ಬೆಂಗಳೂರು, ಸೆ.03: ಮೈಸೂರು ಜಿಲ್ಲೆಯ ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತು ಸಡಿಲಿಕೆ ಕೋರಿದ್ದ ಹೆಚ್.ಡಿ.ರೇವಣ್ಣ(HD Revanna) ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ. ಈ ಮೂಲಕ ಹೊರ ರಾಜ್ಯಗಳಿಗೆ ಸಂಚರಿಸಲು ಅನುಮತಿ ನೀಡಿದೆ. ಆದರೆ, ಕೋರ್ಟ್ ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳದಂತೆ ಷರತ್ತು ಮಾರ್ಪಾಡು ಮಾಡಿ ವಿಶೇಷ ಕೋರ್ಟ್‌ನ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶಿಸಿದ್ದಾರೆ.
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎಂದು ಬಿಡುಗಡೆಯಾಗಿದ್ದ ಅಶ್ಲೀಲ ವಿಡಿಯೋದಲ್ಲಿ ‘ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಈ ಹಿನ್ನಲೆ ಕೇಸ್ ಸಂಬಂಧ ರೇವಣ್ಣ ಪತ್ನಿ ಭವಾನಿ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಎಸ್ಐಟಿ ಬಂಧಿಸಿತ್ತು. ಬಳಿಕ ರೇವಣ್ಣ ಅವರನ್ನು ಮೊದಲ ಆರೋಪಿಯಾಗಿದ್ದರು.
ಇದನ್ನೂ ಓದಿ:ಅಪಹರಣ ಪ್ರಕರಣ: ಎಚ್ಡಿ ರೇವಣ್ಣಗೆ ಜಾಮೀನು ಮಂಜೂರು, ಷರತ್ತುಗಳೇನು?
ಇನ್ನು ಯಾವಾಗ ಕೇಸ್ ದೊಡ್ಡದಾಗುತ್ತಾ ಹೋಯಿತೋ ಮಹಿಳೆಯ ಪತ್ತೆಗಾಗಿ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಬಳಿಕ ಸಂತ್ರಸ್ತ ಮಹಿಳೆ ಹೆಚ್ಡಿ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದರು. ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿದ್ದ ಹೆಚ್.ಡಿ ರೇವಣ್ಣ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ