AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತೀಂದ್ರ ಸಿದ್ದರಾಮಯ್ಯಗೆ ಮತ್ತೊಂದು ಮಹತ್ವದ ಸ್ಥಾನ?: ಸಿಗಲಿದ್ಯಾ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ?

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಯತ್ತು ಸಚಿವ ಯತೀಂದ್ರ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ಸಿಗುವುದು ಬಹುತೇಕ ಕನ್ಫರ್ನ್​​ ಆಗಿದೆ. ಖಾಲಿ ಇರುವ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ ಅವರ ಹೆಗಲಿಗೆ ಬೀಳುವ ಸಾಧ್ಯತೆ ಇದ್ದು, ಪರಿಷತ್​​ನಿಂದ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಸಚಿವರಾಗಿರೋದೆ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಆಗಸ್ಟ್ 13 ರಿಂದ ಆಗಸ್ಟ್ 27ರವರೆಗೆ ವಿಧಾನಮಂಡಲದ ಮುಂಗಾರು ಅಧಿವೇಶನ ನಿಗದಿಯಾಗಿದೆ.

ಯತೀಂದ್ರ ಸಿದ್ದರಾಮಯ್ಯಗೆ ಮತ್ತೊಂದು ಮಹತ್ವದ ಸ್ಥಾನ?: ಸಿಗಲಿದ್ಯಾ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ?
ಯತೀಂದ್ರ ಸಿದ್ದರಾಮಯ್ಯImage Credit source: Dr Yathindra Siddaramaiah Facebook Page
ಪ್ರಸನ್ನ ಗಾಂವ್ಕರ್​
| Edited By: |

Updated on:Aug 09, 2026 | 12:59 PM

Share

ಮುಖ್ಯಾಂಶಗಳು

  • ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರಗೆ ಹೊಸ ಜವಾಬ್ದಾರಿ?
  • ಯತೀಂದ್ರಗೆ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ?
  • ಆ. 13 ರಿಂದ 27ರವರೆಗೆ ನಡೆಯಲಿರುವ ಅಧಿವೇಶನ

ಬೆಂಗಳೂರು, ಆಗಸ್ಟ್​​ 09: ವಿಧಾನ ಪರಿಷತ್​​ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಬೆನ್ನಲ್ಲೇ ಮೇಲ್ಮನೆಯ ಪ್ರಮುಖ ಸ್ಥಾನಗಳೆಲ್ಲವೂ ಖಾಲಿಯಾಗಿವೆ. ಸಭಾಪತಿ, ಉಪಸಭಾಪತಿಯಿಂದ ಹಿಡಿದು ಸಭಾ ನಾಯಕರವರೆಗೂ ಯಾರೂ ಸದ್ಯಕ್ಕಿಲ್ಲ. ನೂತನ ಸಭಾಪತಿಯಾಗಿ ಸಲೀಂ ಅಹ್ಮದ್​​ ಮತ್ತು ಉಪ ಸಭಾಪತಿಯಾಗಿ ಉಮಾಶ್ರೀ ಅವರ ಹೆಸರನ್ನು ಅದಾಗಲೇ ಎಐಸಿಸಿ ಶಿಫಾರಸ್ಸು ಮಾಡಿದ್ದರೂ ಸಭಾ ನಾಯಕ ಯಾರಾಗಾಲಿದ್ದಾರೆ ಎಂಬ ಕುತೂಹಲ ಮಾತ್ರ ಹಾಗೆಯೇ ಉಳಿದಿತ್ತು. ಆದ್ರೀಗ ಆ ಪ್ರಶ್ನೆಗೂ ಉತ್ತರ ಸಿಕ್ಕಿದೆ. ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಬಹುತೇಕ ಈ ಜವಾಬ್ದಾರಿ ಕನ್ಫರ್ಮ್​​ ಎನ್ನಲಾಗಿದೆ.

ಯತೀಂದ್ರಗೆ ಯಾಕೆ ಪರಿಷತ್​​ ಸಭಾ ನಾಯಕನ ಜವಾಬ್ದಾರಿ?

ಎಂಎಲ್ಸಿ ಗಾಯತ್ರಿ ಶಾಂತೇಗೌಡ ಸಚಿವ ಸ್ಥಾನವನ್ನು ಹೈಕಮಾಂಡ್ ತಡೆಹಿಡಿದಿರುವ ಕಾರಣ ವಿಧಾನ ಪರಿಷತ್​​ನಿಂದ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಸಚಿವರಾಗಿದ್ದಾರೆ. ಹೀಗಾಗಿ ಯತೀಂದ್ರಗೆ ಸಭಾ ನಾಯಕ ಸ್ಥಾನ ಸಿಗಬಹುದೆಂಬ ಲೆಕ್ಕಾಚಾರ ಶುರುವಾಗಿದೆ. ಜೊತೆಗೆ ಈಗಾಗಲೇ ಮೌನಕ್ಕೆ ಶರಣಾಗಿರುವ ಸಿದ್ದರಾಮಯ್ಯ ಅವರ ಮುನಿಸನ್ನು ಕೂಡ ಕಡಿಮೆಮಾಡುವ ಪ್ರಯತ್ನವನ್ನು ಹೈಕಮಾಂಡ್​​ ಮಾಡಬಹುದು ಎಂಬ ಮಾತುಗಳೂ ಕೇಳಿಬಂದಿವೆ. ಪರಿಷತ್​​ ಪ್ರತಿನಿಧಿಸುವ ಕಾಂಗ್ರೆಸ್​​ ಸದಸ್ಯರು ಮುಂದೆ ಸಚಿವರಾಗಲಿದ್ದಾರಾ ಎಂಬ ಪ್ರಶ್ನೆಗೂ ಸ್ಪಷ್ಟ ಉತ್ತರ ಇಲ್ಲ. ಈ ನಡುವೆ ಆಗಸ್ಟ್​​ 13ರಿಂದ ಮಳೆಗಾಲದ ಅಧಿವೇಶನ ಆರಂಭವಾಗಲಿರುವ ಕಾರಣ ಪರಿಷತ್​​ನಲ್ಲಿ ಯತೀಂದ್ರ ಅವರೇವ ಆಡಳಿತ ಪಕ್ಷವನ್ನು ಮುನ್ನಡೆಸುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನ ಸಭೆಯ ನೂತನ ಸ್ಪೀಕರ್​​, ಪರಿಷತ್​​ ಸಭಾಪತಿ ಹೆಸರನ್ನು ಪ್ರಕಟಿಸಿದ ಎಐಸಿಸಿ

ಸ್ಪೀಕರ್​​ ಕಚೇರಿಗೆ ನಾಳೆ ಟಿ.ಬಿ.ಜಯಚಂದ್ರ ಭೇಟಿ

ಆಗಸ್ಟ್ 13 ರಿಂದ ಆಗಸ್ಟ್ 27ರವರೆಗೆ ನಡೆಯುವ ವಿಧಾನಮಂಡಲದ ಮುಂಗಾರು ಅಧಿವೇಶನ ಹಿನ್ನೆಲೆ ಹಂಗಾಮಿ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸುವ ಟಿ.ಬಿ.ಜಯಚಂದ್ರ ಸ್ಪೀಕರ್​​ ಕಚೇರಿಗೆ ನಾಳೆ ಭೇಟಿ ನೀಡಲಿದ್ದಾರೆ. 10 ದಿನಗಳ ಕಾಲ ನಡೆಯಲಿರುವ ಅಧಿವೇಶನದ ಮೊದಲ ದಿನ ಮಾಜಿ ಸಚಿವ ಡಿ.ಸುಧಾಕರ್, ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಸೇರಿ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನಡೆಯಲಿದೆ. ಶುಕ್ರವಾರದಿಂದ ನಿಗದಿತ ವೇಳಾಪಟ್ಟಿಯಂತೆ ಕಲಾಪಗಳು ಪ್ರಾರಂಭವಾಗಲಿದ್ದು, ಹಂಗಾಮಿ ಸ್ಪೀಕರ್​​ ಸಿದ್ಧತೆ ಪರಿಶೀಲಿಸಲಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:56 pm, Sun, 9 August 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್