ಬೆಂಗಳೂರು: ಆಂಟಿ ಎಂದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಮಹಿಳೆ

ತನ್ನನ್ನು ಆಂಟಿ ಎಂದು ಕರೆದಿದ್ದಕ್ಕೆ ಆಕ್ರೋಶಗೊಂಡ ಮಹಿಳೆಯೊಬ್ಬರು 60 ವರ್ಷದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಘಟನೆ ಸಂಬಂಧ ಹಲ್ಲೆಗೊಳಗಾದ ಎಟಿಎಂ ಘಟಕದ ಭದ್ರತಾ ಸಿಬ್ಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೀವಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬೆಂಗಳೂರು: ಆಂಟಿ ಎಂದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಮಹಿಳೆ
ಸಾಲ ಹಿಂದಿರುಗಿಸದ್ದಕ್ಕೆ ಯೋಧನ ಮೇಲೆ ಗುಂಡು ಹಾರಿಸಿದ ಮತ್ತೊಬ್ಬ ಯೋಧ
Updated By: Rakesh Nayak Manchi

Updated on: Sep 25, 2023 | 6:03 PM

ಬೆಂಗಳೂರು, ಸೆ.24: ತನ್ನನ್ನು ಆಂಟಿ ಎಂದು ಕರೆದಿದ್ದಕ್ಕೆ ಆಕ್ರೋಶಗೊಂಡ ಮಹಿಳೆಯೊಬ್ಬರು 60 ವರ್ಷದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರು (Bangalore) ನಗರದಲ್ಲಿ ನಡೆದಿದೆ. ಘಟನೆ ಸಂಬಂಧ ಹಲ್ಲೆಗೊಳಗಾದ ಎಟಿಎಂ ಘಟಕದ ಭದ್ರತಾ ಸಿಬ್ಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೀವಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮಲ್ಲೇಶ್ವರಂ ಠಾಣಾ ವ್ಯಾಪ್ತಿಯಲ್ಲಿನ ಎಟಿಎಂ ಘಟಕಕ್ಕೆ ಹಣ ತುಂಬಲು ಕಸ್ಟೋಡಿಯನ್​ಗಳು ಬಂದಿದ್ದರು. ಈ ವೇಳೆ ಎಟಿಎಂ ದ್ವಾರದ ಮುಂಬಾಗ ಮಹಿಳೆಯೊಬ್ಬರು ನಿಂತಿದ್ದರು. ಹೀಗಾಗಿ ಭದ್ರತಾ ಸಿಬ್ಬಂದಿ ಆಂಟಿ ಸ್ವಲ್ಪ ಪಕ್ಕಕ್ಕೆ ಸರಿದು ನಿಲ್ಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೆ.26ರ ಬೆಂಗಳೂರು ಬಂದ್​​​ ಹಿಂಪಡೆಯಲು ಕರವೇ ಮನವಿ, ಒಂದೇ ಬಾರಿ ರಾಜ್ಯ ಬಂದ್​ಗೆ ಪ್ಲಾನ್

ತನ್ನನ್ನು ಆಂಟಿ ಎಂದು ಕರೆದಿದ್ದಕ್ಕೆ ಆಕ್ರೋಶಗೊಂಡ ಮಹಿಳೆ ಭದ್ರತಾ ಸಿಬ್ಬಂದಿಯೊಂದಿಗೆ ಜಗಳ ಆರಂಭಿಸಿದ್ದಾರೆ. ನಂತರ ಕಪಾಳಕ್ಕೆ ಹೊಡೆದು, ಜೀವಬೆದರಿಕೆ ಹಾಕಿದ್ದಾರೆ. ಒಂದು ವಾರದ ಹಿಂದೆ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸದ್ಯ ಹಲ್ಲೆಗೊಳಗಾದ ಎಟಿಎಂ ಭದ್ರತಾ ಸಿಬ್ಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಲ್ಲದೆ, ಹಲ್ಲೆ ನಡೆಸಿದ ಮಹಿಳೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Sun, 24 September 23