ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Bangalore Gang Rape: ರಾಜ್ಯ ರಾಜಧಾನಿ ಲೋಕಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಸಂದರ್ಭದಲ್ಲಿಯೇ ನಗರದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗತೊಡಗಿವೆ. ಉತ್ಸವದ ವೇಳೆ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದ್ದು, ಆತ ಸಾವಿಗೀಡಾದ ಬೆನ್ನಲ್ಲೇ ಹೈಗ್ರೌಂಡ್ಸ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿನ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಚುನಾವಣೆಗೂ ಮುನ್ನ ಬೆಂಗಳೂರಿನಲ್ಲಿ ಆತಂಕ: ವ್ಯಕ್ತಿಯ ಹತ್ಯೆ, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Apr 25, 2024 | 10:07 AM

ಬೆಂಗಳೂರು, ಏಪ್ರಿಲ್ 25: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಐತಿಹಾಸಿಕ ಕರಗ ಮಹೋತ್ಸವದ ಮೆರವಣಿಗೆಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮತ್ತೊಂದೆಡೆ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ (Gang Rape) ಎಸಗಲಾಗಿದೆ. 23 ವರ್ಷದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ (High Grounds Police Station) ವ್ಯಾಪ್ತಿಯಲ್ಲಿ ನಡೆದಿದೆ. ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯ ರಾಜಧಾನಿ ಲೋಕಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಸಂದರ್ಭದಲ್ಲಿಯೇ ನಗರದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗತೊಡಗಿವೆ. ಅದರಲ್ಲೂ ನಗರದ ಪ್ರಸಿದ್ಧ ಉತ್ಸವದ ವೇಳೆ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದ್ದು, ಆತ ಸಾವಿಗೀಡಾಗಿದ್ದಾರೆ. ಈ ಮಧ್ಯೆ, ಹೈಗ್ರೌಂಡ್ಸ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರದಂತ ಹೇಯ ಘಟನೆ ನಡೆದಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಪ್ರತಿಪಕ್ಷ ಬಿಜೆಪಿಯ ಆರೋಪದ ಬೆನ್ನಲ್ಲೇ ರಾಜಧಾನಿಯಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗಿವೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಾವು ಆರುವ ಮುನ್ನವೇ ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣ ವರದಿಯಾಗಿದೆ.

ಇದನ್ನೂ ಓದಿ: ಬೆಂಗಳೂರು ಕರಗ ಮೆರವಣಿಗೆ ವೇಳೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಇದೇ ಮೊದಲು

ಬೆಂಗಳೂರಿನ ಸಹಕಾರ ನಗರದಲ್ಲಿ ಮನೆ ದರೋಡೆ

ಬೆಂಗಳೂರಿನ ಸಹಕಾರ ನಗರದಲ್ಲಿ ಮನೆ ದರೋಡೆ ಮಾಡಿದ ದುಷ್ಕರ್ಮಿಗಳು, ಕಳುವು ಮಾಡಿ ಹೋಗುವಾಗ ಎದುರುಬಂದ ಮನೆ ಮಾಲೀಕನಿಗೆ ಪಿಸ್ತೂಲ್​ನಿಂದ ಬೆದರಿಸಿ ಪರಾರಿಯಾದ ಘಟನೆ ಸಹಕಾರ ನಗರದ ಕಾವೇರಿ ಸ್ಕೂಲ್ ಹಿಂಭಾಗದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೂವರು ಮುಸುಕುಧಾರಿಗಳು ರಾತ್ರಿ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದರು. ಇದೇ ವೇಳೆ ಮನೆಗೆ ಬಂದ ಮಾಲೀಕನಿಗೆ ಪಿಸ್ತೂಲ್​ ತೋರಿಸಿ ಬೆದರಿಕೆ ಹಾಕಿದ್ದಾರೆ.

ಮನೆ ಮಾಲೀಕನಿಗೆ ಪಿಸ್ತೂಲ್​ನಿಂದ ಬೆದರಿಕೆ ಹಾಕಿ ಕಳ್ಳರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕೊಡಿಗೆಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಉತ್ತರಪ್ರದೇಶದ ಕಳ್ಳರ ಗ್ಯಾಂಗ್​ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ. ಕೊಡಿಗೆಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:55 am, Thu, 25 April 24

ತಾಜಾ ಸುದ್ದಿ