AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ಮಹಿಳಾ ಪೊಲೀಸ್ ಪೇದೆ ಸಾವು, ಅನಾಥವಾದ ಮಗು

ಕೊರೋನಾ ಸಮಯದಲ್ಲಿ ಪತಿಯನ್ನು ಕಳೆದುಕೊಂಡಿದ್ದ ಬೆಂಗಳೂರು ನಗರ ಟ್ರಾಫಿಕ್ ಮಹಿಳಾ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇತ್ತ ಮಗು ಅನಾಥವಾಗಿದೆ.

ಹೃದಯಾಘಾತದಿಂದ ಮಹಿಳಾ ಪೊಲೀಸ್ ಪೇದೆ ಸಾವು, ಅನಾಥವಾದ ಮಗು
ಹೃದಯಾಘಾತದಿಂದ ಸಾವನ್ನಪ್ಪಿದ ಮಹಿಳಾ ಕಾನ್ಸ್ಟೇಬಲ್ ಪ್ರಯಾಂಕಾ
Rakesh Nayak Manchi
|

Updated on: Jun 19, 2023 | 3:31 PM

Share

ಬೆಂಗಳೂರು: ನಗರದ ಕೆಂಗೇರಿ (Kengeri) ಸಂಚಾರಿ ಠಾಣೆಯ ಮಹಿಳಾ ಕಾನ್ಸ್​​ಟೇಬಲ್ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಅಜ್ಜಂಪುರದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪ್ರಿಯಾಂಕಾ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ. ನಿನ್ನೆ ರಾತ್ರಿ 11.30ರ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕೊರೋನಾ ಸಮಯದಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಮಗು, ಇದೀಗ ತಾಯಿಯನ್ನೂ ಕಳೆದುಕೊಂಡು ಅನಾಥವಾಗಿದೆ.

ಕಾನ್ಸ್​ಟೇಬಲ್ ಪ್ರಿಯಾಂಕಾ ಅವರಿಗೆ 2018ರಲ್ಲಿ ಮದುವೆಯಾಗಿತ್ತು. ಆದರೆ 2021ರಲ್ಲಿ ಕೊರೋನಾ ಸಂದರ್ಭದಲ್ಲಿ ಇವರ ಪತಿ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಪ್ರಿಯಾಂಕಾ 1 ತಿಂಗಳ ಗರ್ಭಿಣಿಯಾಗಿದ್ದರು. ಇತ್ತೀಚೆಗೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪಿಸಿ ಪ್ರಿಯಾಂಕಾ, 10 ದಿನ ರಜೆ ಪಡೆದು ಅಜ್ಜಂಪುರಕ್ಕೆ ತೆರಳಿದ್ದರು. ಆದರೆ ನಿನ್ನೆ ರಾತ್ರಿ 11.30ರ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Vande Bharat Express: ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲು ಪ್ರಯೋಗಾರ್ಥ ಸಂಚಾರ ಯಶಸ್ವಿ

ಕಾರು ಬೈಕ್ ಕದ್ದ ಕಳ್ಳರ ಬಂಧನ

ಬೀದರ್: ಕಾರು ಮತ್ತು ಬೈಕ್​ ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಬೀದರ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ವಿವಿಧ ಕಳ್ಳತನ ಪ್ರಕರಣ ಸಂಬಂಧ ಕಾರ್ಯಾಚರಣೆಗೆ ಇಳಿದ ಪೊಲೀಸರು ನಾಲ್ವರು ಆರೋಪಿಗಳ ಸಹಿತ 7 ಲಕ್ಷ ಮೌಲ್ಯದ ಬೈಕ್, ಕಾರು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರು ಒಂದು‌ ಲಕ್ಷ ಮೌಲ್ಯದ ಬೆಳ್ಳಿಯ ಆಭರಣಗಳನ್ನು ಕೂಡ ಜಪ್ತಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ