ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಅತ್ಯಾಚಾರ, ಕಾಂಗ್ರೆಸ್ ಮುಖಂಡನಿಗೆ ನೋಟಿಸ್

ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಕಾಂಗ್ರೆಸ್ ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ.

ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಅತ್ಯಾಚಾರ, ಕಾಂಗ್ರೆಸ್ ಮುಖಂಡನಿಗೆ ನೋಟಿಸ್
ಕಬ್ಬನ್​ ಪಾರ್ಕ್​ ಪೊಲೀಸ್ ಠಾಣೆ
Edited By:

Updated on: Sep 03, 2023 | 10:22 AM

ಬೆಂಗಳೂರು, (ಸೆಪ್ಟೆಂಬರ್ 03): ಯುವತಿ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಕಾಂಗ್ರೆಸ್ ( telangana Congress0 ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರು(cubbon park police) ನೋಟಿಸ್ ನೀಡಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ತೆಲಂಗಾಣಕ್ಕೆ ತೆರಳಿ ವಿಚಾರಣೆಗೆ ಬರಲು ಕಾಂಗ್ರೆಸ್ ಮುಖಂಡ ಕುಂಬಂ ಶಿವಕುಮಾರ್ ರೆಡ್ಡಿಗೆ ನೋಟಿಸ್ ಕೊಟ್ಟಿದ್ದಾರೆ. ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಜ್ಯೂಸ್​ನಲ್ಲಿ ಪ್ರಜ್ಞೆ ತಪ್ಪಿಸುವ ಔಷಧಿ ಬೆರೆಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ವಿಡಿಯೋ ರಿಲೀಸ್​ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ತೆಲಂಗಾಣದ ನಾರಾಯಣ್ ಪೇಟ್ ಕಾಂಗ್ರೆಸ್​ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ರೆಡ್ಡಿ ವಿರುದ್ಧ ಬೆಂಗಳೂರಿನ ಕಬ್ಬನ್​ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಕಬ್ಬನ್ ಪಾರ್ಕ್ ತೆಲಂಗಾಣಕ್ಕೆ ತೆರಳಿ ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್ ರೆಡ್ಡಿಗೆ ನೋಟಿಸ್ ನೀಡಿದ್ದಾರೆ. ಆದ್ರೆ, ಶಿವಕುಮಾರ್ ರೆಡ್ಡಿ ವಿಚಾರಣೆ ಹಾಜರಾಗಲು ಒಂದು ವಾರ ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತೆಲಂಗಾಣ ಕಾಂಗ್ರೆಸ್​ ನಾಯಕನ ವಿರುದ್ಧ ಬೆಂಗಳೂರಲ್ಲಿ ಅತ್ಯಾಚಾರ ಪ್ರಕರಣ ದಾಖಲು

ಪ್ರಕರಣದ ಹಿನ್ನೆಲೆ

ತೆಲಂಗಾಣ ಕಾಂಗ್ರೆಸ್​ ಮುಖಂಡ, ನಾರಾಯಣ್ ಪೇಟ್ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ರೆಡ್ಡಿ ಹಾಗೂ ಯುವತಿಯೋರ್ವಳ ಜತೆ ಸ್ನೇಹ ಬೆಳೆದಿತ್ತು. ಯುವತಿ ಜೊತೆ ಬೆಂಗಳೂರಿನ ಹೋಟೆಲ್​ವೊಂದರ ಕೊಠಡಿಯಲ್ಲಿ ಶಿವಕುಮಾರ್ ಉಳಿದುಕೊಂಡಿದ್ದರು. ಅದೇ ಸಂದರ್ಭದಲ್ಲಿ ಯುವತಿಯನ್ನು ಭೇಟಿಯಾಗುವುದಾಗಿ ಕರೆಯಿಸಿಕೊಂಡು ಬಳಿಕ ಜ್ಯೂಸ್​ನಲ್ಲಿ ಮತ್ತು ಬರಿಸುವ ಔಷಧಿ ಹಾಕಿ ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಅತ್ಯಾಚಾರದ ವೇಳೆ ಯುವತಿ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿದ್ದು, ಅಲ್ಲದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಈ ಬಗ್ಗೆ ಯುವತಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಈ ಸಂಬಂಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

2020ರಲ್ಲೂ ಸಹ ಈ ಕೆ.ಶಿವಕುಮಾರ ರೆಡ್ಡಿ ವಿರುದ್ಧ ತೆಲಂಗಾಣದ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us