AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ-ಮೈಸೂರು ದುರ್ಘಟನೆ: ಪರಿಹಾರ ತಾರತಮ್ಯದ ಬಗ್ಗೆ ಸಿಎಂ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ

ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ತಾರತಮ್ಯ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್​​ ಪತ್ರ ಬರೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದ ಜನರ ಬಗ್ಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದಿರುವ ಶಾಸಕ, ತಕ್ಷಣ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಯಾದಗಿರಿ-ಮೈಸೂರು ದುರ್ಘಟನೆ: ಪರಿಹಾರ ತಾರತಮ್ಯದ ಬಗ್ಗೆ ಸಿಎಂ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ
ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್​​, ಸಿಎಂ ಸಿದ್ದರಾಮಯ್ಯImage Credit source: google
Sunil MH
| Edited By: |

Updated on: Apr 20, 2026 | 7:13 PM

Share

ಬೆಂಗಳೂರು, ಏಪ್ರಿಲ್​ 20: ರಾಜ್ಯದಲ್ಲಿ ಸಂಭವಿಸಿದ ದುರಂತಗಳ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್​ (Sharanagouda Kandakur) ಇಂತಹದೊಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯಗೆ (Siddaramaiah) ನೇರವಾಗಿ ಪತ್ರ ಬರೆದಿರುವ ಶಾಸಕ, ಮೈಸೂರಿನಲ್ಲಿ ಸಂಭವಿಸಿದ ದುರಂತಕ್ಕೆ ತಕ್ಷಣ ಸ್ಪಂದಿಸುವ ಸರ್ಕಾರ, ಕಲ್ಯಾಣ ಕರ್ನಾಟಕದ ಜನರ ಸಾವಿಗೆ ಕನಿಷ್ಠ ಸಂತಾಪವನ್ನೂ ಸೂಚಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಿಎಂಗೆ ಬರೆದ ಪತ್ರದಲ್ಲೇನಿದೆ? 

ಮಾರ್ಚ್​ 29ರಂದು ಯಾದಗಿರಿ ಜಿಲ್ಲೆಯ ಸುರಪೂರ ತಾಲೂಕಿನ ನಗನೂರು ಗ್ರಾಮದ ರೈತನ ಕೃಷಿ ಹೊಂಡದಲ್ಲಿ ಈಜಾಡಲು ಹೋಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿದ್ದರು. ಏಪ್ರಿಲ್​ 17ರಂದು ಅದೇ ಸುರಪೂರ ತಾಲೂಕಿನ ಗೋಪಾಲಸ್ವಾಮಿ ದೇವಸ್ಥಾನದ ದರ್ಶನಕ್ಕೆ ಸಿರವಾರ ಗ್ರಾಮದ ಒಂದೇ ಕುಟುಂಬದ 9 ಜನರು ರಸ್ತೆ ಅಪಘಾತದಲ್ಲಿ ಸಜೀವ ದಹನಗೊಂಡಿದ್ದರು.

ಇದನ್ನೂ ಓದಿ: ಮೈಸೂರು: ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ; ದರ್ಗಾಕ್ಕೆ ಬಂದವರು ದುರಂತ ಅಂತ್ಯ

ಈ ದುರಂತಗಳು ಸಂಭವಿಸಿ ಸುಮಾರು ದಿನಗಳು ಕಳೆದರು ಸಹ ಮೃತಕುಟುಂಬಗಳಿಗೆ ಪರಿಹಾರಧನ ಘೋಷಣೆ ಮಾಡುವುದಾಗಲಿ ಅಥವಾ ಕನಿಷ್ಠ ಸಾಂತ್ವಾನ ತಿಳಿಸುವುದಾಗಲಿ ಇಲ್ಲಿಯವರೆಗೆ ಮಾಡಿಲ್ಲ. ಆದರೆ ಏಪ್ರಿಲ್​ 19ರಂದು ನಿಮ್ಮ ಸ್ವಂತ ಮೈಸೂರು ಜಿಲ್ಲೆಯಲ್ಲಿ ಬಿಸಿಲಿನ ತಾಪದಿಂದ ಕೆರೆಯಲ್ಲಿ ಈಜಾಡಲು ಹೋಗಿ 6 ಜನ ಮೃತಪಟ್ಟ ಕುಟುಂಬಗಳಿಗೆ ತಕ್ಷಣವೇ ಸಾಮಾಜಿಕ ಜಾಲತಾಣದ ಮುಖಾಂತರ ಸಾಂತ್ವಾನ ತಿಳಿಸಿರುತ್ತೀರಿ, ಅಲ್ಲದೇ ಸದರಿ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಧನ ಘೋಷಣೆ ಮಾಡಿರುತ್ತೀರಿ.

ಇದನ್ನೂ ಓದಿ: ಕಾಲು ಜಾರಿ ಕೆರೆಗೆ ಬಿದ್ದ ಅಳಿಯನ ರಕ್ಷಣೆಗೆ ಹೋದ ಮಾವನೂ ಸಾವು: ಅತ್ತ ಪಿರಿಯಾಪಟ್ಟಣದಲ್ಲಿ ಇಬ್ಬರು ಯುವಕರು ನೀರು ಪಾಲು

ತಾವು ಈ ಮಲತಾಯಿ ದೊರಣೆಯನ್ನು ಅನುಸರಿಸುತ್ತಿರುವುದರಿಂದ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರ ಮುಖ್ಯಮಂತ್ರಿಗಳೋ ಎಂಬ ಸಂಶಯ ವ್ಯಕ್ತವಾಗಿದ್ದು, ಕಲ್ಯಾಣ ಕರ್ನಾಟಕದ ಭಾಗದ ಜನರು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಈ ಕೂಡಲೇ ಯಾದಗಿರಿ ಜಿಲ್ಲೆಯ ಸುರಪೂರ ತಾಲೂಕಿನ ನಗನೂರು ಗ್ರಾಮದ ಸಂತ್ರಸ್ಥ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಧನ ಘೋಷಣೆ ಮಾಡಿ ಸಾಂತ್ವಾನ ವ್ಯಕ್ತಪಡಿಸುವಂತೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಪತ್ರದಲ್ಲಿ ಸಿಎಂಗೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು