Kannada News Karnataka Bengaluru Bengaluru News In Kannada: World Famous Karaga Festival, Traffic restrictions on many roads in Bangalore, here are the details
ಬೆಂಗಳೂರು ಕರಗ ಮಹೋತ್ಸವ: ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ವಿವರ
Bengaluru Traffic Restrictions: ಬೆಂಗಳೂರಿನ ವಾಹನ ಸವಾರರೇ, ಗಮನಿಸಿ. ಐತಿಹಾಸಿಕ ಕರಗ ಮಹೋತ್ಸವದ ಪ್ರಯುಕ್ತ ನಗರದ ಹಲವು ಕಡೆಗಳಲ್ಲಿ ಇಂದು ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧ ಇದೆ. ಕರಗ ಮೆರವಣಿಗೆ ಯಾವೆಲ್ಲ ರಸ್ತೆಗಳಲ್ಲಿ ಸಾಗಲಿದೆ? ಯಾವೆಲ್ಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ? ಪಾರ್ಕಿಂಗ್ ಸ್ಥಳಗಳು ಎಲ್ಲೆಲ್ಲಿ ಎಂಬಿತ್ಯಾದಿ ಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ವಿವರ
ಬೆಂಗಳೂರು, ಏಪ್ರಿಲ್ 23: ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ (Karaga Festival) ಇಂದು ನಡೆಯುತ್ತಿದ್ದು, ಈ ಪ್ರಯುಕ್ತ ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic Restrictions) ಹೇರಲಾಗಿದೆ. ಇಂದು ಮಧ್ಯರಾತ್ರಿ 2 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೂ ಕರಗ ಮಹೋತ್ಸವದ ಮೆರವಣಿಗೆ ಸಾಗಲಿದೆ. ಹೀಗಾಗಿ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಿ ಸಂಚಾರ ಪೊಲೀಸರು (Traffic Police) ಆದೇಶ ಹೊರಡಿಸಿದ್ದಾರೆ. ಕರಗ ಮೆರವಣಿಗೆ ಯಾವೆಲ್ಲ ರಸ್ತೆಗಳಲ್ಲಿ ಸಾಗಲಿದೆ? ಯಾವೆಲ್ಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಇಲ್ಲಿದೆ.
ಇಂದು ಮಧ್ಯರಾತ್ರಿ 2 ಗಂಟೆಗೆ ಕರಗ ಮಹೋತ್ಸವ ನಡೆಯಲಿದೆ. ಅದ್ಧೂರಿಯಾಗಿ ಕರಗ ಆಚರಣೆಗೆ ಕರಗ ಸಮಿತಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಇಂದು ಬೆಳಗ್ಗೆಯಿಂದ ಕರಗದ ಶಾಸ್ತ್ರಗಳು ಆರಂಭವಾಗಿ ಮಧ್ಯರಾತ್ರಿವರೆಗೂ ನಡೆಯಲಿದ್ದು, ಶಾಸ್ತ್ರಗಳು ಮುಗಿದ ನಂತರ ಮಧ್ಯರಾತ್ರಿ 2 ಗಂಟೆಗೆ ಅಧಿಕೃತವಾಗಿ ಕರಗ ಶಕ್ತ್ಯೋತ್ಸವ ಆರಂಭವಾಗಲಿದೆ. ಕರಗ ಮೆರವಣಿಗೆ ನೋಡಲು ಲಕ್ಷಾಂತರ ಭಕ್ತರು ಸೇರುವ ಸಾಧ್ಯತೆಯಿದೆ. ಹೀಗಾಗಿ 3 ಸಾವಿರ ಪೋಲಿಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗುತ್ತಿದ್ದು, 25 ಸಾವಿರ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ.
ಕರಗ ಸಾಗುವ ಮಾರ್ಗ
ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಆರಂಭ.
ಕಬ್ಬನ್‌ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಂಚಾರ.
ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್‌ಪಿ ರಸ್ತೆ, ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ, ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್ ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ