Narendra Rai Derla: ಸೌಜನ್ಯವಿಲ್ಲದ ನೇಮಕಾತಿಗೆ ಆಕ್ಷೇಪ; ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಹುದ್ದೆ ನಿರಾಕರಿಸಿದ ನರೇಂದ್ರ ರೈ ದೇರ್ಲ

ಇಂಥ ಪ್ರತಿಷ್ಠಾನ ಪ್ರಾಧಿಕಾರ ಅಕಾಡೆಮಿಗಳಿಗೆ ನೇಮಕ ಮಾಡುವಾಗ ಸೌಜನ್ಯಕ್ಕಾದರೂ ಅವರನ್ನು ಸಂಪರ್ಕಿಸಿ ಪೂರ್ವಾನುಮತಿಯನ್ನು ಪಡೆಯುವುದು ಹೆಚ್ಚು ಸೂಕ್ತ ಎಂದು ನರೇಂದ್ರ ರೈ ದೇರ್ಲ ಹೇಳಿದ್ದಾರೆ.

Narendra Rai Derla: ಸೌಜನ್ಯವಿಲ್ಲದ ನೇಮಕಾತಿಗೆ ಆಕ್ಷೇಪ; ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಹುದ್ದೆ ನಿರಾಕರಿಸಿದ ನರೇಂದ್ರ ರೈ ದೇರ್ಲ
ಲೇಖಕ ನರೇಂದ್ರ ರೈ ದೇರ್ಲ ಅವರ ನಿರ್ಧಾರಕ್ಕೆ ಶ್ಲಾಘನೆ ವ್ಯಕ್ತವಾಗಿದೆ (ಎಡಚಿತ್ರ), ಪೂರ್ಣಚಂದ್ರ ತೇಜಸ್ವಿ (ಬಲಚಿತ್ರ)
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Aug 25, 2022 | 9:18 AM

ಬೆಂಗಳೂರು: ಕರ್ನಾಟಕ ಸರ್ಕಾರವು ನಿನ್ನೆಯಷ್ಟೇ (ಆಗಸ್ಟ್ 24) ತನ್ನ ಅಧೀನದಲ್ಲಿರುವ 21 ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿತ್ತು. ಈ ಪೈಕಿ ಇಬ್ಬರು ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ. ಚಿಕ್ಕಮಗಳೂರಿನ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ನರೇಂದ್ರ ರೈ ದೇರ್ಲ (Narendra Rai Derla), ‘ವೈಯಕ್ತಿಕ ಕಾರಣಗಳಿಂದಾಗಿ ಸಂಬಂಧಿಸಿದ ಜವಾಬ್ದಾರಿಯನ್ನು ನಾನು ಸ್ವೀಕರಿಸುವುದಿಲ್ಲ’ ಎಂದು ಹೇಳಿದ್ದಾರೆ. ಹಾವೇರಿಯ ಗಳಗನಾಥ ಮತ್ತು ನಾ.ಶ್ರೀ. ರಾಜಪುರೋಹಿತ ಪ್ರತಿಷ್ಠಾನದ ಅಧ್ಯಕ್ಷರಾಗಿ ಚಕ್ರವರ್ತಿ ಸೂಲಿಬೆಲೆ (Chakravarthi Sulibele) ಅವರನ್ನು ನೇಮಕ ಮಾಡಲಾಗಿತ್ತು. ಅವರೂ ಸಹ, ‘ಸದ್ಯದ ಪರಿಸ್ಥಿತಿಯಲ್ಲಿ ಇದಕ್ಕೆ ಸಮಯ ಕೊಡುವಷ್ಟು ಪುರಸೊತ್ತಿಲ್ಲದಿರುವುದರಿಂದ ಅತ್ಯಂತ ವಿನೀತನಾಗಿಯೇ ಈ ಗೌರವವನ್ನು ಮರಳಿಸಬೇಕಾಗಿ ಬಂದಿದೆ’ ಎಂದು ರಾಜ್ಯ ಸರ್ಕಾರ ನೀಡಿದ್ದ ಹುದ್ದೆಯನ್ನು ನಿರಾಕರಿಸಿದ್ದರು.

ತಾವು ಹುದ್ದೆ ಒಪ್ಪಿಕೊಳ್ಳದಿರುವ ಕುರಿತು ನರೇಂದ್ರ ರೈ ದೇರ್ಲ ಅವರು ಫೇಸ್​ಬುಕ್​ನಲ್ಲಿ ಪೋಸ್ಟ್ ಬರೆದಿದ್ದಾರೆ. ಈ ಪೋಸ್ಟ್​ನಲ್ಲಿ ಅವರು, ‘ಈ ಕುರಿತು ಸಂಬಂಧಿಸಿದ ಯಾವುದೇ ಇಲಾಖೆಯ ವ್ಯಕ್ತಿಗಳು, ಅಧಿಕಾರಿಗಳು ನನ್ನನ್ನು ಈವರೆಗೆ ಸಂಪರ್ಕಿಸಿಯೂ ಇಲ್ಲ. ‘ಇಂಥ ಪ್ರತಿಷ್ಠಾನ ಪ್ರಾಧಿಕಾರ ಅಕಾಡೆಮಿಗಳಿಗೆ ನೇಮಕ ಮಾಡುವಾಗ ಸೌಜನ್ಯಕ್ಕಾದರೂ ಅವರನ್ನು ಸಂಪರ್ಕಿಸಿ ಪೂರ್ವಾನುಮತಿಯನ್ನು ಪಡೆಯುವುದು ಹೆಚ್ಚು ಸೂಕ್ತ. ಆಗ ಇಂತಹ ಅನಪೇಕ್ಷಿತ ಮುಜುಗರವೂ ತಪ್ಪುತ್ತದೆ’ ಎಂದು ಸಲಹೆ ಮಾಡಿದ್ದಾರೆ.

ಒಂದು ವೇಳೆ ಸಂಸ್ಕೃತಿ ಇಲಾಖೆ ಸಂಪರ್ಕಿಸಿದರೂ ನನ್ನ ನಿರ್ಧಾರ ಬದಲಾಗುವುದಿಲ್ಲ ಎಂದೂ ಅವರು ತಮ್ಮ ಪೋಸ್ಟ್​ನಲ್ಲಿ ಹೇಳಿದ್ದಾರೆ. ‘ಅಂತಹ ಪತ್ರ- ಆದೇಶ ನನಗೆ ಬಂದಿಲ್ಲ. ಒಂದು ವೇಳೆ ಅದು ಬಂದಾಗಲೂ ನನ್ನ ಈ ಅಭಿಪ್ರಾಯ ಬದಲಾಗುವುದಿಲ್ಲ. ದಯವಿಟ್ಟ ಯಾರೂ ಕೂಡಾ ಇದನ್ನು ನನ್ನ ಅಹಂ, ಉದ್ದಟತನವೆಂದು ಭಾವಿಸಬಾರದು .ಇಂಥ ಸರಳ ಸೌಜನ್ಯ- ನಿರಾಕರಣೆಗೆ ನನಗೆ ತೇಜಸ್ವಿ ಅವರೇ ಸ್ಪೂರ್ತಿ. ಸರಕಾರ ಮುಂದೆ ಯಾರನ್ನೇ ಬೇಕಾದರೂ ಆಯ್ಕೆ ಮಾಡಲಿ, ತೇಜಸ್ವಿಯ ವಿಚಾರದಲ್ಲಿ ಅವರಿಗೆ ನನ್ನ ಸಹಾಯ ಇದ್ದೇ ಇದೆ’ ಎಂದು ದೇರ್ಲ ಸ್ಪಷ್ಟಪಡಿಸಿದ್ದಾರೆ.

ಅವರ ಪೋಸ್ಟ್​ನ ಪೂರ್ಣ ಒಕ್ಕಣೆಯನ್ನು ಕೆಳಗೆ ನೀಡಲಾಗಿದೆ.

ಸೌಜನ್ಯವಿಲ್ಲದ ನೇಮಕಾತಿಗೆ ಆಕ್ಷೇಪ

ನರೇಂದ್ರ ರೈ ದೇರ್ಲ ಅವರ ನಿರ್ಧಾರವನ್ನು ಹಲವು ಸಾಹಿತಿಗಳು, ಹಿರಿಯ ಪತ್ರಕರ್ತರು ಮತ್ತು ಚಿಂತಕರು ಸ್ವಾಗತಿಸಿದ್ದಾರೆ. ಸೌಜನ್ಯವಿಲ್ಲದ ನೇಮಕಾತಿ ಪ್ರಕ್ರಿಯೆಯನ್ನು ಕಟುವಾಗಿ ಖಂಡಿಸಿದ್ದಾರೆ. ದೇರ್ಲ ಅವರ ಪೋಸ್ಟ್​ಗೆ ಕಾಮೆಂಟ್ ಬರೆದಿರುವ ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ, ‘ನೂರಕ್ಕೆ ನೂರು ಸರಿ. ಅನುಮತಿ ಪಡೆಯದೆ ನೇಮಕ ದಾರ್ಷ್ಟ್ಯವೇ’ ಎಂದು ಹೇಳಿದ್ದಾರೆ. ‘ಆತ್ಮಗೌರವವನ್ನು ಉಳಿಸಿಕೊಂಡು ಬಂದ ವ್ಯಕ್ತಿ ನೀವು. ಅದನ್ನು ಕಾಪಾಡುವ ದೃಷ್ಟಿಯಿಂದ ನಿಮ್ಮ ನಿರ್ಧಾರ ಶ್ಲಾಘನೀಯ’ ಎಂದು ರಾಧಾಕೃಷ್ಣ ರಾವ್ ಹೇಳಿದ್ದಾರೆ. ‘ನಿಮ್ಮ ನಿಲುವು ಸರಿಯಾದುದು. ಯಾವುದೇ ಸರ್ಕಾರವಾಗಲಿ ನೇಮಕಾತಿ ಪೂರ್ವದಲ್ಲಿ ಸಂಬಂಧಿಸಿದವರ ಮೌಖಿಕ ಒಪ್ಪಿಗೆ ಪಡೆಯುವುದು ಸರಿಯಾದ ಕ್ರಮ’ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿಯ ಮಾಜಿ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ ಹೇಳಿದ್ದಾರೆ.

ಸದಸ್ಯತ್ವ ಪಟ್ಟಿಯಲ್ಲಿ ಮೃತರ ಹೆಸರು, ಜಾತಿ

ಸರ್ಕಾರವು ತನ್ನ ಆದೇಶದಲ್ಲಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರ ಹೆಸರು ಮತ್ತು ಜಾತಿಯನ್ನು ನಮೂದಿಸಿರುವುದು ಸಹ ವ್ಯಾಪಕ ಟೀಕೆಗೆ ಗುರಿಯಾಗಿದೆ. ಡಿಸೆಂಬರ್ 2021ರಲ್ಲಿಯೇ ರಾಜೇಶ್ವರಿ ಅವರು ನಿಧನರಾಗಿದ್ದರು. ‘ಆ ಪಟ್ಟಿ ನೋಡಿ ನಮಗೂ ಆಶ್ಚರ್ಯ… ರಾಜೇಶ್ವರಿ ಮೇಡಂ ಹೆಸರು ಬೇರೆ ಸೇರ್ಪಡೆಯಾಗಿದೆ. ಸದಸ್ಯರ ಆಯ್ಕೆ ಪಕ್ಕ ಜಾತಿ ಸೂಚನೆ ಬೇರೆ ಹಾಕಿದ್ದಾರೆ’ ಎಂದು ರವಿರಾಜ್ ಸಾಗರ್​ ಎನ್ನುವವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Published On - 8:55 am, Thu, 25 August 22

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ