ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿ ಕೃತ್ಯ: ಬಸ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ

ನಿನ್ನೆ (ನ.29) ಚಂದ್ರಾಲೇಔಟ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸಂಜೆ 5.30ರ ಸುಮಾರಿಗೆ ಬಸ್​​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿ ಕೃತ್ಯ: ಬಸ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರ
ಅತ್ಯಾಚಾರವೆಸಗಿದ ಆರೋಪಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Nov 30, 2022 | 7:36 PM

ಬೆಂಗಳೂರು: ರಾಜ್ಯ ರಾಜಧಾನಿ ತೆಲೆತಗ್ಗಿಸುವಂತಹ ಘಟನೆ ನಡೆದಿದೆ. ಅಪರಾಧ ಕೃತ್ಯಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ನಿನ್ನೆ (ನ.29) ರಂದು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆದಿತ್ತು. ಇದು ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ (Rape) ಪ್ರಕರಣ ಬೆಳಕಿಗೆ ಬಂದಿದೆ. ಇದು ಕೂಡ ನಿನ್ನೆ ಚಂದ್ರಾಲೇಔಟ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸಂಜೆ 5.30ರ ಸುಮಾರಿಗೆ ಬಸ್​​ನಲ್ಲಿ (Bus) ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ.

ಮಹಿಳೆ ಬಸ್​​ಗಾಗಿ ನಾಯಂಡಹಳ್ಳಿ ಸಮೀಪ ಕಾಯುತ್ತ ನಿಂತಿದ್ದಳು. ಈ ವೇಳೆ ಅತ್ಯಚಾರವೆಸಗಿದ ಆರೋಪಿ ಶಿವಕುಮಾರ್​ ಶಾಲಾ ಬಸ್​ ಚಲಾಯಿಸಿಕೊಂಡು ಬಂದಿದ್ದಾನೆ. ಆರೋಪಿ ಶಿವಕುಮಾರ್​​ಗೆ ಮಹಿಳೆ ಪರಿಚವಿದ್ದಿದ್ದರಿಂದ ಡ್ರಾಪ್​ ಕೊಡುತ್ತೇನೆ ಎಂದು ಹೇಳಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರ‍್ಯಾಪಿಡೋ ರೈಡ್ ಬುಕ್ ಮಾಡಿ ಮನೆಗೆ ಹೊರಟಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಹೀಗಾಗಿ ಮಹಿಳೆ ಆರೋಪಿಯ ಬಸ್​ನಲ್ಲಿ ಹೋಗಿದ್ದಾಳೆ. ಆರೋಪಿ ಶಿವಕುಮಾರ್​ ಮಹಿಳೆಯನ್ನು ನಾಗರಬಾವಿ ಸರ್ವಿಸ್​ ರಸ್ತೆಗೆ ಕರೆದೊಯ್ದ ಅತ್ಯಾಚಾರವೆಸಗಿದ್ದಾನೆ. ಘಟನೆ ಬಳಿಕ ಮಹಿಳೆ ಪುತ್ರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ.

ಸ್ಥಳಕ್ಕೆ ಬಂದ ಮಹಿಳೆ ಪುತ್ರ ಆರೋಪಿ ಶಿವಕುಮಾರ್​ಗೆ ಥಳಿಸಿದ್ದಾನೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಂದ್ರಲೇಔಟ್​ ಪೊಲೀಸರು ಆರೋಪಿ ಶಿವಕುಮಾರ್​ನನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ