Bengaluru News: ಬಲವಂತವಾಗಿ ಬಿಎಂಟಿಸಿ ಕಂಡಕ್ಟರ್​​ ಟೋಪಿ ತೆಗೆಸಿದ ಮಹಿಳೆ; ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್

ಟ್ವಿಟರ್‌ನಲ್ಲಿ ಅನೇಕ ಜನರು ಮಹಿಳೆ ಮತ್ತು ಅವರ ನಡೆಯನ್ನು ಖಂಡಿಸಿಸಿದ್ದರೆ, ಇನ್ನು ಕೆಲವರು ಅವರನ್ನು ಬೆಂಬಲಿಸಿದ್ದಾರೆ. ಇನ್ನು ಕೆಲವರು ಮಹಿಳೆ ನೈತಿಕ ಪೊಲೀಸ್‌ಗಿರಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Bengaluru News: ಬಲವಂತವಾಗಿ ಬಿಎಂಟಿಸಿ ಕಂಡಕ್ಟರ್​​ ಟೋಪಿ ತೆಗೆಸಿದ ಮಹಿಳೆ; ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್
ವೈರಲ್ ಆಗಿರುವ ವಿಡಿಯೊದಿಂದ ತೆಗೆದ ಸ್ಕ್ರೀನ್​ಶಾಟ್ (Photo credit: Twitter/ @Mohamed47623244)
Follow us
TV9 Web
| Updated By: Ganapathi Sharma

Updated on: Jul 12, 2023 | 3:55 PM

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್ ಕಂಡಕ್ಟರ್‌ ಕರ್ತವ್ಯದ ವೇಳೆ ಟೋಪಿ ಧರಿಸಿದ್ದಕ್ಕೆ ಬೆಂಗಳೂರಿನ ಮಹಿಳೆಯೊಬ್ಬರು ಆಕ್ಷೇಪ ವ್ಯಕ್ತಪಡಿಸಿ ಅದನ್ನು ತೆಗೆಯುವಂತೆ ಮಾಡಿದ್ದಾರೆ. ಘಟನೆಯ ವಿಡಿಯೋ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಬಿಎಂಟಿಸಿ ಅಧಿಕಾರಿಗಳ ಪ್ರಕಾರ, ಘಟನೆಯು 10-12 ದಿನಗಳ ಹಿಂದೆ ನಡೆದಿದೆ. ಆದರೆ, ಅದಕ್ಕೆ ಸಂಬಂಧಿಸಿದ ವೀಡಿಯೊ ಮಂಗಳವಾರ ಬಹಿರಂಗವಾಗಿದೆ. ಮೊಹಮ್ಮದ್ ಹನೀಫ್ ಎಂಬವರು ಮಹಿಳೆ ಮತ್ತು ಕಂಡಕ್ಟರ್ ನಡುವಣ ಸಂವಾದದ ವೀಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲೇನಿದೆ?

ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆ ಮತ್ತು ಬಿಎಂಟಿಸಿ ಬಸ್ ಕಂಡಕ್ಟರ್ ನಡುವಿನ ಕನ್ನಡ ಸಂಭಾಷಣೆಯ ಪ್ರತಿ ಹೀಗಿದೆ.

ಮಹಿಳೆ: ಸರ್, ನಿಮ್ಮ ನಿಯಮಗಳ ಪ್ರಕಾರ ಈ ಕ್ಯಾಪ್ ಧರಿಸಲು ನಿಮಗೆ ಅನುಮತಿ ಇದೆಯೇ?

ಕಂಡಕ್ಟರ್: ನಾವು ಅದನ್ನು ಧರಿಸಬಹುದು ಅಥವಾ ಧರಿಸದೇ ಇರಬಹುದು.

ಮಹಿಳೆ: ನೀವು ನಿಮ್ಮ ಮನೆಯಲ್ಲಿ ನಿಮ್ಮ ಧರ್ಮವನ್ನು ಆಚರಿಸಿ. ಇದು ಸಮವಸ್ತ್ರದ ಭಾಗವಾಗಿಲ್ಲದಿದ್ದರೆ, ನೀವು ಅದನ್ನು ಧರಿಸಲು ಸಾಧ್ಯವಿಲ್ಲ. ಇದನ್ನು ಅನುಮತಿಸಲಾಗಿದೆಯೇ ಅಥವಾ ಇಲ್ಲವೇ? ”

ಕಂಡಕ್ಟರ್: ನಾನು ಅದನ್ನು ಹಲವು ವರ್ಷಗಳಿಂದ ಧರಿಸುತ್ತಿದ್ದೇನೆ.

ಹೆಂಗಸು: ನೀವು ಬಹಳ ವರ್ಷಗಳಿಂದ ಅದನ್ನು ಧರಿಸುತ್ತಿದ್ದೀರಿ ಎಂಬುದು ಬೇರೆ ವಿಷಯ. ನೀವು ಮನೆಯಲ್ಲಿ ನಿಮ್ಮ ಧರ್ಮವನ್ನು ಆಚರಿಸಿ, ಅದನ್ನು ಯಾರೂ ವಿರೋಧಿಸುವುದಿಲ್ಲ. ನೀವು ಸರ್ಕಾರಿ ಉದ್ಯೋಗಿ, ನೀವು ಅದನ್ನು ಧರಿಸಬಹುದೇ?

ಕಂಡಕ್ಟರ್: ನಾನು ಈ ವಿಷಯವನ್ನು ವ್ಯವಸ್ಥಾಪಕ ನಿರ್ದೇಶಕರ ಬಳಿ ಪ್ರಸ್ತಾಪಿಸುತ್ತೇನೆ. ಕೊಂಡೊಯ್ಯುತ್ತೇನೆ.

ಮಹಿಳೆ: ನಾನು ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಬೇಕೇ? ಅದಕ್ಕಾಗಿಯೇ ನಾನು ಈ ವೀಡಿಯೊ ಮಾಡುತ್ತಿದ್ದೇನೆ. ನಿಮ್ಮ ನಿಯಮಗಳ ಅಡಿಯಲ್ಲಿ ಇದಕ್ಕೆ ಅವಕಾಶವಿದೆಯೇ? ನಿಮಗೆ ಗೊತ್ತಿಲ್ಲದಿದ್ದರೆ ಅದನ್ನು ತೆಗೆದುಹಾಕಿ. ಅದನ್ನು ನಿಮ್ಮ ಮನೆಯಲ್ಲಿ ಅಥವಾ ಮಸೀದಿಯಲ್ಲಿ ಧರಿಸಿ, ನಾವು ವಿರೋಧಿಸುವುದಿಲ್ಲ.

ಕಂಡಕ್ಟರ್: ನಾನು ಅದನ್ನು ಹಲವು ವರ್ಷಗಳಿಂದ ಧರಿಸುತ್ತಿದ್ದೇನೆ.

ಮಹಿಳೆ: ನಿಯಮಗಳು ಎಲ್ಲರಿಗೂ ಒಂದೇ ಆಗಿರುತ್ತವೆ. ತೆಗೆಯಿರಿ ಸರ್.

ನಂತರ ಕಂಡಕ್ಟರ್ ಆಕೆಯ ಒತ್ತಾಯದ ಮೇರೆಗೆ ಟೊಪಿ ತೆಗೆದಿರುವುದು ವಿಡಿಯೊದಲ್ಲಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆ

ಟ್ವಿಟರ್‌ನಲ್ಲಿ ಅನೇಕ ಜನರು ಮಹಿಳೆ ಮತ್ತು ಅವರ ನಡೆಯನ್ನು ಖಂಡಿಸಿಸಿದ್ದರೆ, ಇನ್ನು ಕೆಲವರು ಅವರನ್ನು ಬೆಂಬಲಿಸಿದ್ದಾರೆ. ಇನ್ನು ಕೆಲವರು ಮಹಿಳೆ ನೈತಿಕ ಪೊಲೀಸ್‌ಗಿರಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಏತನ್ಮಧ್ಯೆ, ಬೆಂಗಳೂರು ಪೊಲೀಸರು ಘಟನೆಯನ್ನು ಗಮನಿಸಿದ್ದು, ‘ದಯವಿಟ್ಟು ಎಲ್ಲಿ ಘಟನೆ ನಡೆದಿದೆ ಎಂಬ ಮಾಹಿತಿ ನೀಡಿ’ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಚಾರವಾಗಿ ಬಿಎಂಟಿಸಿ ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ