ಮಹಿಳೆ ಕಿಡ್ನ್ಯಾಪ್ ಪ್ರಕರಣ; ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ವಿಸ್ತರಿಸಿದ ಹೈಕೋರ್ಟ್
ಮೈಸೂರು ಜಿಲ್ಲೆಯ ಕೆ.ಆರ್.ನಗರ ಮಹಿಳೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಭವಾನಿ ರೇವಣ್ಣ(Bhavani Revanna)ಗೆ ನಿರೀಕ್ಷಣಾ ಜಾಮೀನು ವಿಸ್ತರಿಸಿದೆ. ಈಗಾಗಲೇ ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೂರ್ಣವಾಗಿದ್ದು, ಜಾಮೀನು ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿದೆ.
ಬೆಂಗಳೂರು, ಜೂ.14: ಮೈಸೂರು ಜಿಲ್ಲೆಯ ಕೆ.ಆರ್.ನಗರ ಮಹಿಳೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಭವಾನಿ ರೇವಣ್ಣ(Bhavani Revanna)ಗೆ ನಿರೀಕ್ಷಣಾ ಜಾಮೀನು ವಿಸ್ತರಿಸಿದೆ. ಈಗಾಗಲೇ ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಪೂರ್ಣವಾಗಿದ್ದು, ಜಾಮೀನು ಅರ್ಜಿ ಸಂಬಂಧ ಆದೇಶ ಕಾಯ್ದಿರಿಸಿದೆ. ಇನ್ನು ಈ ಕೇಸ್ಗೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗದೆ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಅವರು ಜೂ.07 ರಂದು ಎಸ್ಐಟಿ ಅಧಿಕಾರಿಗಳ ಮುಂದೆ ಪ್ರತ್ಯಕ್ಷವಾಗಿದ್ದರು.
ಏನಿದು ಘಟನೆ?
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋದಲ್ಲಿ ‘ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆ.ಆರ್ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ಹೆಚ್ಡಿ ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಿಸಿದ್ದ. ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ಐಟಿ ಅಧಿಕಾರಿಗಳು ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಈಗಾಗಲೆ ಆರೋಪಿ ಬಾಬುನನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ಎಸ್ಐಟಿ ಜೊತೆ ಕಣ್ಣಾಮುಚ್ಚಾಲೆ ಆಡುತ್ತಿರುವ ಭವಾನಿ ರೇವಣ್ಣ ತಮ್ಮ ತೊಂದರೆ ಹೆಚ್ಚಿಸಿಕೊಳ್ಳುತ್ತಿದ್ದಾರೆ!
ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣಗೂ ಕೂಡ ಎಸ್ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್ ಕೊಟ್ಟಿತ್ತು. ನೋಟಿಸ್ ನೀಡುತ್ತಿದ್ದಂತೆ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕತಿಸಿತ್ತು. ಅರ್ಜಿ ತಿರಸ್ಕೃತಗೊಳ್ಳುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಲು ತಯಾರಿ ನಡೆಸಿದ್ದರು. ಇದೇ ವೇಳೆ ಭವಾನಿ ರೇವಣ್ಣ ಕೂಡ ಎಸ್ಐಟಿಗೆ “ಮನೆಯಲ್ಲೇ ವಿಚಾರಣೆಗೆ ಹಾಜರಾಗುವುದಾಗಿ” ಪತ್ರ ಬರೆದಿದ್ದರು. ಅದರಂತೆ ಜೂ.07 ರಂದು ಜಾಮೀನು ಸಿಕ್ಕ ಬೆನ್ನಲ್ಲೇ ಭವಾನಿ ರೇವಣ್ಣ ವಿಚಾರಣೆಗೆ ಎಸ್ಐಟಿ ಎದುರು ಹಾಜರಾಗಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:43 pm, Fri, 14 June 24