ಮಹಿಳೆ ಅಪಹರಣ ಪ್ರಕರಣ; ಹೆಚ್​ಡಿ ರೇವಣ್ಣ ಜಾಮೀನು ಷರತ್ತು ಸಡಿಲಿಸಿದ ನ್ಯಾಯಾಲಯ

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿದ್ದ ಹೆಚ್‌.ಡಿ ರೇವಣ್ಣ ಅವರಿಗೆ ಈ ಹಿಂದೆ ಕೋರ್ಟ್​ ಷರತ್ತು ಬದ್ಧ ಜಾಮೀನು ನೀಡಿತ್ತು. ನಂತರ ಹೆಚ್.ಡಿ.ರೇವಣ್ಣ(HD Revanna) ಅವರು ಜಾಮೀನು ಷರತ್ತು ಸಡಿಲಿಕೆ ಕೋರಿದ್ದರು. ಇದೀಗ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ.

ಮಹಿಳೆ ಅಪಹರಣ ಪ್ರಕರಣ; ಹೆಚ್​ಡಿ ರೇವಣ್ಣ ಜಾಮೀನು ಷರತ್ತು ಸಡಿಲಿಸಿದ ನ್ಯಾಯಾಲಯ
ಹೆಚ್​ಡಿ ರೇವಣ್ಣ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 03, 2024 | 7:49 PM

ಬೆಂಗಳೂರು, ಸೆ.03: ಮೈಸೂರು ಜಿಲ್ಲೆಯ ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತು ಸಡಿಲಿಕೆ ಕೋರಿದ್ದ ಹೆಚ್.ಡಿ.ರೇವಣ್ಣ(HD Revanna) ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ. ಈ ಮೂಲಕ ಹೊರ ರಾಜ್ಯಗಳಿಗೆ ಸಂಚರಿಸಲು ಅನುಮತಿ ನೀಡಿದೆ. ಆದರೆ, ಕೋರ್ಟ್​ ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳದಂತೆ ಷರತ್ತು ಮಾರ್ಪಾಡು ಮಾಡಿ ವಿಶೇಷ ಕೋರ್ಟ್‌ನ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶಿಸಿದ್ದಾರೆ.

ಏನಿದು ಅಪಹರಣ ಪ್ರಕರಣ ?

ಹಾಸನ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎಂದು ಬಿಡುಗಡೆಯಾಗಿದ್ದ ಅಶ್ಲೀಲ ವಿಡಿಯೋದಲ್ಲಿ ‘ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಈ ಹಿನ್ನಲೆ ಕೇಸ್​ ಸಂಬಂಧ ರೇವಣ್ಣ ಪತ್ನಿ ಭವಾನಿ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಎಸ್​ಐಟಿ ಬಂಧಿಸಿತ್ತು. ಬಳಿಕ ರೇವಣ್ಣ ಅವರನ್ನು ಮೊದಲ ಆರೋಪಿಯಾಗಿದ್ದರು.

ಇದನ್ನೂ ಓದಿ:ಅಪಹರಣ ಪ್ರಕರಣ: ಎಚ್​ಡಿ ರೇವಣ್ಣಗೆ ಜಾಮೀನು ಮಂಜೂರು, ಷರತ್ತುಗಳೇನು?

ಇನ್ನು ಯಾವಾಗ ಕೇಸ್​ ದೊಡ್ಡದಾಗುತ್ತಾ ಹೋಯಿತೋ ಮಹಿಳೆಯ ಪತ್ತೆಗಾಗಿ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಬಳಿಕ ಸಂತ್ರಸ್ತ ಮಹಿಳೆ ಹೆಚ್​ಡಿ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು. ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿದ್ದ ಹೆಚ್‌.ಡಿ ರೇವಣ್ಣ  ಅವರಿಗೆ ಕೋರ್ಟ್​ ಷರತ್ತು ಬದ್ಧ ಜಾಮೀನು ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ