AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವಿಲ್ಸನ್ ಗಾರ್ಡನ್ ನಿಗೂಢ ಸ್ಫೋಟದ ಕಾರಣ ಪತ್ತೆ

ವಿಲ್ಸನ್ ಗಾರ್ಡನ್​ ನ ಚಿನ್ನಯ್ಯನ ಪಾಳ್ಯದಲ್ಲಿ ಶುಕ್ರವಾರ ಸಂಭವಿಸಿದ ಅನಿಲ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು ಹಲವು ಮನೆಗಳು ನಾಶವಾಗಿವೆ. ಆಡುಗೋಡಿ ಪೊಲೀಸರ ತನಿಖೆಯ ಪ್ರಕಾರ, ಅಡುಗೆ ಅನಿಲ ಸೋರಿಕೆಯಿಂದ ಈ ದುರ್ಘಟನೆ ಸಂಭವಿಸಿದೆ. ಶುಕ್ರವಾರ ಬೆಳಿಗ್ಗೆ ಸ್ಫೋಟ ಸಂಭವಿಸಿತು ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ಮುಂದುವರಿದಿದೆ.

ಬೆಂಗಳೂರು: ವಿಲ್ಸನ್ ಗಾರ್ಡನ್ ನಿಗೂಢ ಸ್ಫೋಟದ ಕಾರಣ ಪತ್ತೆ
ಸ್ಫೋಟಕ್ಕೆ ಕುಸಿದು ಬಿದ್ದಿರುವ ಮನೆಗಳು
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 19, 2025 | 11:50 AM

Share

ಬೆಂಗಳೂರು, ಆಗಸ್ಟ್​ 19: ವಿಲ್ಸನ್ ಗಾರ್ಡನ್​ನ ಚಿನ್ನಯ್ಯನ ಪಾಳ್ಯದಲ್ಲಿ ಅನುಮಾನಾಸ್ಪದವಾಗಿ ಶುಕ್ರವಾರ (ಆ.15) ಸ್ಫೋಟ (Explosion) ಸಂಭವಿಸಿದ್ದು, 8ಕ್ಕೂ ಹೆಚ್ಚು ಮನೆಗಳು ಧ್ವಂಸವಾಗಿದ್ದವು. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಆಡುಗೋಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ದುರಂತಕ್ಕೆ ಕಾರಣವೇನೆಂಬುವುದು ಗೊತ್ತಾಗಿದೆ. ಅಡುಗೆ ಅನಿಲ (Gas Cylender) ಸೋರಿಕೆಯಾಗಿ ಸ್ಫೋಟ ಸಂಭವಿಸಿದೆ ಎಂದು ತನಿಖೆ ವೇಳೆ ಬಹಿರಂಗಗೊಂಡಿದೆ. ಮನೆಯಲ್ಲಿ ರಾತ್ರಿಯೆಲ್ಲ ಗ್ಯಾಸ್ ಸೋರಿಕೆಯಾಗಿತ್ತು. ಬೆಳಗ್ಗೆ ಮಗು ಟಿವಿ ಆನ್ ಮಾಡಿದಾಗ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಸ್ಫೋಟಗೊಂಡ ದಿನ ಮುಬಾರಕ್ ಎಂಬ ಬಾಲಕ ಮೃತಪಟ್ಟಿದ್ದನು. ಸೋಮವಾರ ತಾಯಿ ಕಸ್ತೂರಮ್ಮ ಮಗಳು ಖಯಾಲ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಟ್ಟು 11 ಜನ ಗಾಯಗೊಂಡಿದ್ದರು. 11 ಜನರಲ್ಲಿ ಮೂವರು ಮೃತಪಟ್ಟಿದ್ದಾರೆ. ಸರಸಮ್ಮ ಎಂಬುವರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಜನರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಡುಗೋಡಿ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ

ಮೃತ ಕಸ್ತೂರಮ್ಮ ಮನೆಯಲ್ಲಿ ಸ್ಫೋಟ ಸಂಭವಿಸಿತ್ತು. ಮೃತ ಮುಬಾರಕ್​ನ ಪಕ್ಕದ ಮನೆಯಲ್ಲಿ ಕಸ್ತೂರಮ್ಮ ವಾಸವಿದ್ದರು. ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿತ್ತು. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿತ್ತು.

ಮನೆಗಳನ್ನು ನಾವೇ ದುರಸ್ತಿ ಮಾಡಿಸಿಕೊಡುತ್ತೇವೆ: ಸಿಎಂ ಸಿದ್ದರಾಮಯ್ಯ

ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಪರಿಶೀಲಿಸಿದ್ದರು. ಬಳಿಕ ಮಾತನಾಡಿದ್ದ ಅವರು, ಮೇಲ್ನೋಟಕ್ಕೆ ಗ್ಯಾಸ್​ ಸಿಲಿಂಡರ್ ಸ್ಫೋಟದಂತೆ ಕಂಡುಬಂದಿದೆ. ಕಸ್ತೂರಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮುಬಾರಕ್​ ಎಂಬ ಬಾಲಕ ಮೃತಪಟ್ಟಿದ್ದಾನೆ. ಸ್ಫೋಟದ ತೀವ್ರತೆಗೆ ಸುಮಾರು 13 ಮನೆಗಳಿಗೆ ಹಾನಿಯಾಗಿದ್ದು, ನಾವೇ ದುರಸ್ತಿ ಮಾಡಿಸಿಕೊಡುತ್ತೇವೆ ಎಂದು ಅವರು ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:49 am, Tue, 19 August 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್