AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಮಹಿಳೆ ಕಂಬಿ ಹಿಂದೆ

ಯಲಹಂಕದಲ್ಲಿ ನೋ-ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ್ದಕ್ಕೆ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರನ್ನು ಮಹಿಳೆ ಹಿರಲ್ ವ್ಯಾಸ್ ಮತ್ತು ಮೊಹಮ್ಮದ್ ಸರ್ಬಾನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಇಬ್ಬರನ್ನೂ ಬಂಧಿಸಲಾಗಿದೆ.ಈ ಘಟನೆಗೆ ಸಂಬಂಧಿಸಿದಂತೆ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವೇಕ ಬಿರಾದಾರ
|

Updated on:Aug 15, 2025 | 8:03 PM

Share

ಬೆಂಗಳೂರು, ಆಗಸ್ಟ್​ 15: ನೋ‌ ಪಾರ್ಕಿಂಗ್​ನಲ್ಲಿ ವಾಹನ ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದ ಬೆಂಗಳೂರು ಟ್ರಾಫಿಕ್​ ಪೊಲೀಸರಿಗೆ (Bengaluru Traffic Police) ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಮಹಿಳೆಯನ್ನು ಯಲಹಂಕ ನ್ಯೂಟೌನ್ ಪೊಲೀಸರು (Police) ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮಹಿಳೆ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಹಿರಲ್ ವ್ಯಾಸ್, ಮೊಹಮ್ಮದ್ ಸರ್ಬಸ್‌ ಬಂಧಿತ ಆರೋಪಿಗಳು. ಆರೋಪಿಗಳ ವಿರುದ್ಧ ನ್ಯೂಟೌನ್ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

“ಯಲಹಂಕ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ನಿರ್ಮಲಾ ಅವರು ಗುರುವಾರ (ಆ.14) ಯಲಹಂಕ ಉಪ ನಗರದ ಶೇಷಾದ್ರಿಪುರ ಕಾಲೇಜಿಂದ ಚಿಕ್ಕಬೊಮ್ಮಸಂದ್ರ ಅರ್ಚ್​ವರೆಗೆ ನೋಪಾರ್ಕಿಂಗ್ ಕಾರ್ಯಾಚರಣೆಯ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು. ಮಧ್ಯಾಹ್ನ 12.30 ಸುಮಾರಿಗೆ ಶೇಹಾದ್ರಿಪುರಂ ಕಾಲೇಜ್ ಮುಂಭಾಗ ಕೆಎ 50 ಇಆರ್-5812 ಬುಲೆಟ್ ವಾಹನವು ನೋ ಪಾರ್ಕಿಂಗ್ ಸ್ಥಳದಲ್ಲಿ ನಿಂತಿತ್ತು.”

“ವಾಹನದ ಬಳಿ ಯಾರು ಇಲ್ಲದಿದ್ದಾಗ ವೀಲ್​ಗೆ ಕ್ಯಾಂಪ್ ಹಾಕಿದ್ದಾರೆ. ಸ್ವಲ್ಪ ಹೊತ್ತಿನ ಬಳಿಕ ವಾಹನ ಸವಾರ ಮೊಹಮ್ಮದ್ ಸರ್ಬಾನ್ ಸ್ಥಳಕ್ಕೆ ಬಂದಿದ್ದಾನೆ. ಆಗ ಪೊಲೀಸರು ನೋ ಪಾರ್ಕಿಂಗ್ ದಂಡವನ್ನು ಕಟ್ಟುವಂತೆ ಹೇಳಿದ್ದಾರೆ. ಅದಕ್ಕೆ, ಮೊಹಮ್ಮದ್ ಸರ್ಬಾನ್ ಕರ್ತವ್ಯದಲ್ಲಿದ್ದ ನಿರ್ಮಾಲ ಅವರಿಗೆ ಏರು ಧ್ವನಿಯಲ್ಲಿ “ನೋ ಪಾರ್ಕಿಂಗ್ ಬೋರ್ಡು ಹಾಕಿದ್ದೀರಾ ? ಮತ್ತು ನಾನು ಗಾಡಿಯನ್ನು ನಿಲಿಸುವಾಗ ನೀವು ವಿಶಲ್ ಹಾಕಿ ಓಡಿಸಬೇಕಿತ್ತು” ಎಂದು ಕೂಗಾಡಿ ದಂಡವನ್ನು ಕಟ್ಟುವುದಿಲ್ಲವೆಂದು ವಾಗ್ವಾದ ಮಾಡಿದ್ದಲ್ಲದೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ.”

“ಸ್ವಲ್ಪ ಹೊತ್ತಿನ ಬಳಿಕ ಮಧ್ಯಾಹ್ನ 1:10 ರ ಸುಮಾರಿಗೆ ಸ್ಥಳಕ್ಕೆ ಬಂದ ಮಹಿಳೆ ಹಿರಲ್ ವ್ಯಾಸ್ ಆಕೆ ತಂದಿದ್ದ ದ್ವಿಚಕ್ರ ವಾಹನವನ್ನು ಮೊಹಮ್ಮದ್ ಸರ್ಬಾನ್​ಗೆ ಕೊಟ್ಟು ಇಲ್ಲಿಂದ ಓಡಿ ಹೋಗುವಂತೆ ಹೇಳಿದ್ದಾಳೆ. ಆಗ, ಟ್ರಾಫಿಕ್​ ಪೊಲೀಸರು ದಂಡವನ್ನು ಪಾವತಿಸಿ ಹೋಗುವಂತೆ ಹೇಳಿದ್ದಾರೆ.”

ಇದನ್ನೂ ಓದಿ: ಬೆಂಗಳೂರು ಇಸ್ಕಾನ್ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು

ಆದರೆ, ಹಿರಲ್ ವ್ಯಾಸ್ ಕರ್ತವ್ಯದಲ್ಲಿದ್ದ ಮಹಿಳಾಧಿಕಾರಿ ನಿರ್ಮಲಾ ಅವರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ, ಆಸಭ್ಯವಾಗಿ ಕೈ ಸನ್ನೆ ಮಾಡಿ ಅವಮಾನ ಮಾಡಿದ್ದಾಳೆ. ಹಾಗೂ ಪಿಎಸ್​ಐ ನಿರ್ಮಲಾ ಅವರೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಎಸ್.ಬಿ ಕಾಂತರಾಜು, ಎ.ಎಸ್.ಐ ಮಂಜುಳಾ ಹಾಗೂ ಎ.ಎಸ್,ಐ ಪಂಚಾಕ್ಷರಯ್ಯ ಅವರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ” ಎಂದು ಎಫ್​ಐಆರ್​ನಲ್ಲಿ ದಾಖಲಾಗಿದೆ. ಪೊಲೀಸರ ಜೊತೆ ಕಿರಿಕ್ ತೆಗೆದು, ಅವಾಚ್ಯವಾಗಿ ನಿಂದಿಸಿದ್ದ ಮಹಿಳೆಯನ್ನು ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:59 pm, Fri, 15 August 25

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ