ಬೆಂಗಳೂರಿನಲ್ಲಿ ಭೀಕರ ಅಪಘಾತ: ಮಹಿಳೆಯ ತಲೆ ಛಿದ್ರ, ಅಜ್ಜಿಯ ಎರಡೂ ಕಾಲು ಕಟ್

ಬೆಂಗಳೂರಿನ ನಾಯಂಡಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನು ಅಜ್ಜಿ, ಮೊಮ್ಮಗ ಬಚಾವ್ ಆಗಿದ್ದಾರೆ.

ಬೆಂಗಳೂರಿನಲ್ಲಿ  ಭೀಕರ ಅಪಘಾತ: ಮಹಿಳೆಯ ತಲೆ ಛಿದ್ರ,  ಅಜ್ಜಿಯ ಎರಡೂ ಕಾಲು ಕಟ್
Follow us
|

Updated on:Apr 02, 2023 | 7:42 PM

ಬೆಂಗಳೂರು: ನಗರದ ನಾಯಂಡಹಳ್ಳಿ ಬಳಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅದೃಷ್ಟವಶಾತ್ ಮಗು ಹಾಗೂ ಅಜ್ಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಮೆಂಟ್ ತುಂಬಿದ್ದ ಲಾರಿ ಬೈಕ್​​ ಮೇಲೆ ಹರಿದು ಬಳಿಕ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದೆ. ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ಅನುಷಾ ತಲೆ ಛಿದ್ರವಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಅಪಘಾತದಲ್ಲಿ ಮೃತ ಅನುಷಾ ತಾಯಿ ವೃದ್ಧೆ ವನಜಾಕ್ಷಿ ಹಾಗೂ ಮಗ ಆರ್ಯಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: Bangarpet: ಎರಡು ಬೈಕ್​ಗಳ ನಡುವೆ ಅಪಘಾತ: ಸವಾರರಿಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರಿನ ನಾಯಂಡಹಳ್ಳಿ ಬಳಿ ಇಂದು ಈ ಭೀಕರ ಅಪಘಾತ ಸಂಭವಿಸಿದ್ದು, ಮಂಡ್ಯ ಮೂಲದ ಅನುಷಾ ಸಾವಿಗೀಡಾದ ಮಹಿಳೆ. ಈಕೆ ತನ್ನ ತಾಯಿ ಮತ್ತು 7 ವರ್ಷದ ಮಗುವನ್ನು ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡು ದೀಪಾಂಜಲಿನಗರ ಕಡೆಯಿಂದ ಬರುತ್ತಿದ್ದರು. ಈ ಸಂದರ್ಭದಲ್ಲಿ ಸಿಮೆಂಟ್ ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಬೈಕ್​ ಮೇಲೆ ಹರಿದು ಬಳಿಕ ಕೆಎಸ್​ಆರ್​​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಅನುಷಾ ತಲೆ ಮೇಲೆ ಹರಿದಿದೆ. ಇನ್ನು ಅಜ್ಜಿ ವನಜಾಕ್ಷಿಯ ಎರಡು ಕಾಲುಗಳ ಕಟ್ ಆಗಿದ್ದು, ಮಗುವಿಗೂ ಸಹ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇದನ್ನು ನೋಡಿದ ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಪ್ರತಿಭಟನೆ ನಡೆಸಿದರು. ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದ್ದರಿಂದ ಲಾರಿ ನಿಂತಿದೆ. ಇಲ್ಲದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು ಎನ್ನಲಾಗಿದೆ. ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು ಲಾರಿಗೆ ಕಲ್ಲು ತೂರಿದ್ದು, ಮುಂಭಾಗದ ಗಾಜುಗಳು ಒಡೆದುಹೋಗಿವೆ.

ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಆಗಮಿಸಿ ಪ್ರತಿಭಟನೆಕಾರರನ್ನು ಚದುರಿಸಲು ಪೊಲೀಸರು  ಲಾಠಿ ಬೀಸಿದರು. ಇನ್ನು ಘಟನೆ ಸಂಭವಿಸುತ್ತಿದ್ದಂತೆಯೇ ಲಾರಿ ಚಾಲಕ ಸ್ಥಳದಿಂದ ಎಸ್ಕೇಪ್​ ಆಗಿದ್ದು, ಆ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾರ್ವಜನಿಕರು ಚಾಲಕನ್ನು ಹಿಡಿಯಲು ಪ್ರಯತ್ನಿಸಿದರಾದರೂ ಸಾಧ್ಯವಾಗಿಲ್ಲ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ಅಪಘಾತ

ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ಇಂದು ಸಂಜೆ ಅಪಘಾತ ಸಂಭವಿಸಿದೆ. ಟೈರ್ ಸ್ಫೋಟಗೊಂಡು ಬೈಕ್‌ ಪಲ್ಟಿಯಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಬೈಕ್‌ನಲ್ಲಿ ತೆರಳುತ್ತಿದ್ದ ಆನಂದ್‌, ಸುಲೋಚನಾ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:22 pm, Sun, 2 April 23