ಬೆಂಗಳೂರಿನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್: ಇಲ್ಲಿದೆ ವಿವರ

ICC World Cup Cricket 2023: ಅಕ್ಟೋಬರ್ 20, 26, ನವೆಂಬರ್ 4, 9, 12ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಪಂದ್ಯಾವಳಿಗಳು ನಡೆಯಲಿವೆ. ವಿಶ್ವಕಪ್ ಪಂದ್ಯಾವಳಿಗಳಿಗೆ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ.ಬರುವ ಮತ್ತು ಹೋಗುವ ಪ್ರಯಾಣಕ್ಕೆ 50 ರೂಪಾಯಿ ಟಿಕೆಟ್ ನಿಗದಿಪಡಿಸಲಾಗಿದೆ. ಹೆಚ್ಚಿನ ವಿವರ ಇಲ್ಲಿದೆ ನೋಡಿ.

ಬೆಂಗಳೂರಿನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್: ಇಲ್ಲಿದೆ ವಿವರ
ನಮ್ಮ ಮೆಟ್ರೋ
Follow us
Kiran Surya
| Updated By: Ganapathi Sharma

Updated on:Oct 18, 2023 | 9:09 PM

ಬೆಂಗಳೂರು, ಅಕ್ಟೋಬರ್ 18: ಬೆಂಗಳೂರಿನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಗುಡ್​ನ್ಯೂಸ್ ನೀಡಿದೆ. ಬೆಂಗಳೂರಿನಲ್ಲಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ (World Cup Cricket 2023) ಇರುವ ದಿನ ಮೆಟ್ರೋ ರೈಲು (Metro Train) ಸೇವೆ ಅವಧಿ ವಿಸ್ತರಣೆ ಮಾಡಲಾಗಿದ್ದು, ವಿಶೇಷ ದರದ ರಿಯಾಯಿತಿಯನ್ನೂ ಘೋಷಿಸಲಾಗಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳ ವೇಳೆ ಕ್ರಿಕೆಟ್ ಅಭಿಮಾನಿಗಳಿಗೆ ಸಹಾಯ ಆಗುವ ನಿಟ್ಟಿನಲ್ಲಿ ಮೆಟ್ರೋ ಟಿಕೆಟ್ ವ್ಯವಸ್ಥೆ ಮಾಡಿದೆ.

ಅಕ್ಟೋಬರ್ 20, 26, ನವೆಂಬರ್ 4, 9, 12ರಂದು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಪಂದ್ಯಾವಳಿಗಳು ನಡೆಯಲಿವೆ. ವಿಶ್ವಕಪ್ ಪಂದ್ಯಾವಳಿಗಳಿಗೆ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ.

ಪಂದ್ಯಾವಳಿ ನಡೆಯುವ ಎಲ್ಲ ದಿನಗಳಲ್ಲಿ ನಮ್ಮ ಮೆಟ್ರೋದಲ್ಲಿ ವಿಶೇಷ ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, ಬರುವ ಮತ್ತು ಹೋಗುವ ಪ್ರಯಾಣಕ್ಕೆ 50 ರೂಪಾಯಿ ಟಿಕೆಟ್ ನಿಗದಿಪಡಿಸಿ ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದೆ. ಕ್ರಿಕೆಟ್ ಪಂದ್ಯದ ದಿನದಂದು ಬೆಳಗ್ಗೆ 7 ಗಂಟೆಗೆ ಪೇಪರ್ ಟಿಕೆಟ್​ ಲಭ್ಯವಿರಲಿದೆ.

ಬೆಂಗಳೂರಿನ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲೂ ಪೇಪರ್ ಟಿಕೆಟ್​ ಲಭ್ಯವಾಗಲಿದೆ. ಪೇಪರ್ ಕಾರ್ಡ್​ಗಳ ಜೊತೆಗೆ ಸ್ಮಾರ್ಟ್ ಕಾರ್ಡ್ ಹಾಗೂ ಎನ್​ಸಿಎಂಸಿ ವ್ಯವಸ್ಥೆಯನ್ನು ಕೂಡ ಪ್ರಯಾಣಿಕರು ಉಪಯೋಗಿಸಬಹುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 20ರಂದು ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ, ಅಕ್ಟೋಬರ್ 26ರಂದು ಇಂಗ್ಲೆಂಡ್ ಹಾಗು ಶ್ರೀಲಂಕಾ, ನವೆಂಬರ್ 4ರಂದು ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ, ನವೆಂಬರ್ 9ರಂದು ನ್ಯೂಜಿಲೆಂಡ್ ಮತ್ತು ಶ್ರೀಲಂಕಾ, ನವೆಂಬರ್ 12ರಂದು ಭಾರತ ಹಾಗೂ ನೆದರ್ಲೆಂಡ್​​ ಮಧ್ಯೆ ವಿಶ್ವಕಪ್ ಪಂದ್ಯಾವಳಿಗಳು ನಡೆಯಲಿವೆ.

ಇದನ್ನೂ ಓದಿ: ಟೀಮ್ ಇಂಡಿಯಾವನ್ನು ಸೋಲಿಸಿದರೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ

ವಿಶ್ವಕಪ್ ಟೂರ್ನಿಯಲ್ಲಿ ಆಡಿರುವ ಮೂರೂ ಪಂದ್ಯಗಳನ್ನು ಗೆದ್ದಿರುವ ಟೀಮ್​ ಇಂಡಿಯಾ ಪಾಯಿಂಟ್ ಪಟ್ಟಿಯಲ್ಲಿ ಸದ್ಯ ಅಗ್ರ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ, ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ವಿರುದ್ಧ ಆಡಿರುವ ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ಭಾರತ ತಂಡ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಟೀಮ್ ಇಂಡಿಯಾ ಬೆಂಗಳೂರಿನಲ್ಲಿ ಒಂದೇ ಪಂದ್ಯ ಆಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:08 pm, Wed, 18 October 23

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು