ಬೆಂಗಳೂರು, ಏಪ್ರಿಲ್ 22: ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವಕ್ಕೆ (Karaga Festival) ಕ್ಷಣಗಣನೆ ಆರಂಭವಾಗಿದ್ದು, ಕರಗ ಮಹೋತ್ಸವ ಮಂಗಳವಾರ ನಡೆಯಲಿದೆ. ಹೀಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕರಗ ಎಲ್ಲಿಲ್ಲಿ (Karaga procession) ಬರಲಿದೆ ಎನ್ನುವುದ ಸಂಪೂರ್ಣ ವಿವರ ಸಿದ್ಧವಾಗಿದೆ. ಮಧ್ಯರಾತ್ರಿ 2 ಗಂಟೆಯಿಂದ ಬೆಳ್ಳಗ್ಗೆ 10 ಗಂಟೆಯವರೆಗೂ ಕರಗ ಮಹೋತ್ಸವ ನಡೆಯಲಿದೆ. ಅದ್ದೂರಿಯಾಗಿ ಕರಗವನ್ನು ಬರಮಾಡಿಕೊಳ್ಳಲು ಕರಗ ಸಮಿತಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಬೆಳಗ್ಗೆಯಿಂದ ಕರಗದ ಶಾಸ್ತ್ರಗಳು ಆರಂಭವಾಗಿ ಮಧ್ಯರಾತ್ರಿವರೆಗೂ ನಡೆಯಲಿದ್ದು, ಶಾಸ್ತ್ರಗಳು ಮುಗಿದ ನಂತರ ಮಧ್ಯರಾತ್ರಿ 2 ಗಂಟೆಗೆ ಅಧಿಕೃತವಾಗಿ ಕರಗ ಶಾಕೋತ್ಸವ ಆರಂಭವಾಗಲಿದೆ.
ಸದ್ಯ ಹಸಿ ಕರಗ ನಡೆದ ನಂತರ ತಾಯಿ ದ್ರೌಪದಿ ತಾಯಿ ನೆಲೆಸಿದ್ದಾಳೆ ಎಂದೇ ಪರಿಗಣನೆ ಮಾಡಲಾಗುತ್ತದೆ. ಹೀಗಾಗಿ ನಾಳೆ ತಾಯಿಗೆ ವಿಶೇಷ ಶಾಸ್ತ್ರಗಳನ್ನು ಮಾಡಲಾಗುತ್ತದೆ. ಅದರಲ್ಲಿ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರಗಳು ನೆರೆವೇರಲಿವೆ. ನಾಳೆ ರಾತ್ರಿ 2 ಗಂಟೆ ಕರಗ ಆರಂಭವಾಗಲಿದ್ದು, ನಾಡಿದ್ದು ಬೆಳಗ್ಗೆ 8 ಗಂಟೆಗೆ ದೇವಾಲಯಕ್ಕೆ ವಾಪಾಸ್ ಬರಬಹುದು. ಹಿಂದಿನ ಸಂಪ್ರದಾಯದಂತೆ ಎಲ್ಲ ಪೇಟೆಗಳಲ್ಲಿಯೂ ಕರಗ ಮೆರವಣಿಗೆ ಈ ಬಾರಿಯೂ ಇರಲಿದೆ.
ಕರಗ ಮೆರವಣಿಗೆ ಮೊದಲು ಮಸ್ತಾನ್ ಸಾಬ್ ದರ್ಗಾ ಭೇಟಿ ಮಾಡಿ, ಅಣ್ಣಮ್ಮ ದೇವಾಲಯದ ಮೂಲಕ ತಿಗಳರಪೇಟೆಯಿಂದ ವಾಪಾಸ್ ಧರ್ಮರಾಯ ದೇಗುಲಕ್ಕೆ ಬರಲಿದೆ. ಸದ್ಯ ಕರಗಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಜನರು ಸೇರುವ ಸಾಧ್ಯಾತೆ ಇದೆ. ಹೀಗಾಗಿ ಎಲ್ಲಿಯೂ ಕೊಂಚ ಸಮಸ್ಯೆಯು ಆಗದಂತೆ ವ್ಯವಸ್ಥೆ ಮಾಡಲಾಗಿದೆ.
ಕರಗಕ್ಕೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. 3 ಸಾವಿರ ಪೋಲಿಸರ ನಿಯೋಜನೆ ಮಾಡಲಾಗುತ್ತಿದ್ದು, 25 ಸಾವಿರ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಕರಗ ಮಹೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುವ ಸಾಧ್ಯತೆ ಇದೆ ಎಂದು ಕರಗ ಸಮಿತಿ ಅಧ್ಯಕ್ಷ ಸತೀಶ್ ಹೇಳಿದ್ದಾರೆ.
ಇದನ್ನೂ ಓದಿ: ಐತಿಹಾಸಿಕ ಬೆಂಗಳೂರು ಕರಗ ಬಗ್ಗೆ ನಿಮಗೆಷ್ಟು ಗೊತ್ತು? ಮೆರವಣಿಗೆ ವೇಳೆ ಕರಗ ದರ್ಗಾಗೆ ಹೋಗುವುದೇಕೆ?
ಕರಗ ಮೆರವಣಿಗೆ ಮೊದಲು ಕಬ್ಬನ್ ಪೇಟೆಯಿಂದ ಆರಂಭವಾಗಿ, ರಾಜ ಮಾರ್ಕೆಟ್ ಸರ್ಕಲ್, ಕೆಆರ್ ಮಾರ್ಕೆಟ್, ಅಂಜನೇಯ ದೇವಸ್ಥಾನ, ಗಣೇಶ ದೇವಸ್ಥಾನ ತಲುಪಲಿದೆ. ತದನಂತರ 4 ಗಂಟೆ ಸುಮಾರಿಗೆ ಪೋಲೀಸ್ ಬಂದೋಬಸ್ತ್ನಲ್ಲಿ ಮಸ್ತಾನ್ ಸಾಬ್ ದರ್ಗಾ ತಲುಪಲಿದೆ. ನಂತರ ಮೆಜೆಸ್ಟಿಕ್ ಅಣ್ಣಮ್ಮ ದೇವಸ್ಥಾನ, ಮೈಸೂರ್ ಬ್ಯಾಂಕ್ ಸರ್ಕಲ‌್ ಮುಕಾಂತರವಾಗಿ ಬಂದು ಕುಂಬಾರ ಪೇಟೆ, ತಿಗಳರ ಪೇಟೆ, ಎಸ್ಪಿ ರೋಡ್, ದೇವಸ್ಥಾನ ಮುಖಾಂತರ ಮೇಲ್ ಪೇಟೆಗೆ ಬಂದು ನಂತರ ಧರ್ಮರಾಯ ದೇವಸ್ಥಾನ ತಲುಪಲಿದೆ ಎಂದು ಕರಗ ಸಮಿತಿ ಅಧ್ಯಕ್ಷ ಸತೀಶ್ ಕರಗ ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ