AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ ಸರ್ಕಲ್​ ಅಂಡರ್​ಪಾಸ್​ ಅವಘಡ ಪ್ರಕರಣ: ಕಾರು ಚಾಲಕ ಅರೆಸ್ಟ್

ಬೆಂಗಳೂರು ನಗರದ ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ ಕಾರು ಮುಳುಗಡೆಯಾಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಆರ್​ ಸರ್ಕಲ್​ ಅಂಡರ್​ಪಾಸ್​ ಅವಘಡ ಪ್ರಕರಣ: ಕಾರು ಚಾಲಕ ಅರೆಸ್ಟ್
ಕೆಆರ್​ ಸರ್ಕಲ್ ಅಂಡರ್​ಪಾಸ್​ನ ಘಟನೆ ನಂತರ ತಪ್ಪಿಸಿಕೊಂಡಿದ್ದ ಕಾರು ಚಾಲಕ ಬಂಧನ
Rakesh Nayak Manchi
|

Updated on: May 22, 2023 | 3:23 PM

Share

ಬೆಂಗಳೂರು: ನಗರದ ಕೆಆರ್​ ಸರ್ಕಲ್​ ಅಂಡರ್​ಪಾಸ್​ನಲ್ಲಿ (KR Circle Underpass) ಕಾರು ಮುಳುಗಡೆಯಾಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹರೀಶ್ ಬಂಧಿಸಿದ ಕಾರು ಚಾಲಕ. ನೀರು ನಿಂತಿದ್ದರೂ ಬೇಜವಾಬ್ದಾರಿತನದಿಂದ ಅಂಡರ್ ಪಾಸ್​ನಲ್ಲಿ ಕಾರು ಚಲಾಯಿಸಿ ಅವಘಡಕ್ಕೆ ಕಾರಣನಾಗಿರುವ ಆರೋಪದಡಿ ಹರೀಶ್​ನನ್ನು ಬಂಧಿಸಲಾಗಿದೆ.

ಪ್ರಯಾಣಿಕರು ಬೇಡ ಎಂದು ಹೇಳಿದರೂ ಕೇಳದ ಚಾಲಕ ಹರೀಶ್, ನೀರು ತುಂಬಿದ್ದ ಅಂಡರ್ ಪಾಸ್​ನಲ್ಲಿ ಕಾರು ಚಲಾಯಿಸಿದ್ದಾನೆ. ಈ ವೇಳೆ ಕಾರ್ ಬಂದ್ ಬಿದ್ದ ಹಿನ್ನೆಲೆ ಪ್ರಯಾಣಿಕರು ಕಾರಿನಿಂದ ಇಳಿಯಲು ಯತ್ನಿಸಿದಾಗ ಹರೀಶ್, ಬೇಡ ತಾನೇ ಕಾರ್ ಆನ್ ಮಾಡಿ ಕರೆದೊಯ್ಯುವುದಾಗಿ ಹೇಳಿದ್ದ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: Bangalore Rain: ಬೆಂಗಳೂರು ಮಳೆ ದುರಂತ, ಮಾನವೀಯತೆ ಮರೆತ ಸೇಂಟ್‌ ಮಾರ್ಥಾಸ್‌ ಆಸ್ಪತ್ರೆ, ಇನ್ಫೋಸಿಸ್ ಉದ್ಯೋಗಿ ಬಲಿ

ಮತ್ತೊಂದೆಡೆ ಬಿಬಿಎಂಪಿ ಬೆಜವಾಬ್ದಾರಿಗೆ ಅಂಡರ್ ಪಾಸ್​ನಲ್ಲಿ ಮಳೆ ನೀರು ತುಂಬಿದೆ ಎಂದು ಆರೋಪಿಸಲಾಗಿದೆ. ಭಾನುರೇಖಾ ಸಾವಿಗೆ ಚಾಲಕ ಹರೀಶ್, ಬಿಬಿಎಂಪಿ ಕಾರಣ ಎಂದು ಮೃತಳ ಸಹೋದರ ಬಿಬಿಎಂಪಿ ಹಾಗೂ ಕಾರ್ ಚಾಲಕನ ವಿರುದ್ಧ ದೂರು ನೀಡಿದ್ದರು. ಅದರಂತೆ ಕಾರು ಚಾಲಕನ್ನು ಬಂಧಿಸಲಾಗಿದೆ. ಮಳೆ ಬರುತ್ತದೆ ಎಂಬ ಮುನ್ಸೂಚನೆ ಇದ್ದರೂ ಮುನ್ನೆಚ್ಚರಿಕೆ ಕೈಗೊಳ್ಳದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮವಾಗುವುದೇ? ಕಾದುನೋಡಬೇಕಿದೆ.

ಪ್ರಕರಣದ ಹಿನ್ನೆಲೆ

ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಕೆಆರ್ ಸರ್ಕಲ್​ನ ಅಂಡರ್​ಪಾಸ್​ನಲ್ಲಿ ಸುಮಾರು 5 ಅಡಿಯಷ್ಟು ಎತ್ತರಕ್ಕೆ ನೀರು ತಿಂಬಿತ್ತು. ಹೀಗಿದ್ದರೂ ಆರು ಮಂದಿ ಪ್ರಯಾಣಿಸುತ್ತಿದ್ದ ಕಾರು ಈ ಅಂಡರ್​ಪಾಸ್​ನಲ್ಲಿ ಹೋಗಿ ಮುಳುಗಿತ್ತು. ಕೂಡಲೇ ಎಚ್ಚೆತ್ತ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸಿ ಆರು ಮಂದಿಯನ್ನು ರಕ್ಷಿಸಿದ್ದರು. ಈ ಪೈಕಿ ತೀವ್ರ ಅಸ್ವಸ್ಥಗೊಂಡಿದ್ದ ಬಾನುರೇಖಾ ಸಾವನ್ನಪ್ಪಿದ್ದಳು. ಘಟನೆ ನಂತರ ಕಾರು ಚಾಲಕ ಪರಾರಿಯಾಗಿದ್ದನು. ಈ ಘಟನೆ ನಡೆದ ನಂತರ ಅದೇ ನೀರಿನಲ್ಲಿ ಆಟೋವೊಂದು ಮುಳುಗಡೆಯಾಗಿತ್ತು. ಆಟೋ ಚಾಲಕ ಬಚಾವ್ ಆಗಿದ್ದರೆ ಮಹಿಳೆ ಸಂಕಷ್ಟಕ್ಕೆ ಸಿಲುಕಿದ್ದಳು. ಈಕೆಯನ್ನೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು