REWARD: ಜಲಾನಯನ ಪ್ರದೇಶಗಳ ಪುನಶ್ಚೇತನ ಸಂಬಂಧ ವಿಶ್ವಬ್ಯಾಂಕ್​ ನೆರವು: ಚಲುವರಾಯಸ್ವಾಮಿ

ಕರ್ನಾಟಕದ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಇಂದು ಬೆಂಗಳೂರಿನಲ್ಲಿ ವಿಶ್ವಬ್ಯಾಂಕ್​ ನಿಯೋಗದ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳು ಹಲವು ಸೂಚನೆಗಳನ್ನು ನೀಡಿದ್ದಾಗಿ ಕೃಷಿ ಸಚಿವರು ತಿಳಿಸಿದ್ದಾರೆ.

REWARD: ಜಲಾನಯನ ಪ್ರದೇಶಗಳ ಪುನಶ್ಚೇತನ ಸಂಬಂಧ ವಿಶ್ವಬ್ಯಾಂಕ್​ ನೆರವು: ಚಲುವರಾಯಸ್ವಾಮಿ
ಎನ್ ಚಲುವರಾಯಸ್ವಾಮಿ
Follow us
Rakesh Nayak Manchi
|

Updated on: Jun 26, 2023 | 7:52 PM

ಬೆಂಗಳೂರು: ಜಲಾನಯನ ಪ್ರದೇಶಗಳ ಪುನಶ್ಚೇತನದ ಸಂಬಂಧ ನೆರವು ನೀಡುವುದಾಗಿ ವಿಶ್ವ ಬ್ಯಾಂಕ್ (World Bank) ಭರವಸೆ ನೀಡಿದ್ದು, 600 ಕೋಟಿ ರಾಜ್ಯದಲ್ಲಿ ಅನುದಾನ ವೆಚ್ಚಕ್ಕೆ ಈಗಾಗಲೇ ಸಮ್ಮತಿ ಸೂಚಿಸಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ (N Chaluvarayaswamy) ಹೇಳಿದ್ದಾರೆ. ವಿಶ್ವ ಬ್ಯಾಂಕ್ ನಿಯೋಗದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, 5 ವರ್ಷಗಳ ರಿವಾರ್ಡ್ (REWARD) ಪ್ರೋಗ್ರಾಂ ಮೂಲಕ ಜಲಾನಯನ ಪ್ರದೇಶ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗುವುದು. ರಾಜಸ್ಥಾನ ಬಿಟ್ಟರೆ ಹೆಚ್ಚಿನ ಡ್ರೈ ಲ್ಯಾಂಡ್ ಇರುವುದು ಕರ್ನಾಟಕದಲ್ಲಿ ಎಂದರು.

ವಿಶ್ವ ಬ್ಯಾಂಕ್ ಅಧಿಕಾರಿಗಳ ನಿಯೋಗವು ಒಣಭೂಮಿ ಅಭಿವೃದ್ಧಿಗೆ ಹಲವು ಸಲಹೆಗಳನ್ನು ನೀಡಿದ್ದು, ಅದನ್ನು ಜಾರಿ ಮಾಡುವುದಾಗಿ ಭರವಸೆ ನೀಡಿದ್ದೇವೆ ಎಂದು ಹೇಳಿದ ಕೃಷಿ ಸಚಿವರು, ರಿವಾರ್ಡ್ ಯೋಜನೆಯನ್ನು 2022-23ನೇ ಸಾಲಿನಿಂದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ 600 ಕೋಟಿ ವೆಚ್ಚದಲ್ಲಿ (ವಿಶ್ವ ಬ್ಯಾಂಕ್​ನ ಪಾಲು ಶೇ.70, ರಾಜ್ಯ ಸರ್ಕಾರದ ಪಾಲು ಶೇ.30) ರಾಜ್ಯದ 25 ಜಿಲ್ಲೆಗಳಲ್ಲಿ ಅನುಷ್ಠಾನಗಳಿಸಲಾಗುತ್ತಿದೆ ಎಂದು ತಿಳಿಸಿದರು.

ರಿವಾರ್ಡ್ ಯೋಜನೆ ಮೂಲಕ ಇತರೆ ರಾಜ್ಯಗಳಿಗೆ ತಾಂತ್ರಿಕ ಸಹಯೋಗ ನೀಡಲು ಕರ್ನಾಟಕವನ್ನು ಮಾರ್ಗದರ್ಶಕ ರಾಜ್ಯವಾಗಿ ಗುರುತಿಸಲಾಗಿದೆ. ವಿಶ್ವಬ್ಯಾಂಕ್ ಸಹಯೋಗದಲ್ಲಿ ರಾಜ್ಯವು ತನ್ನ ಉತ್ತಮ ಕಾರ್ಯಚಟುವಟಿಕೆಗಳನ್ನು ಮುಂದುವರಿಸಲಿದೆ ಮತ್ತು ವೈಜ್ಞಾನಿಕ ಜಲಾನಯನ ನಿರ್ವಹಣಾ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಇತರ ರಾಜ್ಯಗಳಿಗೆ ಅಗತ್ಯವಿರುವ ತಾಂತ್ರಿಕ ಮಾರ್ಗದರ್ಶನವನ್ನು ನೀಡುತ್ತದೆ ಎಂದು ವಿಶ್ವಬ್ಯಾಂಕ್​ ನಿಯೋಗಕ್ಕೆ ಕೃಷಿ ಸಚಿವರು ಭರವಸೆ ನೀಡಿದರು.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಂಡ ರಚನೆ; ಸಚಿವ ಚಲುವರಾಯಸ್ವಾಮಿ

ಜಲಾನಯನ ಅಭಿವೃದ್ಧಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ರಾಜ್ಯವು ಮಾಡಿರುವ ಸಾಧನೆಗಳಿಗೆ ಪ್ರಶಂಸೆ ವ್ಯಕ್ತಪಡಿಸಿದ ನಿಯೋಗದ ಅಧಿಕಾರಿಗಳು, ರಾಜ್ಯದ ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಅಭಿವೃದ್ಧಿಯನ್ನು ಸಾಧಿಸಲು ಹಾಗೂ ಅತ್ಯುತ್ತಮವಾಗಿ ಜಲಾನಯನ ನಿರ್ವಹಣೆ ಮತ್ತು ಇತರ ಸಂಬಂಧಿತ ಕ್ಷೇತ್ರಗಳಾದ ಜೈವಿಕ ಮತ್ತು ಯಾಂತ್ರಿಕ ವಿಧಾನಗಳ ಮೂಲಕ ಸಮಸ್ಯಾತ್ಮಕ ಮಣ್ಣಿನ ಸುಧಾರಣೆ, ಸಿರಿಧಾನ್ಯಗಳಿಗೆ ಸಂಬಂಧಿಸಿದಂತೆ ಕೃಷಿ ಮೂಲಸೌಕರ್ಯ ವಲಯಗಳ ಅಭಿವೃದ್ಧಿ, ದೀರ್ಘಾವಧಿ ಹಾಗೂ ಪರಿಣಾಮಕಾರಿ ಉಪಚಾರಗಳ ಮೂಲಕ ಮಣ್ಣಿನ ಸಾವಯವ ಇಂಗಾಲದ ಮಟ್ಟದ ಮರುಸ್ಥಾಪನೆ, ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ಸಾಧನಗಳನ್ನು ಬಳಸಿಕೊಂಡು ಸುಧಾರಿತ ವಿಧಾನಗಳ ಮೂಲಕ ಕ್ರಿಯಾತ್ಮಕ ಕೃಷಿ ಸಲಹೆಗಳನ್ನು ಅಭಿವೃದ್ಧಿಪಡಿಸುವುದು, ರೈತ ಉತ್ಪಾದಕರ ಸಂಸ್ಥೆಗಳ ಮೂಲಕ ಗ್ರಾಮೀಣ ಮಾರುಕಟ್ಟೆಗಳನ್ನು ಸ್ಥಾಪಿಸಲು ಕೃಷಿ ನವೋದ್ಯಮಗಳು ಹಾಗೂ ಮಾರುಕಟ್ಟೆ ಪ್ರಾಂಗಣಗಳಿಗೆ ಉತ್ತೇಜನ ನೀಡುವುದು ಮುಂತಾದವುಗಳ ಕುರಿತು ರಾಜ್ಯವು ಕೈಗೊಳ್ಳುವ ಕಾರ್ಯಕ್ರಮಗಳಿಗೆ ಅಗತ್ಯ ಸಹಕಾರ ಮತ್ತು ಬೆಂಬಲವನ್ನು ಮುಂದುವರಿಸುವುದಾಗಿ ಭರವಸೆ ನೀಡಿದರು.

ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ರಾಜ್ಯದಲ್ಲಿ ವಾಡಿಕೆ ಪ್ರಕಾರ ಈವರೆಗೆ 167 ಮಿ.ಮೀ. ಮಳೆ ಆಗಬೇಕಿತ್ತು. ಆದರೆ 66 ಮಿ.ಮೀ. ಮಳೆ ಆಗಿದೆ, ಶೇ.58ರಷ್ಟು ಮಳೆ ಕಡಿಮೆಯಾಗಿದೆ ಎಂದು ವಿಧಾನಸೌಧದಲ್ಲಿ ಕೃಷಿ ಸಚಿವರು ಹೇಳಿದ್ದಾರೆ. ರಾಜ್ಯದಲ್ಲಿ 82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಬೇಕಿತ್ತು. ಆದರೆ 10.2 ಲಕ್ಷ ಹೆಕ್ಟೇರ್ ಬಿತ್ತನೆ ಆಗಿದೆ, ಶೇ.82ರಷ್ಟು ಬಿತ್ತನೆ ಕಡಿಮೆ ಆಗಿದೆ. ಮಳೆ ರಾಯ ಕರ್ನಾಟಕಕ್ಕೆ ಬರುತ್ತಾನಾ ಎಂದು ನಾವು ಇನ್ನೂ ಒಂದು ವಾರ ಕಾಯುತ್ತೇವೆ. ಚಂಡಮಾರುತ ಇದ್ದರೂ ಅದು ಯಶಸ್ವಿ ಆಗುತ್ತಿಲ್ಲ. ಇವತ್ತು ಮಳೆ ಬರುತ್ತಾ ನಾಳೆ ಬರುತ್ತಾ ಎಂದು ಕಾಯುತ್ತಿದ್ದೇವೆ. ಕರ್ನಾಟಕ ಪೂರ್ತಿ ಮಳೆಯಾಗುತ್ತಿಲ್ಲ. ಮಳೆ ಸಮಸ್ಯೆ ಇದೆ. ರೈತರು ಕಷ್ಟ ಪರಿಸ್ಥಿತಿಯಲ್ಲಿ ಇದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ