ಬೆಂಗಳೂರು, ಅಕ್ಟೋಬರ್ 05: ಅಪಾರ್ಟ್ಮೆಂಟ್ನ (Apartment) ಎರಡನೇ ಮಹಡಿಯಿಂದ ಬಿದ್ದು ಯುವತಿ ಮೃತಪಟ್ಟಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವತಿ ಆರ್ಟಿಓ ಜಂಟಿ ಆಯುಕ್ತೆ ಶೋಭಾ ಅವರ ಪುತ್ರಿ ಎಂದು ತಿಳಿದು ಬಂದಿದೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ? ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಕೆರೆ ಒತ್ತುವರಿ ತೆರವನ್ನು ವಿರೋಧಿಸಿ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆ.ಆರ್.ಪೇಟೆ ಸಮೀಪದ ಕಂಚೇನಹಳ್ಳಿ ಗ್ರಾಮದ ರೈತ ಮಲ್ಲೇಶ್ (43) ಮೃತ ದುರ್ದೈವಿ. ಮೃತ ಮಲ್ಲೇಶ್ ಒಂಬತ್ತು ಗುಂಟೆ ಕೆರೆ ಪ್ರದೇಶ ಒತ್ತುವರಿ ಮಾಡಿ ಕಾಫಿ ತೋಟ ಮಾಡಿದ್ದರು. ಮೂರು ದಿನಗಳ ಹಿಂದೆ ಅಧಿಕಾರಿಗಳು ಕೆರೆ ಒತ್ತುವರಿ ತೆರವುಗೊಳಿಸಿದ್ದರು.
ಈ ವೇಳೆ ಮಲ್ಲೇಶ್ ಅಧಿಕಾರಿಗಳ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೆ ಮಲ್ಲೇಶ್ರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಅ.05) ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಯಾವುದೇ ರೀತಿಯ ತನಿಖೆ ಮಾಡ್ಬೇಡಿ: ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ
ಯಾದಗಿರಿ: ಗುರುಮಠಕಲ್ ತಾಲೂಕಿನ ಯಲಸತ್ತಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಶರಣಪ್ಪ (35) ಎಂಬುವರು ಮೃತಪಟ್ಟಿದ್ದಾರೆ. ಜಮೀನಿಗೆ ನೀರು ಬಿಡಲು ಹೋದಾಗ ವಿದ್ಯುತ್ ತಂತಿ ತಗುಲಿ, ಸಾವನ್ನಪ್ಪಿದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ. ಬೈಕ್ ಸವಾರ ಶೇಷಾದ್ರಿ (23) ಮೃತ ದುರ್ದೈವಿ. ಅಪಘಾತದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಪೀಣ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:55 pm, Sat, 5 October 24