World Air Quality report: ಹವಾಮಾನ ಬದಲಾವಣೆಯಿಂದ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ

ವಿಶ್ವ ವಾಯು ಗುಣಮಟ್ಟ ವರದಿ ಬಹಿರಂಗವಾಗಿದೆ. ವರದಿ ಪ್ರಕಾರ, ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ 2023ರಲ್ಲಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಿದೆ. 2023 ರಲ್ಲಿ, ಬೆಂಗಳೂರಿನ ಸರಾಸರಿ PM 2.5 ಮೌಲ್ಯವು ಪ್ರತಿ ಕ್ಯಾಬಿಕ್ ಮೀಟರ್‌ 28.6 ಮೈಕ್ರೋಗ್ರಾಂಗಳಿಗೆ ಇಳಿಕೆಯಾಗಿದೆ. ಜಗತ್ತಿನಾದ್ಯಂತ ಮೌಲ್ಯಮಾಪನ ಮಾಡಲಾದ 7,812 ನಗರಗಳಲ್ಲಿ ಬೆಂಗಳೂರು 673 ನೇ ಅತ್ಯಂತ ಕಲುಷಿತ ನಗರವಾಗಿದೆ.

World Air Quality report: ಹವಾಮಾನ ಬದಲಾವಣೆಯಿಂದ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ
2023 ರಲ್ಲಿ ಹವಾಮಾನ ಬದಲಾವಣೆಯಿಂದ ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ (ಸಾಂದರ್ಭಿಕ ಚಿತ್ರ)Image Credit source: iStock Photo
Follow us
|

Updated on: Mar 29, 2024 | 8:18 AM

ಬೆಂಗಳೂರು, ಮಾ.29: ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ 2023ರಲ್ಲಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ (Bengaluru Air Quality) ಸುಧಾರಿಸಿದೆ ಎಂದು ವಿಶ್ವ ವಾಯು ಗುಣಮಟ್ಟ ವರದಿಯ (World Air Quality Report) ಅಂಕಿ ಅಂಶಗಳು ಬಹಿರಂಗಪಡಿಸಿವೆ. 2023 ರಲ್ಲಿ, ಬೆಂಗಳೂರಿನ ಸರಾಸರಿ PM 2.5 ಮೌಲ್ಯವು ಪ್ರತಿ ಕ್ಯಾಬಿಕ್ ಮೀಟರ್​ಗೆ 28.6 ಮೈಕ್ರೋಗ್ರಾಂಗಳಷ್ಟಾಗಿದೆ. 2022 ರಲ್ಲಿ ಪ್ರತಿ ಕ್ಯಾಬಿಕ್ ಮೀಟರ್‌ 31.5 ಮೈಕ್ರೋಗ್ರಾಂಗಳಷ್ಟು ದಾಖಲಾಗಿತ್ತು. ಇದು 2018 ರಿಂದ ನಗರವು ಕಂಡ ಅತ್ಯುತ್ತಮ ಗಾಳಿಯ ಗುಣಮಟ್ಟವಾಗಿದೆ.

ಜಗತ್ತಿನಾದ್ಯಂತ ಮೌಲ್ಯಮಾಪನ ಮಾಡಲಾದ 7,812 ನಗರಗಳಲ್ಲಿ ಬೆಂಗಳೂರು 673 ನೇ ಅತ್ಯಂತ ಕಲುಷಿತ ನಗರವಾಗಿದೆ. ಆದಾಗ್ಯೂ, ದೆಹಲಿ, ಹೈದರಾಬಾದ್ ಮತ್ತು ಕೋಲ್ಕತ್ತಾ ಸೇರಿದಂತೆ ದೇಶದ ಇತರ ಮೆಟ್ರೋಪಾಲಿಟನ್ ನಗರಗಳಿಗಿಂತ ಬೆಂಗಳೂರು ಕಡಿಮೆ ಮಾಲಿನ್ಯವನ್ನು ಹೊಂದಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಇದನ್ನೂ ಓದಿ: Karnataka Weather Update: ಮಾರ್ಚ್​ 28ರ ಬೆಂಗಳೂರು ತಾಪಮಾನ 7 ವರ್ಷಗಳಲ್ಲೇ ಗರಿಷ್ಠ

ಆದಾಗ್ಯೂ, ಹವಾಮಾನ ಬದಲಾವಣೆಗಳು ಸುಧಾರಿತ ಗಾಳಿಯ ಗುಣಮಟ್ಟಕ್ಕೆ ಕಾರಣವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುತ್ತಿದೆ ಎಂದು ನಾವು ಭ್ರಮೆಯಲ್ಲಿರಬಾರದು. ಹವಾಮಾನದ ಅಂಶಗಳ ಕಾರಣದಿಂದಾಗಿ ಸುಧಾರಣೆ ದಾಖಲಾಗಿದೆ. ಇಎಲ್ ನಿನೊ ಪರಿಣಾಮವು ಕಣಗಳನ್ನು ಕರಾವಳಿಯ ಕಡೆಗೆ ಹರಡುತ್ತದೆ ಮತ್ತು ಇದು ಬೆಂಗಳೂರಿನ ಗಾಳಿಯ ಗುಣಮಟ್ಟದ ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್‌ನ (ಎನ್‌ಐಎಎಸ್) ಚೇರ್ ಪ್ರೊಫೆಸರ್ ಪ್ರೊಫೆಸರ್ ಗುಫ್ರಾನ್ ಬೇಗ್ ಹೇಳಿದ್ದಾರೆ.

ನಗರದ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ ಮತ್ತು ವಾಹನಗಳ ಹೊರಸೂಸುವಿಕೆಯು ವಾಯುಮಾಲಿನ್ಯಕ್ಕೆ ಪ್ರಮುಖ ಕೊಡುಗೆಯಾಗಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಪ್ರೊಫೆಸರ್ ಟಿ.ವಿ.ರಾಮಚಂದ್ರ ಹೇಳಿದ್ದಾರೆ. ನಮ್ಮ ಅಧ್ಯಯನದ ಪ್ರಕಾರ, ಸುಮಾರು 70% ಬೆಂಗಳೂರಿನ ನಾಗರಿಕರು ದ್ವಿಚಕ್ರ ವಾಹನಗಳನ್ನು ಬಳಸುತ್ತಾರೆ. ಪರಿಸ್ಥಿತಿ ಹೀಗಿರುವಾಗ, ಗಾಳಿಯ ಗುಣಮಟ್ಟದಲ್ಲಿ ಯಾವುದೇ ಸುಧಾರಣೆಯನ್ನು ನಾವು ನಿರೀಕ್ಷಿಸಲಾಗುವುದಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!