ಬೆಂಗಳೂರು, ಜ.02: ಹೊಸ ವರ್ಷದಂದೆ (New Year) ಇಂದಿರಾನಗರದಲ್ಲಿ (Indiranagar) ಅಘಾತಕಾರಿ ಘಟನೆಯೊಂದು ನಡೆದಿದೆ. ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು 750kV ವೋಲ್ಟ್ ವಿದ್ಯುತ್ ಹರಿಯುವ ನಮ್ಮ ಮೆಟ್ರೋ (Namma Metro) ಟ್ಯಾಕ್ಗೆ ಮಹಿಳೆಯೊಬ್ಬರು (Woman) ಜಿಗಿದ ಘಟನೆ ಬೆಂಗಳೂರಿನ (Bengaluru) ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಮೆಟ್ರೋ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಇನ್ನು ಮಹಿಳೆ ಟ್ಯಾಕ್ಗೆ ಜಿಗಿದ ಪರಿಣಾಮ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.
ಜ.01ರ ಸಂಜೆ 6.40ರ ಸುಮಾರಿಗೆ ಇಂದಿರಾನಗರ ಮೆಟ್ರೋ ಸ್ಟೇಷನ್ನಲ್ಲಿ ಈ ಘಟನೆ ನಡೆದಿದೆ. ಇಂದಿರಾನಗರ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ 1ರಲ್ಲಿ ಮಹಿಳೆಯೊಬ್ಬರು ಮೆಟ್ರೋ ರೈಲಿಗಾಗಿ ಕಾದು ನಿಂತಿದ್ದರು.ಈ ವೇಳೆ ಆಕಸ್ಮಿಕವಾಗಿ ಅವರ ಮೊಬೈಲ್ ರೈಲು ಹಳಿಗಳ ಮೇಲೆ ಬಿದ್ದಿದೆ. ಆಗ ತಕ್ಷಣವೇ ಮೊಬೈಲ್ ಎತ್ತಿಕೊಳ್ಳಲು ಮಹಿಳೆ ಹಳಿಗಳ ಮೇಲೆ ಜಿಗಿದಿದ್ದಾರೆ. ಇದನ್ನು ಗಮನಿಸಿದ ಮೆಟ್ರೋ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ್ದು, ಕೂಡಲೇ ಆಕೆಯನ್ನು ಮೇಲೆಕೆ ಎಳೆದುಕೊಂಡಿದ್ದಾರೆ. ಇನ್ನು ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಕಾರಣ ಪರ್ಪಲ್ ಲೈನ್‌ನಲ್ಲಿ ಸುಮಾರು 15 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತವಾಗಿತ್ತು.
ಇದನ್ನೂ ಓದಿ: ಹೊಸವರ್ಷ ದಿನದಂದು ನಮ್ಮ ಮೆಟ್ರೋಗೆ ಭರ್ಜರಿ ಆದಾಯ
ಮಹಿಳೆ ಜಿಗಿಯುತ್ತಿದ್ದಂತೆ ಕೂಡಲೇ ಸಂಪೂರ್ಣ ವಿದ್ಯುತ್ ಬಂದ್ ಮಾಡಿದ BMRCL ಸಿಬ್ಬಂದಿಯ ಮುಂಜಾಗ್ರತೆಯಿಂದ ಭಾರಿ ಅನಾಹುತ ತಪ್ಪಿದೆ. ಈ ವಿಚಾರವಾಗಿ ಬಿಎಂಆರ್ಸಿಎಲ್ ಸ್ಪಷ್ಟನೆ ನೀಡಿದ್ದು, ವಿದ್ಯುತ್ ತೆಗೆದ ನಂತರ ಎಲ್ಲವನ್ನೂ ರೀ ಸೆಟ್ ಮಾಡಲು 15 ನಿಮಿಷ ಬೇಕು. ನಿನ್ನೆ ಪೀಕ್ ಅವರ್ ನಲ್ಲೇ ಈ ರೀತಿ ಸಮಸ್ಯೆ ಆಗಿದೆ. ಇದಕ್ಕೆ ವಿಷಾಧಿಸುತ್ತೇವೆ ಎಂದು ತಿಳಿಸಿದೆ.
ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:37 am, Tue, 2 January 24