೆ 8 ಗಂಟೆಗಳಿಗೆ ಇಳಿಸಲು ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯನವರು ಸಂಯುಕ್ತ ಹೋರಾಟ ವೇದಿಕೆಗೆ ಭರವಸೆ ನೀಡಿದರು.

ರೈತರ, ಕಾರ್ಮಿಕರ ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ಬಗೆಹರಿಸಲು ಕ್ರಮ: ಸಿಎಂ ಭರವಸೆ
TV9 Web
| Edited By: |

Updated on: Jan 18, 2024 | 9:14 PM

Share

ಬೆಂಗಳೂರು, (ಜನವರಿ 18): ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯೋಜನಾ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದ ಸಂಯುಕ್ತ ಹೋರಾಟ ವೇದಿಕೆಯ ಪದಾಧಿಕಾರಿಗಳು ಮತ್ತು ಮುಖಂಡರ ನಿಯೋಗದ ಜತೆ ಸುದೀರ್ಘ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುಡಿಯುವ ಸಮುದಾಯಗಳ ಸಮಸ್ಯೆ ಪರಿಹಾರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದರು.

ಭೂ ಸ್ವಾಧೀನ, ಗೋ ಹತ್ಯೆ ನಿಷೇಧ ಕಾಯ್ದೆ, ಬಗರ್ ಹುಕುಂ, ಕಾರ್ಮಿಕರಿಗೆ 12 ಗಂಟೆಗಳ ಕೆಲಸ ಕಡ್ಡಾಯ ಕಾಯ್ದೆ ನಿಷೇಧ, ಗ್ರಾಮೀಣ ಬ್ಯಾಂಕುಗಳಲ್ಲಿ ರೈತರ ಸಾಲಕ್ಕೆ ಒಟಿಎಸ್ ವ್ಯವಸ್ಥೆ , ಫ್ರೀಡಂ ಪಾರ್ಕನ್ನು ಹೋರಾಟಗಳಿಗೆ ಮೀಸಲಿಡುವುದು ಸೇರಿದಂತೆ ಹಲವು ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಂಘದ ಸದಸ್ಯರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಸಿದ್ದರಾಮಯ್ಯ ನೀಡಿದ ಭರವಸೆಗಳು

  • ಬಲವಂತವಾಗಿ ರೈತರ ಸಾಲ ವಸೂಲಾತಿಯನ್ನು ಮಾಡಬಾರದೆಂದು ಸಹಕಾರಿ ಹಾಗೂ ರಾಷ್ಟ್ರೀಯ ಬ್ಯಾಂಕ್ ಗಳಿಗೆ ಸೂಚಿಸಲಾಗುವುದು.
  • ಬಗರ್ ಹುಕುಂ, ಅಕ್ರಮ – ಸಕ್ರಮ, ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಉಪ ಮುಖ್ಯಮಂತ್ರಿಗಳು ಕಂದಾಯ, ಅರಣ್ಯ, ಕೃಷಿ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು.
  • ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿಧಾನಪರಿಷತ್ ನಲ್ಲಿ ಅನುಮೋದನೆಯಾಗಿಲ್ಲ. ಜಂಟಿ ಸಮಿತಿಯಲ್ಲಿ ಇದಕ್ಕೆ ಅನುಮೋದನೆ ಪಡೆಯಲು ಕ್ರಮ ವಹಿಸಲಾಗುವುದು.
  • ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ಮಸೂದೆ, 2023 ರಡಿ 12 ಗಂಟೆ ಕೆಲಸ ಮಾಡುವ ಕಾಯ್ದೆ ಕಡ್ಡಾಯವಾಗಿ ಆಗಬೇಕೆಂದು ಇಲ್ಲ. ಈ ಬಗ್ಗೆ ಪರಿಶೀಲಿಸಿ ಅದನ್ನು ವಾಪಸ್ಸು ಪಡೆದು ಮೊದಲಿನಂತೆ 8 ಗಂಟೆಗಳಿಗೆ ಇಳಿಸಲು ಕ್ರಮ.
  • ಭೂ ಸುಧಾರಣಾ ಕಾಯ್ದೆ 79 ಎ ಹಾಗೂ ಬಿ ಪರಿಚ್ಛೇಧಕ್ಕೆ ತಂದಿರುವ ತಿದ್ದುಪಡಿ ಸರಿಪಡಿಸಲಾಗುವುದು.
  • ಸರ್ಕಾರ ಕಾನೂನಾತ್ಮಕವಾಗಿ ಮಾಡಬಹುದಾದ ಎಲ್ಲ ಕ್ರಮವನ್ನು ಕೈಗೊಳ್ಳಲಿದೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬು ಕುಮಾರ್, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಹಶೀನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಉಪಸ್ಥಿತರಿದ್ದರು.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್