AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಗಿಲು ಭೂ ಕಬಳಿಕೆ ಕೇಸ್​​: ಎಲ್ಲ ದಾಖಲೆ ಫೇಕ್​​, ಆರೋಪಿಗಳ ಕಳ್ಳಾಟ ಬಯಲು

ಯಲಹಂಕದ ಕೋಗಿಲು ಭೂ ಕಬಳಿಕೆ ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಬಂಧಿತ ಆರೋಪಿಗಳು ನಕಲಿ ದಾಖಲೆ ಸೃಷ್ಟಿಸಿ, ಅಕ್ರಮ ಹಕ್ಕುಪತ್ರಗಳನ್ನು ನೀಡಿರೋದು ಗೊತ್ತಾಗಿದೆ. ಈ ಬಗ್ಗೆ ಮಾಹಿತಿ ಇದ್ದರೂ ಕ್ರಮ ಕೈಗೊಳ್ಳದ ಯಲಹಂಕ ತಹಶೀಲ್ದಾರ್ ವಿಚಾರಣೆ ನಡೆಯುವ ಸಾಧ್ಯತೆಯೂ ಇದೆ ಎನ್ನಲಾಗಿದ್ದು, ದೂರು ನೀಡುವಂತೆ ವಂಚನೆಗೊಳಗಾದವರಿಗೆ ಪೊಲೀಸರು ಸೂಚಿಸಿದ್ದಾರೆ.

ಕೋಗಿಲು ಭೂ ಕಬಳಿಕೆ ಕೇಸ್​​: ಎಲ್ಲ ದಾಖಲೆ ಫೇಕ್​​, ಆರೋಪಿಗಳ ಕಳ್ಳಾಟ ಬಯಲು
ತಾತ್ಕಾಲಿಕ ಟೆಂಟ್​​ನಲ್ಲಿ ವಾಸ.
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jan 08, 2026 | 5:22 PM

Share

ಬೆಂಗಳೂರು, ಜನವರಿ 08: ಯಲಹಂಕ ಕೋಗಿಲು ಬಳಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಸಂಬಂಧ ತನಿಖೆ ವೇಳೆ ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ಬಂಧಿತ ಆರೋಪಿಗಳಾದ ವಿಜಯ್ ಮತ್ತು ವಸೀಮ್ ಉಲ್ಲಾ ಅಲ್ಲಿಯ ಅಕ್ರಮ ನಿವಾಸಿಗಳಿಂದ ಹಣ ಪಡೆದು ನಕಲಿ ದಾಖಲೆ ಸೃಷ್ಟಿಮಾಡಿದ್ದಾರೆ. ಅಲ್ಲದೆ ಹಕ್ಕುಪತ್ರಗಳನ್ನು ಕೂಡ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಈ ಬಗ್ಗೆಯೂ ಯಲಹಂಕ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಇನ್ನು ಈ ಬಗ್ಗೆ ಮಾಹಿತಿ ಇದ್ದರೂ ಸಹ ಯಲಹಂಕ ತಹಶಿಲ್ದಾರ್ ಕ್ರಮ ಕೈಗೊಂಡಿಲ್ಲ. ನಕಲಿ ದಾಖಲೆ ಸೃಷ್ಟಿಸಿ ಒತ್ತುವರಿ ಮಾಡಿಕೊಂಡಿರೋ ಜಮೀನು ವಶಕ್ಕೆ ಪಡೆದಿಲ್ಲ. ನಕಲಿ‌ ದಾಖಲೆಗಳ ಬಗ್ಗೆ ಕ್ರಮ‌ ತೆಗದುಕೊಳ್ಳುವಂತೆ ಸ್ಥಳೀಯ ಯಲಹಂಕ ಪೊಲೀಸ್ ಠಾಣೆ ಗೆ ದೂರನ್ನು ನೀಡಿಲ್ಲ. ಹೀಗಾಗಿ 2022ರಿಂದ 2025ರ ಅವಧಿಯಲ್ಲಿ ಕೆಲಸ ಮಾಡಿರುವ ತಹಶಿಲ್ದಾರರ ವಿಚಾರಣೆ ನಡೆಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಕೋಗಿಲು ಬಡಾವಣೆಯಲ್ಲಿ ಡೆಮಾಲಿಷ್ ಆಗಿದ್ದು 167 ಮನೆ, ಫ್ಲಾಟ್​ಗಾಗಿ ಸಲ್ಲಿಕೆಯಾದ ಅರ್ಜಿ 250ಕ್ಕೂ ಹೆಚ್ಚು!

‘ದೂರಿನ ಆಧಾರದಲ್ಲಿ ತನಿಖೆ’

ಕೋಗಿಲು ಲೇಔಟ್​ನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ. ಪರಿಶೀಲನೆ ವೇಳೆ ಜಾಗ ಕೊಡಿಸುತ್ತೇವೆಂದು ಆರೋಪಿಗಳು ಮೋಸ ಮಾಡಿದ್ದು ಬೆಳಕಿಗೆ ಬಂದಿದೆ. ಹೀಗಾಗಿ ಸರ್ಕಾರಿ ಭೂಮಿ ಒತ್ತುವರಿ, ವಂಚನೆ ಆರೋಪದಡಿ ಇಬ್ಬರನ್ನು ಬಂಧಿಸಲಾಗಿದೆ. ದಾಖಲೆ ನೀಡಿರುವುದರ ಬಗ್ಗೆಯೂ ಪರಿಶೀಲನೆ ಮಾಡಲಾಗುತ್ತಿದೆ. ಎಷ್ಟು ಜನರಿಂದ ಹಣ ಪಡೆದಿದ್ದಾರೆ? ಯಾವ ದಾಖಲೆಗಳನ್ನು ನಕಲಿ ಮಾಡಲಾಗಿದೆ ಎಂದು ತನಿಖೆ ಮಾಡ್ತೇವೆ. ಯಾರೆಲ್ಲ ವಂಚನೆಗೊಳಗಾಗಿದ್ದಾರೆ ಅವರಿಗೆ ದೂರು ನೀಡಲು ಹೇಳಿದ್ದೇವೆ. ಅವರು ದೂರಿನ ಆಧಾರದಲ್ಲಿ ತನಿಖೆ ಮಾಡುತ್ತೇವೆ ಎಂದಿದ್ದಾರೆ.

’26 ಕುಟುಂಬಗಳ ದಾಖಲೆಯಷ್ಟೇ ಸರಿ ಇದೆ’

ಕೋಗಿಲು ಲೇಔಟ್​ನಲ್ಲಿ ಮನೆ ತೆರವಾಗಿರುವವರ ಪೈಕಿ 26 ಜನರಿಗೆ ಮನೆ ಕೊಡಲು ಅವಕಾಶವಿದೆ. ಇಷ್ಟು ಕುಟುಂಬಗಳ ದಾಖಲೆಗಳು ಮಾತ್ರ ಸರಿಯಾಗಿವೆ. ಇನ್ನೂ ಹಲವರ ದಾಖಲೆಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಷರತ್ತು ವಿಧಿಸಿ ಮನೆಗಳನ್ನು ಹಂಚಿಕೆ ಮಾಡಲಾಗುವುದು. ಯಾವುದೇ ಕಾರಣಕ್ಕೂ ಹೊರಗಿನವರಿಗೆ ಮನೆ ನೀಡುವುದಿಲ್ಲ. ಈಗಾಗಲೇ ಸಿಎಂ ಸಭೆ ನಡೆಸಿದ್ದು ಮನೆ ಹಂಚಿಕೆಗೆ ಸೂಚಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ