Crime News: ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಮಚ್ಚು ಬೀಸಿದ್ದ ಪುಂಡರ ಸೆರೆ

ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ರಾಷ್ಟ್ರೀಯ ಹೆದ್ದಾರಿ4 ಬಿಲ್ಲಿನಕೋಟೆ ಬಳಿ ನಡೆದಿದೆ. ಮಾರಗೊಂಡನಹಳ್ಳಿ ಗ್ರಾಮದ ನರಸಿಂಹರಾಜು (48) ಮೃತ ಆಟೋ ಚಾಲಕ.

Crime News: ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಮಚ್ಚು ಬೀಸಿದ್ದ ಪುಂಡರ ಸೆರೆ
ಬಂಧಿತ ಆರೋಪಿಗಳು
Updated By: ಗಂಗಾಧರ​ ಬ. ಸಾಬೋಜಿ

Updated on: Jun 12, 2022 | 10:22 AM

ಬೆಂಗಳೂರು: ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಮಚ್ಚು ಬೀಸಿದ್ದ ಪುಂಡರನ್ನು ಬೆಂಗಳೂರಿನ ಬ್ಯಾಟರಾಯಪುರ ಪೊಲೀಸರು ಬಂಧಿಸಿದ್ದಾರೆ. ಉದಯ್, ಕಿರಣ್​ ಬಂಧಿತ ಆರೋಪಿಗಳು. ನಾಪತ್ತೆಯಾಗಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ. ಜೂನ್ 2ರ ರಾತ್ರಿ 9.30ರ ಸುಮಾರಿಗೆ ಬಂಕ್​ನಲ್ಲಿ ಮಚ್ಚು ಬೀಸಿ ಪರಾರಿಯಾಗಿದ್ದರು. ನಯಾರ ಬಂಕ್​ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಪರಾರಿಯಾಗಿದ್ದರು. ಬಂಕ್ ಸಿಬ್ಬಂದಿ ಮೇಲೆ ಮಚ್ಚು ಬೀಸಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಂಕ್ ಸಿಬ್ಬಂದಿ ನೀಡಿದ್ದ ದೂರಿನನ್ವಯ ಉದಯ್, ಕಿರಣ್​ ಬಂಧನ ಮಾಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಸೂಲಿಗೆ ಇಳಿದ ನೆಲಮಂಗಲ ಪೊಲೀಸರು

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೆಲಮಂಗಲ ಪೊಲೀಸರು ವಸೂಲಿಗೆ ಇಳಿದಿದ್ದು, ಹಗಲು ದರೋಡೆ ನಡೆಸಿದ್ದಾರೆ. ದಂಡದ ನೆಪದಲ್ಲಿ ಹಣ ಸುಲಿಗೆ ಮಾಡುತ್ತಿದ್ದು, ಬೈಕ್​ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ವೃದ್ಧನಿಂದ 70 ರೂಪಾಯಿ ವಸೂಲಿ ಮಾಡಿದ್ದಾರೆ. ನೆಲಮಂಗಲ ಪೊಲೀಸರ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Jobs: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿನ 130 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಮನೆಯ ಕಾಂಪೌಂಡ್​ಗೆ ನುಗ್ಗಿದ ಖಾಸಗಿ ಬಸ್

ನಗರದ ಮನೆಯ ಕಾಂಪೌಂಡ್​ಗೆ ಖಾಸಗಿ ಬಸ್​ ನುಗ್ಗಿರುವಂತಹ ಘಟನೆ​ ಜಾಲಹಳ್ಳಿಯ ಅಯ್ಯಪ್ಪ ದೇವಸ್ಥಾನದ​ ಪೈಪ್​ಲೈನ್ ರಸ್ತೆಯಲ್ಲಿ ನಡೆದಿದೆ. ಕಾಂಪೌಂಡ್​ಗೆ ಡಿಕ್ಕಿಹೊಡೆದ ರಭಸಕ್ಕೆ ಬಸ್​ ಮುಂಭಾಗ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ. ಅಪಘಾತ ನಂತರ ಖಾಸಗಿ ಬಸ್ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದ್ದೊಯ್ದ ಖತರ್ನಾಕ್ ಕಳ್ಳರು

ತುಮಕೂರು: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದ್ದೊಯ್ದ ಖತರ್ನಾಕ್ ಕಳ್ಳರು. ನಗರದ ಹನುಂಮತಪುರ ರಸ್ತೆಯ ಕೋತಿತೋಪು ಸರ್ಕಲ್​ನಲ್ಲಿ ಘಟನೆ ನಡೆದಿದೆ. ಮನೆ ಮುಂದಿದ್ದ ಯಮಹಾ RX 135ನ್ನು ಕಳ್ಳರು ಕದ್ದೊಯ್ದಿದ್ದಾರೆ. ಕಳ್ಳತನದ ದೃಶ್ಯ ಸಿಸಿ ಕೆಮೆರಾದಲ್ಲಿ ಸೆರೆಯಾಗಿದೆ. ಮಾಜಿ ನಗರಸಭೆ ಉಪಾಧ್ಯಕ್ಷ ವಾಲೆ ಚಂದ್ರಯ್ಯನವರ ಮಗ ವಾಸುರವರಿಗೆ ಬೈಕ್ ಸೇರಿದೆ. ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

ನೆಲಮಂಗಲ: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ರಾಷ್ಟ್ರೀಯ ಹೆದ್ದಾರಿ4 ಬಿಲ್ಲಿನಕೋಟೆ ಬಳಿ ನಡೆದಿದೆ. ಮಾರಗೊಂಡನಹಳ್ಳಿ ಗ್ರಾಮದ ನರಸಿಂಹರಾಜು (48) ಮೃತ ಆಟೋ ಚಾಲಕ. ಅತೀ ವೇಗವಾಗಿ ಚಲಿಸುವ ವೇಳೆ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.