AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ನಾಗಭೂಷಣ್ ಕಾರಿಗೆ ಮಹಿಳೆ ಬಲಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಮೃತ ಮಹಿಳೆಯ ಕುಟುಂಬ

ಪ್ರೇಮಾ ಮೃತದೇಹವನ್ನು ಅವರ ಮೈದುನ ಜಯರಾಮ್ ಮನೆಗೆ ರವಾನೆ ಮಾಡಲಾಗಿದ್ದು, ಇಂದು ಸಂಜೆ ವೇಳೆ ಹರಿಶ್ಚಂದ್ರ ಘಾಟ್​ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ನಟ ನಾಗಭೂಷಣ್ ಕಾರಿಗೆ ಮಹಿಳೆ ಬಲಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಮೃತ ಮಹಿಳೆಯ ಕುಟುಂಬ
ನಟ ನಾಗಭೂಷಣ್​ ಕಾರು ಅಪಘಾತ
ಮಾಲತೇಶ ಜಗ್ಗೀನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 01, 2023 | 3:24 PM

Share

ಬೆಂಗಳೂರು, ಅ.01: ನಟ ನಾಗಭೂಷಣ್ (Nagabhushana) ಕಾರು ಡಿಕ್ಕಿಯಾಗಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ‘ಮೃತ ಪ್ರೇಮಾ ಕುಟುಂಬ ಸದಸ್ಯರು ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ. ಹೌದು, ಪ್ರೇಮಾ ಅವರ ನೇತ್ರದಾನ ಮಾಡುವ ಮೂಲಕ ಇನ್ನೊಂದು ಜೀವಕ್ಕೆ ಆಸರೆಯಾಗಿದ್ದಾರೆ. ಇನ್ನು ಕೆಂಪೇಗೌಡ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಇದೀಗ ಪೊಲೀಸರು ಸಂಬಂಧಿಕರಿಗೆ ಪ್ರೇಮಾ ಮೃತದೇಹ ಹಸ್ತಾಂತರಿಸಿದ್ದು, ಬೆಂಗಳೂರಿನ ಗಾಯತ್ರಿನಗರದಲ್ಲಿರುವ ಪ್ರೇಮಾ ಅವರ ಮೈದುನ ಜಯರಾಮ್ ಎಂಬುವವರ ನಿವಾಸಕ್ಕೆ ಶವ ರವಾನೆ ಮಾಡಲಾಗಿದೆ.

ಸಂಜೆ ವೇಳೆಗೆ ಹರಿಶ್ಚಂದ್ರಘಾಟ್​ನಲ್ಲಿ ಪ್ರೇಮಾ ಶವಸಂಸ್ಕಾರ

ಹೌದು, ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಾಗಭೂಷಣ್​  ಅವರ ಕಾರು ಇಂದು (ಅ.​ 30)naga ಬೆಳಿಗ್ಗೆ ಕೋಣನಕುಂಟೆ ಕ್ರಾಸ್​ ಬಳಿ ಈ ಅಪಘಾತವಾಗಿತ್ತು. ಫುಟ್​ ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ನಾಗಭೂಷಣ್​ ಅವರ ಕಾರು ಡಿಕ್ಕಿ ಆಗಿತ್ತು. ಈ ವೇಳೆ ಪ್ರೇಮಾ ಎಂಬುವವರು ಮೃತರಾಗಿದ್ದು, ಅವರ ಪತಿ ಕೃಷ್ಣ ಬಿ. ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ವಿಷಯ ತಿಳಿಯುತ್ತಿದ್ದಂತೆ ಪ್ರೇಮಾ ಮತ್ತು ಕೃಷ್ಣ ದಂಪತಿಯ ಪುತ್ರ ಪಾರ್ಥ ಕೆ. ಅವರು ಠಾಣೆಗೆ ದೂರು ನೀಡಿದ್ದರು. ಇದೀಗ ಪ್ರೇಮಾ ಮೃತದೇಹವನ್ನು ಅವರ ಮೈದುನ ಜಯರಾಮ್ ಮನೆಗೆ ರವಾನೆ ಮಾಡಲಾಗಿದ್ದು, ಇಂದು ಸಂಜೆ ವೇಳೆ ಹರಿಶ್ಚಂದ್ರ ಘಾಟ್​ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ನಟ ನಾಗಭೂಷಣ್​ ಕಾರು ಅಪಘಾತ; ಪಾದಚಾರಿ ಸಾವು; ಇನ್ನೊಬ್ಬರ ಸ್ಥಿತಿ ಗಂಭೀರ

ಘಟನೆ ಕುರಿತು ಡಿಸಿಪಿ ಹೇಳಿದ್ದಿಷ್ಟು

ಇನ್ನು ಘಟನೆ ಕುರಿತು ಮಾತನಾಡಿದ ಡಿಸಿಪಿ ಶಿವಪ್ರಕಾಶ್ ದೇವರಾಜ್ ‘ನಿನ್ನೆ ರಾತ್ರಿ‌ 9.30 ರಲ್ಲಿ ಕೆ.ಎಸ್.ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಅಪಘಾತವಾಗಿದೆ. ಇಬ್ಬರು ಪಾದಾಚಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಅತೀವೇಗ ಮತ್ತು ನಿರ್ಲಕ್ಷ್ಯದಿಂದ ಈ ಘಟನೆ ಆಗಿದೆ ಎಂದರು. ‘ಪ್ರೇಮ ಅವರು ಆಸ್ಪತ್ರೆ ಸೇರುವ ಮುಂಚೆನೆ ಸಾವನ್ನಪ್ಪಿದ್ದರು. ಕೃಷ್ಣ ಎಂಬುವವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಂಟ್ರೋಲ್ ತಪ್ಪಿ ಕಾರು ಪೋಲ್​ಗೂ ಡಿಕ್ಕಿ ಹೊಡೆದಿದೆ. ಕಾರು ಚಾಲಕ ನಾಗಭೂಷಣ್ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಜೊತೆಗೆ ಮದ್ಯಪಾನ ಪರೀಕ್ಷೆಗೂ ಕಳುಹಿಸಲಾಗಿದ್ದು, ಸ್ಟೇಷನ್ ಬೇಲ್ ಕೊಟ್ಟು ವಾಪಾಸ್​ ಕಳುಹಿಸಲಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ