AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ಧ ಡೆತ್​ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ಧ ಡೆತ್​ ನೋಟ್ ಬರೆದು ವಾಟ್ಸಪ್​ ಸ್ಟೇಟಸ್​ಗೆ ಹಾಕಿ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ಧ ಡೆತ್​ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ಪವಿತ್ರಾ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ರಮೇಶ್ ಬಿ. ಜವಳಗೇರಾ|

Updated on: Jul 04, 2023 | 7:16 AM

Share

ಬೆಂಗಳೂರು: ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್ (Death Note) ಬರೆದಿಟ್ಟು ಪತ್ನಿ ಆತ್ಮಹತ್ಯೆ(suicide )ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ(Bengaluru) ನಡೆದಿದೆ. ಹೆಗ್ಗನಹಳ್ಳಿ‌ ನಿವಾಸಿ ಪವಿತ್ರಾ ಎನ್ನುವ ಮಹಿಳೆ, ಡೆತ್ ನೋಟ್ ಬರೆದಿಟ್ಟು ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ನೇಣಿಗೆ ಶರಣಾಗಿದ್ದಾಳೆ. ಜುಲೈ 02 ರ ಬೆಳಗಿನ ಜಾವ ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಕೆಂಗೇರಿ ಪೊಲೀಸ್​ ಠಾಣೆಯಲ್ಲಿ ಚೇತನ್ ಗೌಡ ಹಾಗೂ ಮತ್ತೊರ್ವ ಯುವತಿ ವಿರುದ್ದ ಎಫ್.ಐ.ಆರ್ ದಾಖಲಾಗಿದ್ದು, ಡೆತ್ ನೋಟ್ ಹಾಗೂ ಮೃತಳ ಎರಡು ಫೋನ್ ವಶಕ್ಕೆ ಪಡೆದುಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಫೈನಾನ್ಶಿಯರ್ ಜತೆ ಲವ್ವಿಡವ್ವಿ: ಹೋಟೆಲ್​ ನಡೆಸುತ್ತಿದ್ದ ಗಂಡನನ್ನೇ ಮುಗಿಸಿದ್ದ ಕೊಲೆಗಾತಿ ಪತ್ನಿ ಸಿಕ್ಕಿಬಿದ್ಲು

ಪವಿತ್ರಾ ಮೊದಲ ಪತಿಗೆ ವಿಚ್ಚೇದನ ನೀಡಿ ಚೇತನ್ ಗೌಡರನ್ನ ಎರಡನೇ ಮದುವೆಯಾಗಿದ್ದಳು. ಚೇತನ್ ಗೌಡ ಸುಮುಖ ಮರ್ಚೆಂಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಾಲೀಕನಾಗಿದ್ದಾನೆ. ಆದ್ರೆ, ಗಂಡನಿಗೆ ಬೇರೊಂದು ಯುವತಿ ಜೊತೆ ಅನೈತಿಕ ಸಂಬಂಧ (illicit relationship) ಇದೆ ಎಂದು ಮೃತ ಪತ್ನಿ ಪವಿತ್ರಾಗೆ ಗೊತ್ತಾಗಿದೆ. ಈ ವಿಚಾರವಾಗಿ ಪವಿತ್ರಾ ಹಾಗೂ ಚೇತನ್ ಗೌಡ ನಡುವೆ ಜಗಳವಾಗುತ್ತಿತ್ತು. ಈ ಬಗ್ಗೆ ತನ್ನ ತಾಯಿ ಪದ್ಮಮ್ಮ ಬಳಿ ಹೇಳಿದ್ದಳು. ಕೊನೆಗೆ ಮನನೊಂದು ಪವಿತ್ರಾ ಡೆತ್ ನೋಟ್ ವಾಟ್ಸಾಫ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ.

ಮಗಳ ವಾಟ್ಸಾಪ್​ ಸ್ಟೇಟಸ್ ನಲ್ಲಿ ಡೆತ್ ನೋಟ್ ನೋಡಿ ತಾಯಿ ಮನೆ ಬಳಿ ಬಂದಾಗ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇದೀಗ ಮೃತಳ ತಾಯಿ ಪದ್ಮಮ್ಮರ ದೂರಿನ ಮೇರೆಗೆ ಕೆಂಗೇರಿ ಠಾಣೆಯಲ್ಲಿ ಚೇತನ್ ಗೌಡ ಹಾಗೂ ಮತ್ತೊರ್ವ ಯುವತಿ ವಿರುದ್ದ ಐಪಿಸಿ 306 ಆತ್ಮಹತ್ಯೆ ಪ್ರಚೋದನೆ ಅಡಿ ದೂರು ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ