ಬೆಂಗಳೂರಿನ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮತ್ತೊಂದು ಗಂಭೀರ ಆರೋಪ; ದೂರು ನೀಡಲು ಕಮಿಷನರ್ ಕಚೇರಿಗೆ ಹೋದ ಮಹಿಳೆ

ವಾಣಿ ಮತ್ತು ವರ್ಲಮತಿ ಎಂಬುವವರು ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ. ನಿವೃತ್ತ ಯೋಧ ದಿ.ಚಿನ್ನ ಸ್ವಾಮಿ ಸೈಟ್​ಗೆ ಅಕ್ರಮವಾಗಿ ಪ್ರವೇಶಿಸಿ ದುಷ್ಕರ್ಮಿಗಳು ಕಾಂಪೌಂಡ್ ಹಾನಿಗೊಳಿಸಿದ್ದಾರೆ

ಬೆಂಗಳೂರಿನ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮತ್ತೊಂದು ಗಂಭೀರ ಆರೋಪ; ದೂರು ನೀಡಲು ಕಮಿಷನರ್ ಕಚೇರಿಗೆ ಹೋದ ಮಹಿಳೆ
ಹೆಣ್ಣೂರು ಪೊಲೀಸ್ ಠಾಣೆ
Follow us
TV9 Web
| Updated By: sandhya thejappa

Updated on:Jan 22, 2022 | 3:45 PM

ಬೆಂಗಳೂರು: ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ (Inspector) ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ಪ್ರಾಪರ್ಟಿ ವಿಚಾರವಾಗಿ ಮನೆಗೆ ನುಗ್ಗಿ ದುಷ್ಕರ್ಮಿಗಳು ದಾಂದಲೆ ಮಾಡಿ, ಗಲಾಟೆ ಮಾಡಿದರೂ ಯಾವುದೇ ಕ್ರಮಕೈಗೊಳ್ಳಲಿಲ್ಲ ಅಂತ ಇನ್ಸ್​ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ದೂರು ನೀಡಲು ಹೋದರೂ ಇನ್ಸ್​ಪೆಕ್ಟರ್ ಎಫ್ಐಆರ್ (FIR) ದಾಖಲಿಸಿಲ್ಲ ಅಂತ ಇಬ್ಬರು ಮಹಿಳೆಯರು ಆರೋಪಿಸಿದ್ದಾರೆ. ಪ್ರಾಪರ್ಟಿ ವಿಚಾರವಾಗಿ ಕೋರ್ಟ್​ನಿಂದ ಸ್ಟೇ ಆಗಿದ್ದರೂ, ಅಕ್ರಮ ಪ್ರವೇಶಕ್ಕೆ ಇನ್ಸ್​ಪೆಕ್ಟರ್ ಸಾಥ್ ನೀಡಿದ್ದಾರೆ ಅಂತ ಮಹಿಳೆಯರು ಆರೋಪ ಮಾಡುತ್ತಿದ್ದಾರೆ.

ವಾಣಿ ಮತ್ತು ವರ್ಲಮತಿ ಎಂಬುವವರು ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ. ನಿವೃತ್ತ ಯೋಧ ದಿ.ಚಿನ್ನ ಸ್ವಾಮಿ ಸೈಟ್​ಗೆ ಅಕ್ರಮವಾಗಿ ಪ್ರವೇಶಿಸಿ ದುಷ್ಕರ್ಮಿಗಳು ಕಾಂಪೌಂಡ್ ಹಾನಿಗೊಳಿಸಿದ್ದಾರೆ ಎಂದು ಆರೋಪಿಸುತ್ತಿರುವ ವಾಣಿ, ಮಹೇಂದ್ರ ಎಂಬುವವರ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಆದರೆ ಇನ್ಸ್​ಪೆಕ್ಟರ್ ನಿರ್ಲಕ್ಷ್ಯ ತೋರಿದ್ದಾರೆ ಅಂತ ಈಗ ಮತ್ತೊಂದು ದೂರು ನೀಡಲು ಮುಂದಾಗಿದ್ದಾರೆ.

ವೀಣಾ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ದೂರು ನೀಡಲು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಬಂದಿದ್ದರು. ಆದರೆ ಇಂದು ರಜೆ ಹಿನ್ನೆಲೆ ಸೋಮವಾರ ಬರಲು ಸಿಬ್ಬಂದಿ ಸೂಚನೆ ನೀಡಿದ್ದಾರೆ.

ವಸಂತ್ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದ ಮಹಿಳೆಯರು                                                                      ಈ ಹಿಂದೆಯೂ ಹೆಣ್ಣೂರು ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ಮಹಿಳೆಯರು ದೂರು ಸಲ್ಲಿಸಿದ್ದರು. ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾಗಿ ಹೆಣ್ಣೂರು ಠಾಣೆಗೆ ಮಹಿಳೆಯರು ದೂರು ನೀಡಿದ್ದರು. ಆದರೆ ಇನ್ಸ್​ಪೆಕ್ಟರ್ ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ. ಹೀಗಾಗಿ ಇನ್ಸ್‌ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ

Xiaomi 11T Pro 5G: ಈ 120W ಹೈಪರ್ ಚಾರ್ಜರ್ ಫೋನ್ ಖರೀದಿಸಬಹುದೇ?: ಒಮ್ಮೆ ಇಲ್ಲಿ ಗಮನಿಸಿ

ಆಸ್ಕರ್​ ರೇಸ್​ನಲ್ಲಿ ‘ಜೈ ಭೀಮ್​’ ಮತ್ತು ‘ಮರಕ್ಕರ್’​; ಭಾರತೀಯ ಚಿತ್ರಕ್ಕೆ ಈ ಬಾರಿಯಾದರೂ ಒಲಿಯುತ್ತಾ ಪ್ರಶಸ್ತಿ?

Published On - 3:38 pm, Sat, 22 January 22

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?