ಮೊಬೈಲ್ ಎತ್ತಿಕೊಳ್ಳಲು ನಮ್ಮ ಮೆಟ್ರೋ ಹಳಿಗಳ ಮೇಲೆ ಜಿಗಿದ ಮಹಿಳೆ, ಮುಂದೇನಾಯ್ತು?

ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮೆಟ್ರೋ ಟ್ರ್ಯಾಕ್​ಗೆ ಮಹಿಳೆ ಜಿಗಿದ ಘಟನೆ ನಿನ್ನೆ ಸಂಜೆ 6.40ರ ಸುಮಾರಿಗೆ ಇಂದಿರಾನಗರ ಮೆಟ್ರೋ ಸ್ಟೇಷನ್ ನಲ್ಲಿ ನಡೆದಿದೆ. ಮಹಿಳೆ ಟ್ರಾಕ್​ಗೆ ಜಿಗಿಯುತ್ತಿದ್ದಂತೆ ಮೆಟ್ರೋ ಸಿಬ್ಬಂದಿ ಕೂಡಲೇ ವಿದ್ಯುತ್ ಸಂಪರ್ಕ ತೆಗೆದಿದ್ದರು. ಈ ಪರಿಣಾಮ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಮೊಬೈಲ್ ಎತ್ತಿಕೊಳ್ಳಲು ನಮ್ಮ ಮೆಟ್ರೋ ಹಳಿಗಳ ಮೇಲೆ ಜಿಗಿದ ಮಹಿಳೆ, ಮುಂದೇನಾಯ್ತು?
ನಮ್ಮ ಮೆಟ್ರೋ
Follow us
Kiran Surya
| Updated By: ಆಯೇಷಾ ಬಾನು

Updated on:Jan 02, 2024 | 10:49 AM

ಬೆಂಗಳೂರು, ಜ.02: ಹೊಸ ವರ್ಷದಂದೆ (New Year) ಇಂದಿರಾನಗರದಲ್ಲಿ (Indiranagar) ಅಘಾತಕಾರಿ ಘಟನೆಯೊಂದು ನಡೆದಿದೆ. ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು 750kV ವೋಲ್ಟ್ ವಿದ್ಯುತ್ ಹರಿಯುವ ನಮ್ಮ ಮೆಟ್ರೋ (Namma Metro) ಟ್ಯಾಕ್​ಗೆ ಮಹಿಳೆಯೊಬ್ಬರು (Woman) ಜಿಗಿದ ಘಟನೆ ಬೆಂಗಳೂರಿನ (Bengaluru) ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಮೆಟ್ರೋ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಇನ್ನು ಮಹಿಳೆ ಟ್ಯಾಕ್​ಗೆ ಜಿಗಿದ ಪರಿಣಾಮ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಜ.01ರ ಸಂಜೆ 6.40ರ ಸುಮಾರಿಗೆ ಇಂದಿರಾನಗರ ಮೆಟ್ರೋ ಸ್ಟೇಷನ್​ನಲ್ಲಿ ಈ ಘಟನೆ‌‌ ನಡೆದಿದೆ. ಇಂದಿರಾನಗರ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ 1ರಲ್ಲಿ ಮಹಿಳೆಯೊಬ್ಬರು ಮೆಟ್ರೋ ರೈಲಿಗಾಗಿ ಕಾದು ನಿಂತಿದ್ದರು.ಈ ವೇಳೆ ಆಕಸ್ಮಿಕವಾಗಿ ಅವರ ಮೊಬೈಲ್ ರೈಲು ಹಳಿಗಳ ಮೇಲೆ ಬಿದ್ದಿದೆ. ಆಗ ತಕ್ಷಣವೇ ಮೊಬೈಲ್ ಎತ್ತಿಕೊಳ್ಳಲು ಮಹಿಳೆ ಹಳಿಗಳ ಮೇಲೆ ಜಿಗಿದಿದ್ದಾರೆ. ಇದನ್ನು ಗಮನಿಸಿದ ಮೆಟ್ರೋ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ್ದು, ಕೂಡಲೇ ಆಕೆಯನ್ನು ಮೇಲೆಕೆ ಎಳೆದುಕೊಂಡಿದ್ದಾರೆ. ಇನ್ನು ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಕಾರಣ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: ಹೊಸವರ್ಷ ದಿನದಂದು ನಮ್ಮ ಮೆಟ್ರೋಗೆ ಭರ್ಜರಿ ಆದಾಯ

ಮಹಿಳೆ ಜಿಗಿಯುತ್ತಿದ್ದಂತೆ ಕೂಡಲೇ ಸಂಪೂರ್ಣ ವಿದ್ಯುತ್ ಬಂದ್ ಮಾಡಿದ BMRCL ಸಿಬ್ಬಂದಿಯ ಮುಂಜಾಗ್ರತೆಯಿಂದ ಭಾರಿ ಅನಾಹುತ ತಪ್ಪಿದೆ. ಈ ವಿಚಾರವಾಗಿ ಬಿಎಂಆರ್​ಸಿಎಲ್ ಸ್ಪಷ್ಟನೆ ನೀಡಿದ್ದು, ವಿದ್ಯುತ್ ತೆಗೆದ ನಂತರ ಎಲ್ಲವನ್ನೂ ರೀ ಸೆಟ್ ಮಾಡಲು 15 ನಿಮಿಷ ಬೇಕು‌. ನಿನ್ನೆ ಪೀಕ್ ಅವರ್ ನಲ್ಲೇ ಈ ರೀತಿ ಸಮಸ್ಯೆ ಆಗಿದೆ‌‌. ಇದಕ್ಕೆ ವಿಷಾಧಿಸುತ್ತೇವೆ ಎಂದು ತಿಳಿಸಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:37 am, Tue, 2 January 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ