BMTC Free Bus: ಮಹಿಳೆಯರಿಗೆ ಗುಡ್​ನೂಸ್,​ ಇಂದು BMTCಯಲ್ಲಿ ಉಚಿತ ಪ್ರಯಾಣ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ಬಸ್​​ಗಳಲ್ಲಿ ನಾಳೆ (ಮಾ.8)ರಂದು ಒಂದು ದಿನ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.

Follow us
ವಿವೇಕ ಬಿರಾದಾರ
|

Updated on:Mar 08, 2023 | 4:44 PM

ಬೆಂಗಳೂರು: ಇಂದು (ಮಾರ್ಚ್​ 8) ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day) ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರು ಮಹಾನಗರ ಸಾರಿಗೆ (BMTC) ಮಹಿಳೆಯರಿಗೆ ಗುಡ್​ ನ್ಯೂಸ್​ ​​​ ನೀಡಿದೆ. ಹೌದು ಮಾರ್ಚ್​ 7 ರ ಮಧ್ಯರಾತ್ರಿ 12 ಗಂಟೆಯಿಂದ ಇಂದು (ಮಾ.8) ಮಧ್ಯರಾತ್ರಿ 12 ಗಂಟೆ ರವರೆಗೆ ಮಹಿಳಾ ಪ್ರಯಾಣಿಕರು ಉಚಿತವಾಗಿ ಬಿಬಿಎಂಟಿಸಿ ಬಸ್​​ಗಳಲ್ಲಿ (Free BMTC Travel) ಸಂಚರಿಸಬಹು. ಎಸಿ ವೋಲ್ವೋ ಸೇರಿದಂತೆ ಬಿಎಂಟಿಸಿಯ ಎಲ್ಲ ಮಾದರಿಯ ಬಸ್​​ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಮಹಿಳಾ ದಿನಾಚರಣೆ ಅಂಗವಾಗಿ ಒಂದು ದಿನ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅನುಮತಿ ನೀಡಿ ಎಂದು ಸರ್ಕಾರಕ್ಕೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ (ಎಂ.ಡಿ) ಸತ್ಯವತಿ ಪತ್ರ ಬರೆದಿದ್ದರು. ಎಂಡಿ ಸತ್ಯವತಿ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ. ಹೀಗಾಗಿ ಇಂದು ಬಿಎಂಟಿಸಿ ಬಸ್​​​ನಲ್ಲಿ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ನಿತ್ಯ ಬೆಂಗಳೂರಿನಲ್ಲಿ 10,21,645 ಮಹಿಳಾ ಪ್ರಯಾಣಿಕರು ಸಂಚಾರ ಮಾಡುತ್ತಾರೆ.

ಮಹಿಳೆಯರಿಗೆ ಭರ್ಜರಿ ಕೊಡುಗೆ ನೀಡಿದ ಕರ್ನಾಟಕ ಪ್ರವಾಸೋದ್ಯಮ ಇಲಾಖೆ

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಮಹಿಳೆಯರಿಗೆ ಭರ್ಜರಿ ರಿಯಾಯಿತಿ ನೀಡಿದೆ. ಸರ್ಕಾರಿ ಹೋಟೆಲ್‌ಗಳಿಗೆ ಭೇಟಿ ನೀಡುವ ಮಹಿಳೆಯರಿಗೆ ವಿಶೇಷ ಕೊಡುಗೆಯನ್ನು ಪ್ರಕಟಿಸಿದ್ದು, ಹೋಟೆಲ್‌ಗಳ ರೂಮ್ ಬುಕ್ಕಿಂಗ್‌ಗಳಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ಘೋಷಿಸಿದೆ. ಇದರ ಜೊತೆಗೆ ಫುಡ್​ ಮೇಲೂ ಸಹ ಶೇಕಡಾ 20 ರಷ್ಟು ಡಿಸ್ಕೌಂಟ್​ ನೀಡಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ(Women’s Day 2023) ಪ್ರಯುಕ್ತ ಕರ್ನಾಟಕ ಸರ್ಕಾರದ ಮಯೂರ ಗ್ರೂಪ್ ಆಫ್ ಹೊಟೇಲ್‌ಗಳಲ್ಲಿ ರೂಮ್ ಬುಕ್ಕಿಂಗ್‌ನಲ್ಲಿ ವಿಶೇಷ ಶೇಕಡಾ 50 ರಷ್ಟು ರಿಯಾಯಿತಿ ಮತ್ತು ಆಹಾರದ ಮೇಲೆ ಶೇಕಡಾ 20 ರಷ್ಟು ರಿಯಾಯಿತಿಯನ್ನು ಎಲ್ಲಾ ಮಹಿಳೆಯರಿಗೆ ನೀಡಲಾಗಿದೆ. ಮಾರ್ಚ್ 6 ರಿಂದ ಮಾರ್ಚ್ 10ರ ವರೆಗೆ ಈ ಕೊಡುಗೆಯನ್ನು ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ತಿಳಿಸಿದೆ.

ರಾಜ್ಯದ ಮೈಸೂರು, ಹಂಪಿ, ಶ್ರೀರಂಗಪಟ್ಟಣ, ಆಲಮಟ್ಟಿ, ಮಡಿಕೇರಿ, ನಂದಿ ಬೆಟ್ಟ, ವಿಜಯಪುರ ಹಾಗೂ ಊಟಿಯಲ್ಲೂ ಸಹ ಮಯೂರ ಹೋಟೆಲ್‌ಗಳಿವೆ. 06.03.2023 ರಿಂದ 10.03.2023 ರವರೆಗೆ ಈ ಆಫರ್ ಇರಲಿದ್ದು, ಸಿಂಗಲ್, ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರಯಾಣಿಸುವ ಮಹಿಳಾ ಪ್ರವಾಸಿಗರಿಗೆ 50% ರಿಯಾಯಿತಿ ನೀಡಲಾಗುತ್ತಿದೆ. ಆದ್ದರಿಂದ ಎಲ್ಲಾ ಮಹಿಳಾ ಪ್ರವಾಸಿಗರು ಈ ಸೌಲಭ್ಯವನ್ನು ಪಡೆದುಕೊಳ್ಳಲು ಎಂದು ಕೆಎಸ್‌ಟಿಡಿಸಿ ಮನವಿ ಮಾಡಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:58 pm, Tue, 7 March 23

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ