ವಿಮಾನದಲ್ಲಿ ಸಿಗರೇಟ್ ಸೇದಿ ಆತಂಕ ಸೃಷ್ಟಿಸಿದ ಯುವತಿ, ಬೆಂಗಳೂರಿನಲ್ಲಿ ಫ್ಲೈಟ್ ಲ್ಯಾಂಡ್ ಆಗುತ್ತಿದ್ದಂತೆಯೇ ಅರೆಸ್ಟ್
ಕೋಲ್ಕತ್ತಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಿಗರೇಟ್ ಸೇದಿದ ಯುವತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ದೇವನಹಳ್ಳಿ: ಇಂದು ಜಗತ್ತಿನಾದ್ಯಂತ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮಹಿಳೆಯರ ಸಾಧನೆಯನ್ನು ಕೊಂಡಾಡಲಾಗುತ್ತಿದೆ. ಆದ್ರೆ ಇತ್ತ ಯುವತಿಯೊಬ್ಬಳ ವರ್ತನೆಯಿಂದ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಿಗರೇಟ್ ಸೇದಿ ಯುವತಿ ಆತಂಕ ಸೃಷ್ಟಿಸಿದ್ದಾಳೆ.
ಮಾ.5ರಂದು ರಾತ್ರಿ 9.50ಕ್ಕೆ ಕೋಲ್ಕತ್ತಾದಿಂದ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಪ್ರಿಯಾಂಕ ಎಂಬ ಯುವತಿ ಇಂಡಿಗೋ 6E716 ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿದ್ದಾಳೆ. ವಿಮಾನ ಬೆಂಗಳೂರಿಗೆ ಲ್ಯಾಂಡ್ ಆಗುವ ಅರ್ಧ ಗಂಟೆ ಮುನ್ನ ಸಿಗರೇಟ್ ಸೇದಿದ್ದಾಳೆ. ಶೌಚಾಲಯ ಬಾಗಿಲು ತೆಗಿಸಿದಾಗ ಡಸ್ಟ್ ಬಿನ್ನಲ್ಲಿ ಸಿಗರೇಟ್ ತುಂಡು ಪತ್ತೆಯಾಗಿದೆ. ಸಿಗರೇಟ್ ಕಂಡು ತಕ್ಷಣ ಸಿಬ್ಬಂದಿ ಡಸ್ಟ್ ಬಿನ್ಗೆ ನೀರು ಸುರಿದಿದ್ದಾರೆ. ಬಳಿಕ ಫ್ಲೈಟ್ ಲ್ಯಾಂಡ್ ಆಗುತ್ತಿದ್ದಂತೆ ಯುವತಿಯನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಕೆಲಕಾಲ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಇತರರ ಜೀವ & ವೈಯಕ್ತಿಕ ಸುರಕ್ಷತೆಗೆ ಅಪಾಯ ಆರೋಪದಡಿ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:05 pm, Wed, 8 March 23