Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಅನುಚಿತ ವರ್ತನೆ, ಕೃತ್ಯದ ವಿಡಿಯೋ ವೈರಲ್

ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ಅಪರಿಚಿತ ವ್ಯಕ್ತಿ ಹಿಂದಿನಿಂದ ಬಂದು ಯುವತಿಯ ಖಾಸಗಿ ಅಂಗವನ್ನು ಸ್ಪರ್ಶಿಸಿದ್ದಾನೆ. ಸ್ಥಳೀಯ ನಿವಾಸಿ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಸಂಗ್ರಹಿಸಲಾಗುತ್ತಿದೆ. ಪ್ರದೇಶದ ನಿವಾಸಿಗಳು ಹೆಚ್ಚಿನ ಪೊಲೀಸ್ ಗಸ್ತು ಏರ್ಪಾಡು ಮಾಡುವಂತೆ ಒತ್ತಾಯಿಸಿದ್ದಾರೆ.

Follow us
ವಿವೇಕ ಬಿರಾದಾರ
|

Updated on:Apr 06, 2025 | 7:45 PM

ಬೆಂಗಳೂರು, ಏಪ್ರಿಲ್​ 06: ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ (Young Girl) ಹಿಂದಿನಿಂದ ಬಂದು ಯುವಕನೋರ್ವ ಖಾಸಗಿ ಅಂಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿರುವ ಘಟನೆ ಏಪ್ರಿಲ್​ 4ರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಗಳೂರಿನ (Bengaluru) ಸುದ್ದಗುಂಟೆಪಾಳ್ಯದಲ್ಲಿ ನಡೆದಿದೆ. ಕೃತ್ಯದ ಸಿಸಿಟಿವಿ ವಿಡಿಯೋ ಈಗ ವೈರಲ್​ ಆಗಿದೆ. ಸ್ಥಳೀಯ ನಿವಾಸಿ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯ ಕಾಯ್ದೆಯಡಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯ ಗುರುತಿಗಾಗಿ ಪೊಲೀಸರು ಏರಿಯಾದಲ್ಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೇ, ಏರಿಯಾದ ಜನರ ಬಳಿಯೂ ಮಾಹಿತಿ ಕಲೆಹಾಕುತ್ತಿದ್ದಾರೆ.

ಘಟನೆ ಬಗ್ಗೆ ಏರಿಯಾ ನಿವಾಸಿ ಮುನಿರಾಜು ಎಂಬುವರು ಮಾತನಾಡಿ, ನಮ್ಮ ಏರಿಯಾದಲ್ಲಿ ಈ ಹಿಂದೆ ಈ ರೀತಿ ಆಗಿರಲಿಲ್ಲ. ಈಗ ಆಗಿರುವುದು ನಮಗೆ ಬೇಸರ ತಂದಿದೆ. ಇಲ್ಲಿ ಪಿಜಿಗಳು ಹೆಚ್ಚಾಗಿವೆ, ಪೊಲೀಸರು ಬೀಟ್ ಜಾಸ್ತಿ ಮಾಡಬೇಕು. ಹುಡುಗಿಯರು ರಾತ್ರಿ ವೇಳೆ ಓಡಾಡಿದ್ದರು. ಹುಡುಗ ಆ ರೀತಿ ಮಾಡಬಾರದಿತ್ತು. ಕೃತ್ಯ ಎಸಗಿದ ವ್ಯಕ್ತಿ ಯಾರು ಅಂತ ಗೊತ್ತಾಗಿಲ್ಲ. ಇಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ
Image
ಗಂಡನ ಕೊಲೆಯನ್ನು ವಿಡಿಯೋ ಕಾಲ್​ನಲ್ಲಿ ನೋಡಿ ಆನಂದಪಟ್ಟ ಹೆಂಡ್ತಿ!
Image
ಬೆಂಗಳೂರು: ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ
Image
ಅತ್ಯಾಚಾರವೆಸಗಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಂದು ಮತ್ತೆ ಬಾಲಕಿಯ ಅಪಹರಿಸಿದ
Image
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್

ಮಹಿಳಾ ಇನ್​ಫ್ಲುಯೆನ್ಸರ್ ಒಬ್ಬರು ವ್ಲಾಗ್ ಮಾಡುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋದ ಘಟನೆ ಬಿಟಿಎಂ ಲೇಔಟ್​ನಲ್ಲಿ ನಡೆದಿತ್ತು. ಇದೀಗ ಅಂಥದ್ದೇ ಘಟನೆ ಮತ್ತೆ ನಗರದಲ್ಲಿ ಸಂಭವಿಸಿದೆ.

ಬೈಕ್​ನಲ್ಲಿ ಬಂದು ಯುವತಿಗೆ ಬ್ಯಾಡ್​ ಟಚ್​​

ಕೆಲ ದಿನಗಳ ಹಿಂದೆ ರಾಮಮೂರ್ತಿ ನಗರದಲ್ಲಿ ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬೈಕ್​ನಲ್ಲಿ ಬಂದ ಕಾಮುಕನೊಬ್ಬ ಬ್ಯಾಡ್ ಟಚ್ ಮಾಡಿದ ಘಟನೆ ನಡೆದಿತ್ತು. ಕೃತ್ಯದ ಸಿಸಿಟಿವಿ ವಿಡಿಯೋ ವೈರಲ್ ಆಗಿತ್ತು. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಘಟನೆ ನಡೆದಿತ್ತು.

ಇದನ್ನೂ ಓದಿ: ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್​ ಅತ್ಯಾಚಾರ: ಫೋನ್​ನಲ್ಲಿ ಹಲವು ಹುಡುಗಿಯರ ವಿಡಿಯೋ ಪತ್ತೆ

ಬೈಕ್ ಸವಾರ ಅರುಣ್ ಎಂಬಾತ ಅಸಭ್ಯ ವರ್ತನೆ ತೋರಿದ್ದು, ಈ ಬಗ್ಗೆ ರಾಮಮೂರ್ತಿ ನಗರ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಆರೋಪಿ ಅರುಣ್​ನನ್ನು ಪೊಲೀಸರು ಬಂಧಿಸಿದ್ದರು. ದೂರು ನೀಡಿದ ಎರಡೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವರದಿ: ಪ್ರದೀಪ್ ಚಿಕ್ಕಾಟಿ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 pm, Sun, 6 April 25

ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ