ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ

ಸ್ನೇಹಿತನ ಫೋನ್ ನಂಬರ್ ಬರೆದಿಟ್ಟು, ತಾನು ವಾಸವಿದ್ದ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್ ಆರ್ ನಗರದ ಹಲಗೇವಡೆರಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ
ಮೃತ ಯುವಕ ಮದನ್​
Follow us
Shivaprasad
| Updated By: ವಿವೇಕ ಬಿರಾದಾರ

Updated on:Nov 12, 2023 | 8:47 AM

ಬೆಂಗಳೂರು ನ.12: ಸ್ನೇಹಿತನ ಫೋನ್ ನಂಬರ್ ಬರೆದಿಟ್ಟು, ತಾನು ವಾಸವಿದ್ದ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್ ಆರ್ ನಗರದ (RR Nagar) ಹಲಗೇವಡೆರಹಳ್ಳಿಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಆರ್ ಆರ್ ನಗರ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗ (Shivamogga) ಮೂಲದ ಮದನ್ ಶೆಟ್ಟಿ (25) ಮೃತ ಯುವಕ. ಯುವಕ ಮದನ್ ಮಲ್ಲೇಶ್ವರಂ ಅರಣ್ಯ ಭವನ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಮದನ್​​ ನಾಲ್ಕು ಅಂತಸ್ತಿನ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದನು. ಈತನ ಜೊತೆ ತೇಜು ಹಾಗೂ ಇನ್ನೊಬ್ಬ ಸ್ನೇಹಿತ ಬಾಡಿಗೆಗೆ ಇದ್ದರು.

ಸ್ನೇಹಿತರ ನಡುವೆ ಗಲಾಟೆ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಂಟಂ ವಾಹನ ಪಲ್ಟಿಯಾಗಿ ಯುವಕ ಸ್ಥಳದಲ್ಲೇ ಮೃತ

ಮೈಸೂರು: ಟಂಟಂ ವಾಹನ ಪಲ್ಟಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ತಾಲೂಕಿನ ಮೇಗಳಾಪುರ ಗ್ರಾಮದ ಬಳಿ ನಡೆದಿದೆ. ದರ್ಶನ ಎಂಬುವರು ಮೃತಪಟ್ಟಿದ್ದಾರೆ. 10 ಯುವಕರಿಗೆ ಗಂಭೀರ ಗಾಯಗಳಾಗಿವೆ. ಯುವಕರು ಟಂಟಂ ವಾಹನದಲ್ಲಿ ಮಲೈಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಟಂಟಂ ವಾಹನ ಪಲ್ಟಿಯಾಗಿದೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರುಣಾ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 am, Sun, 12 November 23