AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್ ಗೌಡ ಕೊಲೆ ಕೇಸ್​​ನಲ್ಲಿ ವಿನಯ್​​ ಕುಲಕರ್ಣಿಗೆ ಸುಪ್ರೀಂ ಶಾಕ್​​: ಕಾಂಗ್ರೆಸ್​​ ನಾಯಕನ ಎದುರಿರುವ ಆಯ್ಕೆಗಳೇನು?

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಪಡಿಸಿ ಎರಡು ವಾರಗಳಲ್ಲಿ ಶರಣಾಗುವಂತೆ ಸೂಚಿಸಿದ ಪರಿಣಾಮ ಅವರ ಶಾಸಕ ಸ್ಥಾನವೂ ಅತಂತ್ರವಾಗಿದೆ. ಆದರೆ ಹೈಕೋರ್ಟ್​​ನಲ್ಲಿ ವಿನಯ್ ಕುಲಕರ್ಣಿ ಮೇಲ್ಮನವಿ ವಿಚಾರಣೆ ಬಾಕಿಯಿದ್ದು, ಅದರ ತುರ್ತು ವಿಚಾರಣೆಗೆ ಅಲ್ಲೇ ಅವರು ಮನವಿ ಮಾಡಬಹುದಾದ ಅವಕಾಶವಿದೆ.

ಯೋಗೀಶ್ ಗೌಡ ಕೊಲೆ ಕೇಸ್​​ನಲ್ಲಿ ವಿನಯ್​​ ಕುಲಕರ್ಣಿಗೆ ಸುಪ್ರೀಂ ಶಾಕ್​​: ಕಾಂಗ್ರೆಸ್​​ ನಾಯಕನ ಎದುರಿರುವ ಆಯ್ಕೆಗಳೇನು?
ವಿನಯ್​​ ಕುಲಕರ್ಣಿImage Credit source: Vinay Kulkarni Facebook Page
ರಮೇಶ್​ ಎಮ್​.
| Edited By: |

Updated on:Nov 25, 2026 | 12:00 PM

Share

ಬೆಂಗಳೂರು, ನವೆಂಬರ್​​ 25: ಧಾರಾವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್​​ನಲ್ಲಿ ದೊಡ್ಡ ಹಿನ್ನಡೆಯಾಗಿದೆ. ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, ಮುಂದಿನ ಎರಡು ವಾರಗಳೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿದೆ. ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠದಿಂದ ಈ ಆದೇಶ ಹೊರಬಿದ್ದಿದೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ವಿಚಾರಣೆ ನಡೆಸಿ ಸೆಷನ್ಸ್ ಕೋರ್ಟ್‌ನ ಆದೇಶಕ್ಕೆ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೀಶ್ ಗೌಡ ಸಹೋದರ ಗುರುನಾಥ್ ಗೌಡರ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದೆ.

ಇದನ್ನೂ ಓದಿ: ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ರದ್ದು; 2 ವಾರಗಳಲ್ಲಿ ಶರಣಾಗಲು ಸುಪ್ರೀಂಕೋರ್ಟ್​ ಸೂಚನೆ

ಶಾಸಕ ಸ್ಥಾನ ಅತಂತ್ರ

ಜಾಮೀನು ರದ್ದಾದ ಕಾರಣ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಅಲ್ಲದೆ, ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆಗಳೂ ಹೆಚ್ಚಾಗಿವೆ. ಯಾವುದೇ ಜನಪ್ರತಿನಿಧಿಗೆ ಎರಡು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ವಿಧಿಸಿದರೆ, ಅವರು ಶಾಸಕ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. ಪ್ರಸ್ತುತ, ಅವರ ಜೀವಾವಧಿ ಶಿಕ್ಷೆಗೆ ನೀಡಲಾಗಿದ್ದ ತಡೆ ಈಗ ತೆರವಾಗಿದೆ. ಇದರಿಂದಾಗಿ, ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಅತಂತ್ರವಾಗಿದೆ.

ಹೈಕೋರ್ಟ್​​ನಲ್ಲಿ ಮೇಲ್ಮನವಿ ವಿಚಾರಣೆ ಬಾಕಿ

ಮತ್ತೊಂದೆಡೆ ವಿನಯ್ ಕುಲಕರ್ಣಿಗೆ ಸದ್ಯಕ್ಕೆ ಸುಪ್ರೀಂ ಕೋರ್ಟ್ ಬಾಗಿಲು ಬಂದ್ ಆಗಿದ್ದು, ಮರುಪರಿಶೀಲನೆ ಅರ್ಜಿ ಸಲ್ಲಿಸಬಹುದಾದರೂ ಪರಿಗಣನೆ ಸಾಧ್ಯತೆ ಇಲ್ಲ. ಹೈಕೋರ್ಟ್​​ನಲ್ಲಿ ವಿನಯ್ ಕುಲಕರ್ಣಿ ಮೇಲ್ಮನವಿ ವಿಚಾರಣೆ ಬಾಕಿಯಿದೆ. ಹೀಗಾಗಿ ತುರ್ತು ವಿಚಾರಣೆಗೆ ಅಲ್ಲೇ ಮನವಿ ಮಾಡಬಹುದು. ಹೈಕೋರ್ಟ್ ಶೀಘ್ರ ವಿಚಾರಣೆ ನಡೆಸಿ ತೀರ್ಪು ನೀಡಿ, ಖುಲಾಸೆಗೊಳಿಸಿದರೆ ವಿನಯ್ ಕುಲಕರ್ಣಿಗೆ ರಿಲೀಫ್ ಸಿಗಲಿದೆ. ಒಂದೊಮ್ಮೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ಎತ್ತಿ ಹಿಡಿದರೆ ಸಂಕಷ್ಟ ಎದುರಾಗಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:57 am, Wed, 25 November 26

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ
ಹಿರಿಯೂರು ಬೈ ಎಲೆಕ್ಷನ್ ಟಿಕೆಟ್ ಫೈಟ್:ನಿಲುವು ಪ್ರಕಟಿಸಿದ ಹೆಚ್​​ಡಿಕೆ
ಹಿರಿಯೂರು ಬೈ ಎಲೆಕ್ಷನ್ ಟಿಕೆಟ್ ಫೈಟ್:ನಿಲುವು ಪ್ರಕಟಿಸಿದ ಹೆಚ್​​ಡಿಕೆ
ಹಾಸನ ಪೊಲೀಸ್ ನೋಟಿಸ್​​​ಗೆ ಕುಮಾರಸ್ವಾಮಿ ಕೆಂಡಾಮಂಡಲ
ಹಾಸನ ಪೊಲೀಸ್ ನೋಟಿಸ್​​​ಗೆ ಕುಮಾರಸ್ವಾಮಿ ಕೆಂಡಾಮಂಡಲ