AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪಾರ್ಟ್ಮೆಂಟ್​ನ ಎರಡನೇ ಮಹಡಿಯಿಂದ ಬಿದ್ದು ಯುವತಿ ಸಾವು

ಅಪಾರ್ಟ್ಮೆಂಟ್​ವೊಂದರ ಎರಡನೇ ಮಹಡಿಯಿಂದ ಬಿದ್ದು ಯುವತಿ ಮೃತಪಟ್ಟಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಯುವತಿ ಆರ್​ಟಿಓ ಜಂಟಿ ಆಯುಕ್ತೆ ಶೋಭಾ ಅವರ ಪುತ್ರಿ ಎಂದು ತಿಳಿದುಬಂದಿದೆ.

ಬೆಂಗಳೂರು: ಅಪಾರ್ಟ್ಮೆಂಟ್​ನ ಎರಡನೇ ಮಹಡಿಯಿಂದ ಬಿದ್ದು ಯುವತಿ ಸಾವು
ಸಾಂದರ್ಭಿಕ ಚಿತ್ರ
ಪ್ರಜ್ವಲ್ ಅಮೀನ್​, ಉಡುಪಿ
| Edited By: ವಿವೇಕ ಬಿರಾದಾರ|

Updated on:Oct 05, 2024 | 3:02 PM

Share

ಬೆಂಗಳೂರು, ಅಕ್ಟೋಬರ್​ 05: ಅಪಾರ್ಟ್ಮೆಂಟ್​ನ (Apartment) ಎರಡನೇ ಮಹಡಿಯಿಂದ ಬಿದ್ದು ಯುವತಿ ಮೃತಪಟ್ಟಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವತಿ ಆರ್​ಟಿಓ ಜಂಟಿ ಆಯುಕ್ತೆ ಶೋಭಾ ಅವರ ಪುತ್ರಿ ಎಂದು ತಿಳಿದು ಬಂದಿದೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ? ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷ ಸೇವಿಸಿ ರೈತ ಸಾವು

ಚಿಕ್ಕಮಗಳೂರು: ಕೆರೆ ಒತ್ತುವರಿ ತೆರವನ್ನು ವಿರೋಧಿಸಿ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ.ಆರ್.ಪೇಟೆ ಸಮೀಪದ ಕಂಚೇನಹಳ್ಳಿ ಗ್ರಾಮದ ರೈತ ಮಲ್ಲೇಶ್ (43) ಮೃತ ದುರ್ದೈವಿ. ಮೃತ ಮಲ್ಲೇಶ್​ ಒಂಬತ್ತು ಗುಂಟೆ ಕೆರೆ ಪ್ರದೇಶ ಒತ್ತುವರಿ ಮಾಡಿ ಕಾಫಿ ತೋಟ ಮಾಡಿದ್ದರು. ಮೂರು ದಿನಗಳ ಹಿಂದೆ ಅಧಿಕಾರಿಗಳು ಕೆರೆ ಒತ್ತುವರಿ ತೆರವುಗೊಳಿಸಿದ್ದರು.

ಈ ವೇಳೆ ಮಲ್ಲೇಶ್​ ಅಧಿಕಾರಿಗಳ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೆ ಮಲ್ಲೇಶ್​ರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಅ.05) ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಯಾವುದೇ ರೀತಿಯ ತನಿಖೆ ಮಾಡ್ಬೇಡಿ: ಡೆತ್​ನೋಟ್​ ಬರೆದಿಟ್ಟು ಯುವತಿ ಆತ್ಮಹತ್ಯೆ

ವಿದ್ಯುತ್​ ತಂತಿ ತಗುಲಿ ವ್ಯಕ್ತಿ ಸಾವು

ಯಾದಗಿರಿ: ಗುರುಮಠಕಲ್ ತಾಲೂಕಿನ ಯಲಸತ್ತಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಶರಣಪ್ಪ (35) ಎಂಬುವರು ಮೃತಪಟ್ಟಿದ್ದಾರೆ. ಜಮೀನಿಗೆ ನೀರು ಬಿಡಲು ಹೋದಾಗ ವಿದ್ಯುತ್ ತಂತಿ ತಗುಲಿ, ಸಾವನ್ನಪ್ಪಿದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ. ಬೈಕ್ ಸವಾರ ಶೇಷಾದ್ರಿ (23) ಮೃತ ದುರ್ದೈವಿ. ಅಪಘಾತದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಪೀಣ್ಯ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:55 pm, Sat, 5 October 24

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್