ಫಿನಿಕ್ಸ್ ಮಾಲ್ ಆಫ್ ಏಷ್ಯಾ ಪ್ರವೇಶ ನಿರ್ಬಂಧ ಪ್ರಶ್ನಿಸಿ ರಿಟ್ ಅರ್ಜಿ: ಜ.30ಕ್ಕೆ ವಿಚಾರಣೆ ಮುಂದೂಡಿಕೆ
ಫಿನಿಕ್ಸ್ ಮಾಲ್ ಆಫ್ ಏಷ್ಯಾ(Phoenix Mall Of Asia)ಗೆ ಪ್ರವೇಶ ನಿರ್ಬಂಧಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಲಿಮಿಟೆಡ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಮಾಡಲಾಗಿದೆ. ಈ ವೇಳೆ ಸಮಸ್ಯೆ ಬಗೆಹರಿಸಲು ಕೈಗೊಂಡ ಕ್ರಮದ ಮಾಹಿತಿ ಹೈಕೋರ್ಟ್(High Court)ಗೆ ವರದಿ ಸಲ್ಲಿಕೆ ಮಾಡಲಾಗಿದ್ದು, ಪರಿಹಾರ ಕ್ರಮದ ಜಾರಿ ಬಗ್ಗೆ ಜ.30 ಕ್ಕೆ ತಿಳಿಸಲು ಸೂಚಿಸಿ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.
ಬೆಂಗಳೂರು, ಜ.05: ಫಿನಿಕ್ಸ್ ಮಾಲ್ ಆಫ್ ಏಷ್ಯಾ(Phoenix Mall Of Asia)ಗೆ ಪ್ರವೇಶ ನಿರ್ಬಂಧಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಲಿಮಿಟೆಡ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಮಾಡಲಾಗಿದೆ. ಈ ವೇಳೆ ಸಮಸ್ಯೆ ಬಗೆಹರಿಸಲು ಕೈಗೊಂಡ ಕ್ರಮದ ಮಾಹಿತಿ ಹೈಕೋರ್ಟ್(High Court)ಗೆ ವರದಿ ಸಲ್ಲಿಕೆ ಮಾಡಲಾಗಿದ್ದು, ಅದರಲ್ಲಿ ದ್ವಿಚಕ್ರ ವಾಹನಗಳ ಪ್ರವೇಶ ಶುಲ್ಕ ಕಡಿತ, ಕ್ಯಾಬ್, ಆಟೋಗಳ ಪಿಕಪ್, ಡ್ರಾಪ್ ಪಾಯಿಂಟ್ ಬದಲಾವಣೆ. ಮಾಲ್ನ ಉದ್ಯೋಗಿಗಳ ವಾಹನ ಪಾರ್ಕಿಂಗ್ ಗೆ ರಿಯಾಯಿತಿ ಪಾಸ್ ವ್ಯವಸ್ಥೆ. ವಾಹನಗಳ ಭದ್ರತಾ ಚೆಕಿಂಗ್ ಪಾಯಿಂಟ್ ಬದಲಾವಣೆ. ಪ್ರೀಪೇಯ್ಡ್ ಆಟೋ ನಿಲ್ದಾಣ ಸ್ಥಾಪಿಸಲು ಕ್ರಮ. ಇದಲ್ಲದೇ ಇನ್ನೂ ಹಲವು ಕ್ರಮಗಳ ಮಾಹಿತಿಯನ್ನು ಹೈಕೋರ್ಟ್ಗೆ ಸಲ್ಲಿಸಲಾಗಿದೆ. ಆದರೆ, ಪರಿಹಾರ ಕ್ರಮದ ಜಾರಿ ಬಗ್ಗೆ ಜ.30 ಕ್ಕೆ ತಿಳಿಸಲು ಸೂಚಿಸಿ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಇನ್ನು ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.
ಮಾಲ್ ಆಫ್ ಏಷ್ಯಾದಿಂದ ಆಗುತ್ತಿರುವ ಸಮಸ್ಯೆಗಳನ್ನು ಬಿಚ್ಚಿಟ್ಟ ಸ್ಥಳೀಯರು
ಪಾರ್ಕಿಂಗ್ ವಿಚಾರವಾಗಿ ಮಾಲ್ ಆಫ್ ಏಷ್ಯಾ ಮತ್ತು ಬೆಂಗಳೂರುನಗರ ಪೊಲೀಸರ ನಡುವೆ ಜಟಾಪಟಿ ನಡೆಯುತ್ತಿದ್ದು, ಈ ನಡುವೆ ಮಲ್ಟಿಫ್ಲೆಕ್ಸ್ಗೆ ಅನುಮತಿ ಕೋರಿ ಪೊಲೀಸರಿಗೆ ಮನವಿ ಮಾಡಿದೆ. ಆದರೆ, ಟ್ರಾಫಿಕ್ ಸಮಸ್ಯೆ ಸರಿಮಾಡಿದ ಬಳಿಕ ಅನುಮತಿ ನೀಡುತ್ತೇವೆ ಎಂದು ಪೊಲೀಸರು ಖಡಕ್ ಆಗಿ ಸೂಚಿಸಿದ್ದಾರೆ. ಈ ಜಟಾಪಟಿ ನಡುವೆ ಸ್ಥಳೀಯರು ಮಾಲ್ನಿಂದ ಆಗುತ್ತಿರುವ ಸಮಸ್ಯೆಗಳನ್ನು ಬಿಚ್ಚಿಟ್ಟಿದ್ದು, ‘ಅಪಾರ್ಟ್ಮೆಂಟ್ನಲ್ಲಿ ನೆಲೆಸಿರುವ ನಮಗೆ ಮಾಲ್ನಿಂದ ಹಲವು ತೊಂದರೆಗಳು ಆಗುತ್ತಿವೆ.
ಇದನ್ನೂ ಓದಿ:ಮಾಲ್ ಆಫ್ ಏಷ್ಯಾ-ಬೆಂಗಳೂರು ಪೊಲೀಸರ ನಡುವೆ ಜಟಾಪಟಿ; ಮಾಲ್ನಿಂದ ಆಗುತ್ತಿರುವ ಸಮಸ್ಯೆಗಳನ್ನು ಬಿಚ್ಚಿಟ್ಟ ಸ್ಥಳೀಯರು
ಸಮಸ್ಯೆಗಳನ್ನು ಬಿಚ್ಚಿಟ್ಟ ಸ್ಥಳೀಯರು
ಮಾಲ್ನಿಂದ ಬರುವ ಜನರೇಟರ್ ಶಬ್ದದಿಂದ ಮಾಲಿನ್ಯವಾಗುತ್ತಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆ ಆಗುತ್ತಿದೆ. ಮಾಲ್ ಲೈಟಿಂಗ್ಸ್ ಅಪಾರ್ಟ್ಮೆಂಟ್ ನಿವಾಸಿಗಳ ನಿದ್ದೆಗೂ ಸಮಸ್ಯೆ ಉಂಟುಮಾಡುತ್ತಿದೆ. ಬಳ್ಳಾರಿ ರಸ್ತೆ ಹಾಗೂ ಕೆಂಪೇಗೌಡ ಏರ್ಪೋರ್ಟ್ ರಸ್ತೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದೆ. ಮಾಲ್ಗೆ ಬರುವವರು ರಸ್ತೆಯಲ್ಲೇ ಪಾರ್ಕಿಂಗ್ ಮಾಡಿ ತೆರಳುತ್ತಾರೆ. ಸರ್ವಿಸ್ ರಸ್ತೆ ಮೂಲಕ ಹೆಬ್ಬಾಳ, ಸಹಕಾರನಗರ, ಜಕ್ಕೂರು, ಅಮೃತಹಳ್ಳಿ ನಿವಾಸಿಗಳು ತೆರಳಲು ಕಷ್ಟವಾಗುತ್ತಿದೆ. ಆಸ್ಪತ್ರೆಗೆ ತೆರಳುವ ಹಿರಿಯ ನಾಗರೀಕರಿಗೆ, ರೋಗಿಗಳಿಗೆ ಅನಾನುಕೂಲವಾಗುತ್ತಿದೆ ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನುನ ಓದಲು ಇಲ್ಲಿ ಕ್ಲಿಕ್ ಮಾಡಿ