Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಲಕ್ಕಿಡಿಪ್‌ ಸಿಎಂ ಏನೀಗ; ಬಿಜೆಪಿ ವಿರುದ್ಧ ಹರಿಹಾಯ್ದ ಎಚ್​ಡಿ ಕುಮಾರಸ್ವಾಮಿ

ಬಿಜೆಪಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಪರೇಷನ್​ ಕಮಲ ಸಿಎಂ ಮತ್ತು ಲಕ್ಕಿಡಿಪ್​ ಸಿಎಂ ಹ್ಯಾಷ್​ಟ್ಯಾಗ್ ಅಡಿಯಲ್ಲಿ​ ಸರಣಿ ಟ್ವಿಟ್ ಮೂಲಕ ವಾಗ್ದಾಳಿ ಮಾಡಿದ್ದಾರೆ.

ನಾನು ಲಕ್ಕಿಡಿಪ್‌ ಸಿಎಂ ಏನೀಗ; ಬಿಜೆಪಿ ವಿರುದ್ಧ ಹರಿಹಾಯ್ದ ಎಚ್​ಡಿ ಕುಮಾರಸ್ವಾಮಿ
ಮಾಜಿ ಸಿಎಂ ಕುಮಾರಸ್ವಾಮಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 06, 2022 | 11:45 AM

ಬೆಂಗಳೂರು: ಹೌದು ನಾನು ಲಕ್ಕಿಡಿಪ್‌ ಸಿಎಂ (Luckydeep CM) ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ (HD Kumaraswamy) ಆಪರೇಷನ್​ ಕಮಲ ಸಿಎಂ ಮತ್ತು ಲಕ್ಕಿಡಿಪ್​ ಸಿಎಂ ಹ್ಯಾಷ್​ಟ್ಯಾಗ್ ಅಡಿಯಲ್ಲಿ​ ಸರಣಿ ಟ್ವಿಟ್  (Tweet) ಮೂಲಕ ವಾಗ್ದಾಳಿ ಮಾಡಿದ್ದಾರೆ.

ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿ ರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್​ಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ. ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ. ಲಕ್ಕಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ ಆಪರೇಷನ್‌ ಕಮಲದ ಸಿಎಂ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ ಎಂದು ಪ್ರಶ್ನಿಸಿದ್ದಾರೆ. ಇನ್ನು ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು ಎಂದು ಟ್ಟೀಟ್ ಮಾಡಿದ್ದಾರೆ.

ಮಿಷನ್‌ ದಕ್ಷಿಣ್‌ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ ಹೈದರಾಬಾದ್​ನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ. ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ ಎಂದಿದ್ದಾರೆ.

ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಮತ್ತೆ ನಿಮ್ಮ ಅವಗಾಹನೆಗೆ ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ ಎಂದು ಹೇಳಿರುವ ಅವರ,  ಯಡಿಯೂರಪ್ಪ & ಸನ್ಸ್‌, ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ, ಅಶೋಕ್-ರವಿ, ವಿ.ಸೋಮಣ್ಣ-ಅರುಣ್‌ ಸೋಮಣ್ಣ, ಅರವಿಂದ ಲಿಂಬಾವಳಿ-ರಘು, ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌, ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್, ಮುರುಗೇಶ ನಿರಾಣಿ-ಹನುಮಂತ ನಿರಾಣಿ, ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್, ಜಾರಕಿಹೊಳಿ ಕುಟುಂಬ, ಕತ್ತಿ ಕುಟುಂಬ, ಜೊಲ್ಲೆ ಕುಟುಂಬ, ಅಂಗಡಿ ಕುಟುಂಬ, ಉದಾಸಿ ಕುಟುಂಬ, ಶ್ರೀರಾಮುಲು ಕುಟುಂಬ, ರೆಡ್ಡಿ ಬ್ರದರ್ಸ್‌ ಎಂದು ಉದ್ದನೆ ಪಟ್ಟಿಯೊಂದನ್ನು ಕೊಟ್ಟಿದ್ದಾರೆ.

ಇದನ್ನೂ ಓದಿ: Ola Cost Cutting : ಮತ್ತೆ 500 ಸಿಬ್ಬಂದಿಯನ್ನು ವಜಾಗೊಳಿಸಲು ಮುಂದಾದ ಓಲಾ